ಶಿವಮೊಗ್ಗ: ವಿಷ ಸೇವಿಸಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ದಾರುಣ ಘಟನೆ ಶಿವಮೊಗ್ಗ ನಗರದ ಓಟಿ ರಸ್ತೆಯಲ್ಲಿರುವ ಆಜಾದ್ ನಗರದಲ್ಲಿ ನಡೆದಿದೆ.
ಕಳೆದ ಎರಡು ದಿನಗಳ ಹಿಂದೆ ಭುವನೇಶ್ವರಿ(40) ಮತ್ತು ಆಕೆಯ ತಮ್ಮ ಮಾರುತಿ(38) ಹಾಗೂ ಮಗ ದರ್ಶನ(22) ಮೂವರು ಮೂವರು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಭುವನೇಶ್ವರಿ ಅವರ ಪತಿ ಕೆಲವು ವರ್ಷಗಳ ಹಿಂದೆ ಮೃತಪಟ್ಟಿದ್ದರು. ಭುವನೇಶ್ವರಿ ಹೊಟೇಲ್ ಕೆಲಸ ಮಾಡಿಕೊಂಡಿದ್ದರು. ಇಡೀ ಕುಟುಂಬದ ಜವಾಬ್ದಾರಿಯು ಈ ಮಹಿಳೆಯ ಮೇಲೆ ಇತ್ತು. ಮನೆಯಲ್ಲಿ ಟಿಬಿ ಕಾಯಿಲೆಯಿಂದ ಬಳಲುತ್ತಿದ್ದ ತಮ್ಮ ಮತ್ತು ವಯಸ್ಸಿಗೆ ಬಂದ ಮಗ ಇಬ್ಬರೂ ನೆಟ್ಟಿಗೆ ದುಡಿಯುತ್ತಿರಲಿಲ್ಲ. ಈ ಇಬ್ಬರು ದುಡಿಯದೇ ಇರುವುದು ದೊಡ್ಡ ಸಮಸ್ಯೆಯಾಗಿತ್ತು.
ಎಷ್ಟೇ ಹೇಳಿದರೂ ಇಬ್ಬರು ಯಾವುದೇ ಜವಾಬ್ದಾರಿ ತೆಗೆದುಕೊಳ್ಳಲಿಲ್ಲ. ಇದರಿಂದ ರೋಸಿ ಹೋಗಿದ್ದ ಭುವನೇಶ್ವರಿ ಆಗಸ್ಟ್ 11 ರಂದು ರಾತ್ರಿ ಇಬ್ಬರಿಗೂ ಊಟದಲ್ಲಿ ವಿಷ ಕೊಟ್ಟು ಕೊಂದಿದ್ದಾಳೆ. ಬಳಿಕ ತಾನು ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಮನೆ ಒಳಗಡೆಯಿಂದ ಲಾಕ್ ಆಗಿತ್ತು. ಅಕ್ಕ-ಪಕ್ಕದವರಿಗೆ ಶವದ ದುರ್ವಾಸನೆ ಬರುವುದಕ್ಕೆ ಶುರುವಾಗಿದೆ. ಬಳಿಕ ಕಿಟಕಿ ಗಾಜು ಒಡೆದು ನೋಡಿದಾಗ ಮೂವರು ಮೃತಪಟ್ಟಿರುವ ಸಂಗತಿ ಬೆಳಕಿಗೆ ಬಂದಿದೆ. ಈ ಮೂವರು ಸಾವು ಕಂಡು ಕುಟುಂಬಸ್ಥರಿಗೆ ದೊಡ್ಡ ಆಘಾತವಾಗಿದ್ದು, ಸಂಬಂಧಿಗಳ ಅಕ್ರಂದನ ಮುಗಿಲು ಮುಟ್ಟಿದೆ.
ಇನ್ನು ಮೂವರು ಆತ್ಮಹತ್ಯೆ ಮಾಡಿಕೊಂಡಿರುವ ಸಂಗತಿ ತಿಳಿಯುತ್ತಿದ್ದಂತೆ ದೊಡ್ಡಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವಿಧಿವಿಜ್ಞಾನ ಪ್ರಯೋಗಾಲಯದ ತಂಡವು ಸ್ಥಳಕ್ಕೆ ಭೇಟಿ ನೀಡಿ ಮೂವರ ಸಾವಿನ ಕುರಿತು ಮಾಹಿತಿ ಕಲೆಹಾಕಿದೆ.
Advertisement