Muda scam: ಖಾಸಗಿ ದೂರಿನ ವಿರುದ್ಧ ಆಲಂ ಪಾಷಾ ಸಲ್ಲಿಸಿದ್ದ ಮಧ್ಯಂತರ ಅರ್ಜಿ ವಜಾ

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರPTI
Updated on

ಬೆಂಗಳೂರು: ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ದಾಖಲಾಗಿರುವ ಖಾಸಗಿ ದೂರಿನ ಅರ್ಜಿಯನ್ನು ವಿಚಾರಣೆಗೆ ಸ್ವೀಕರಿಸದಂತೆ ಕೋರಿ ಆಲಂ ಪಾಷಾ ಎಂಬುವವರು ಸಲ್ಲಿಸಿದ್ದ ಮಧ್ಯಂತರ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾಗೊಳಿಸಿದೆ.

ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ವಿರುದ್ದ ಸ್ನೇಹಮಯಿ ಕೃಷ್ಣ ಸಲ್ಲಿಸಿರುವ ಖಾಸಗಿ ದೂರಿನ ಕುರಿತು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಸ್ನೇಹಮಯಿ ಕೃಷ್ಣ ಪರ ವಾದ ಮಂಡಿಸಿದ ಹಿರಿಯ ವಕೀಲ ಲಕ್ಷ್ಮೀ ಅಯ್ಯಂಗಾರ್ ಅವರು, ಆಲಂ ಪಾಷಾ ಸಲ್ಲಿಸಿದ್ದ ಅರ್ಜಿಗೆ ಆಕ್ಷೇಪ ವ್ಯಕ್ತಪಡಿಸಿದರು. ನ್ಯಾಯಾಲಯದ ಸಮಯವನ್ನು ವ್ಯರ್ಥ ಮಾಡುವ ಅರ್ಜಿಯನ್ನು ವಜಾಗೊಳಿಸಬೇಕು ಎಂದು ವಾದಿಸಿದರು.

ಆಲಂ ಪಾಷಾ ವಾದಕ್ಕೆ ಜಡ್ಜ್ ಸಂತೋಷ ಗಜಾನನ ಭಟ್ ಅಸಮಾಧಾನ ವ್ಯಕ್ತಪಡಿಸಿದ್ದು, ಅರ್ಜಿದಾರ ಆಲಂಪಾಷ ದೂರು ದಾಖಲಿಸಲು ಅನುಮತಿ ಕೇಳುತ್ತಿಲ್ಲ. ಬದಲಿಗೆ ಕಾನೂನಿನ ಪ್ರಕ್ರಿಯೆ ತಡೆಹಿಡಿಯಲು ಕೋರುತ್ತಿದ್ದಾರೆ ಹೀಗಾಗಿ ಆಲಂಪಾಷ ಅರ್ಜಿ ವಜಾ ಗೊಳಿಸಲು ಅರ್ಹ ಎಂದು ಆದೇಶಿಸಿದರು.

ಸಂಗ್ರಹ ಚಿತ್ರ
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧದ ಅರ್ಜಿ ವಿಚಾರಣೆ ಮುಂದೂಡಿದ ನ್ಯಾಯಾಲಯ

ಅಲ್ಲದೆ ಅರ್ಜಿದಾರ ಆಲಂ ಪಾಷಾ ವಿರುದ್ದ ಗರಂ ಆದ ನ್ಯಾಯಮೂರ್ತಿಗಳು ಯಾವ ಕಾನೂನಿನಡಿ ನೀವು ಅರ್ಜಿ ಸಲ್ಲಿಸಿದ್ದೀರಿ? ಎಂದು ಪ್ರಶ್ನಿಸಿದರು. ಈ ವೇಳೆ ಸಾರ್ವಜನಿಕರ ಹಿತಾಸಕ್ತಿಯಿಂದ ಅರ್ಜಿ ಸಲ್ಲಿಸಿರುವುದಾಗಿ ಆಲಂಪಾಷಾ ವಾದಿಸಿದರು. ಪಾಷಾ ವಾದಕ್ಕೆ ಸ್ನೇಹಮಯಿ ಕೃಷ್ಣ ಪರ ಲಕ್ಷ್ಮಿ ಅಯ್ಯಂಗರ್ ಆಕ್ಷೇಪ ವ್ಯಕ್ತಪಡಿಸಿ, ಈ ಹಂತದಲ್ಲಿ ಸಂಬಂಧವಿಲ್ಲದ ವ್ಯಕ್ತಿ ವಾದ ಆಲಿಸಬಾರದು ಕೋರ್ಟ್ ಸಮಯ ವ್ಯರ್ಥ ಮಾಡಿಸಿದ್ದಕ್ಕೆ ದಂಡ ವಿಧಿಸಬೇಕು ಎಂದು ವಾದಿಸಿದರು.

ವಾದವನ್ನು ಆಲಿಸಿದ ನ್ಯಾಯಾಲಯವು ಕೃಷ್ಣ ಅವರ ಅರ್ಜಿಗೆ ಸಂಬಂಧಿಸಿದ ವಿಚಾರಣೆಯನ್ನು ಆಗಸ್ಟ್ 20ಕ್ಕೆ ಮತ್ತು ಅಬ್ರಹಾಂ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆಯನ್ನು ಆಗಸ್ಟ್ 21 ಕ್ಕೆ ಮುಂದೂಡಿತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com