ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಕರೆ: ಆತಂಕ ಸೃಷ್ಟಿಸಿ ಮತ್ತೆ ಕ್ಷಮೆಯಾಚಿಸಿದ ವ್ಯಕ್ತಿ, ಪ್ರಕರಣ ದಾಖಲು

ಬೆದರಿಗೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ನಾನ್ ಕಾಗ್ನೈಸಬಲ್ ವರದಿ (ಎನ್‌ಸಿಆರ್) ದಾಖಲಿಸಿದ್ದು, ಆತನ ಬಂಧನಕ್ಕೆ ಪೊಲೀಸರು ಹೈದರಾಬಾದ್'ಗೆ ತೆರಳಲಿದ್ದಾರೆಂದು ಮೂಲಗಳು ತಿಳಿಸಿವೆ.
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
Updated on

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ (ಕೆಐಎ) ಸಿಬ್ಬಂದಿಯೊಬ್ಬರಿಗೆ ಹೈದರಾಬಾದ್‌ನಿಂದ ಕರೆ ಮಾಡಿ, ಆತಂಕ ಸೃಷ್ಟಿಸಿದ್ದ ವ್ಯಕ್ತಿಯೊಬ್ಬ ಮತ್ತೆ ಕರೆ ಮಾಡಿ ಕ್ಷಮೆಯಾಚಿಸಿರುವ ಘಟನೆ ಸೋಮವಾರ ಸಂಜೆ ನಡೆದಿದೆ.

ಬೆದರಿಗೆ ಕರೆ ಮಾಡಿದ ವ್ಯಕ್ತಿಯ ವಿರುದ್ಧ ನಾನ್ ಕಾಗ್ನೈಸಬಲ್ ವರದಿ (ಎನ್‌ಸಿಆರ್) ದಾಖಲಿಸಿದ್ದು, ಆತನ ಬಂಧನಕ್ಕೆ ಪೊಲೀಸರು ಹೈದರಾಬಾದ್'ಗೆ ತೆರಳಲಿದ್ದಾರೆಂದು ಮೂಲಗಳು ತಿಳಿಸಿವೆ.

ಬೆಂಗಳೂರು ಮತ್ತು ಚೆನ್ನೈ ವಿಮಾನ ನಿಲ್ದಾಣಗಳಲ್ಲಿ ಬಾಂಬ್ ಇರಿಸಿರುವ ಬಗ್ಗೆ ಸೋಮವಾರ ಸಂಜೆ 6.30 ರ ಸುಮಾರಿಗೆ ಅನಾಮಧೇಯ ವ್ಯಕ್ತಿಯೊಬ್ಬನಿಂದ ದೂರವಾಣಿ ಕರೆ ಬಂದಿತ್ತು. ಕೆಲ ಸಮಯದ ಬಳಿಕ ಅದೇ ಸಂಖ್ಯೆಗೆ ಮತ್ತೆ ಕರೆ ಮಾಡಿದ ವ್ಯಕ್ತಿ, ಕ್ಷಮೆಯಾಚಿಸಿದ. ಮದ್ಯಪಾನ ಮಾಡಿದ್ದು, ತಪ್ಪಾಗಿ ಕರೆ ಮಾಡಿರುವುದಾಗಿ ತಿಳಿಸಿದ್ದರು ಎಂದು ವಿಮಾನ ನಿಲ್ದಾಣದ ಸಿಬ್ಬಂದಿಗಳು ಮಾಹಿತಿ ನೀಡಿದ್ದಾರೆ.

ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ
ಕಲಬುರಗಿ: ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ!

ಎರಡು ಕರೆಗಳ ನಂತರ, ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಮೌಲ್ಯಮಾಪನ ಸಮಿತಿ ತುರ್ತು ಸಭೆ ನಡೆಸಿತು. ದೂರವಾಣಿ ಕರೆಯಲ್ಲಿ ವ್ಯಕ್ತಿಯು ಟರ್ಮಿನಲ್, ವಿಮಾನ ಅಥವಾ ಯಾವುದೇ ನಿರ್ದಿಷ್ಟ ಸ್ಥಳದ ಕುರಿತು ಮಾತನಾಡಲಿಲ್ಲ. ಹೀಗಾಗಿ ಇದು ನಕಲಿ ಎಂಬುದಾಗಿ ನಿರ್ಣಯಕ್ಕೆ ಬರಲಾಗಿತ್ತು. ಹೀಗಾಗಿ ವಿಮಾನ ನಿಲದಾಣದಲ್ಲಿ ಯಾವುದೇ ರೀತಿಯ ಕಾರ್ಯಾಚರಣೆಗೆ ಅಡ್ಡಿಗಳಾಗಿಲ್ಲ. ದೂರವಾಣಿ ಕರೆಯು ಹೈದರಾಬಾದ್ ನಿಂದ ಬಂದಿದ್ದು, ಕರೆ ಮಾಡಿದ ವ್ಯಕ್ತಿಯ ಹೆಸರು ರೆಡ್ಡಿ ಎಂದು ತಿಳಿದುಬಂದಿದೆ. ಈ ಹೆಸರು ನಕಲಿಯೂ ಆಗಿರಬಹುದು. ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಈ ನಡುವೆ ಪುಟ್ಟೇನಹಳ್ಳಿಯ ಖಾಸಗಿ ಕಂಪನಿಯೊಂದಕ್ಕೂ ಮಂಗಳವಾರ ಬಾಂಬ್ ಬೆದರಿಕೆ ಇಮೇಲ್ ಬಂದಿದ್ದು, ಪೊಲೀಸರು ಆವರಣವನ್ನು ಪರಿಶೀಲಿಸಿದ ನಂತರ ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಘೋಷಿಸಿದರು.

ಮಧ್ಯಾಹ್ನ 1 ಗಂಟೆ ಸುಮಾರಿಗೆ ಬ್ರಾಡ್‌ಕಾಮ್‌ನ ಮ್ಯಾನೇಜ್‌ಮೆಂಟ್‌ಗೆ ಅನಾಮಧೇಯ ಇಮೇಲ್ ಬಂದಿದ್ದು, ಅದರಲ್ಲಿ ಕಛೇರಿ ಆವರಣದಲ್ಲಿ ಸ್ಫೋಟಕ ವಸ್ತುಗಳನ್ನು ಇಡಲಾಗಿದೆ ಎಂದು ತಿಳಿಸಲಾಗಿದೆ. ವಿಚಾರ ತಿಳಿದ ಪೊಲೀಸರು ಕೂಡಲೇ ಸ್ಥಳಕ್ಕೆ ಧಾವಿಸಿ, ಬಾಂಬ್ ಮತ್ತು ಸ್ನಿಫರ್ ಸ್ಕ್ವಾಡ್‌ಗಳೊಂದಿಗೆ ಪರಿಶೀಲನೆ ನಡೆಸಿದರು, ಆದರೆ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಈ ಸಂಬಂಧ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com