ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳ ಮಾನದಂಡವನ್ನು ಪರಿಷ್ಕರಿಸುವ ಬಗ್ಗೆ ಚರ್ಚೆ ನಡೆದಿದೆ. ಯೋಜನೆಗಳ ಬಗ್ಗೆ ಸರ್ಕಾರದಲ್ಲಿಯೇ ಹಲವು ಅಭಿಪ್ರಾಯಗಳು ವ್ಯಕ್ತವಾಗತೊಡಗಿದ್ದು, ಯೋಜನೆಗಳ ಮುಂದುವರಿಕೆ ಬಗ್ಗೆ ಗೊಂದಲಗಳನ್ನು ಸೃಷ್ಟಿಸಿವೆ. ನೆನ್ನೆ ಹೈಕಮಾಂಡ್ ನಾಯಕರನ್ನು ಪ್ರತ್ಯೇಕವಾಗಿ ಭೇಟಿ ಮಾಡಿರುವ ಸತೀಶ್ ಜಾರಕಿಹೊಳಿ ಮತ್ತು ಕೆಹೆಚ್ ಮುನಿಯಪ್ಪ, ಗ್ಯಾರೆಂಟಿ ಯೋಜನೆಗಳ ಸ್ವರೂಪ ಪರಿಷ್ಕರಿಸುವಂತೆ ಮನವಿ ಮಾಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೃಹ ಸಚಿವ ಡಾ.ಜಿ ಪರಮೇಶ್ವರ್, ಯೋಜನೆಗಳ ಪರಿಷ್ಕರಣೆ ಬಗ್ಗೆ ಸರ್ಕಾರದ ಹಂತದಲ್ಲಿ ಚರ್ಚೆಯಾಗಿಲ್ಲ ಎಂದು ಹೇಳಿದ್ದಾರೆ. ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳ 'ದುರಪಯೋಗ' ಕುರಿತ ದೂರುಗಳು ಕೇಳಿಬಂದಿದ್ದು, ಅವುಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕಾಂಗ್ರೆಸ್ ಗೆ ಘೋಷಣೆ ಮಾಡಿರುವ ಯೋಜನೆಗಳನ್ನು ಜನಸಾಮಾನ್ಯರಿಗೆ ವಿತರಿಸಲು ಆಗುತ್ತಿಲ್ಲ. ಗ್ಯಾರೆಂಟಿ ಯೋಜನೆಗಳಿಗೆ ಬೇಕಾದ ಹಣವನ್ನು ಹೊಂದಿಸಿ ನಿರ್ವಹಿಸಲು ಆಗುತ್ತಿಲ್ಲ ಈ ಹಿನ್ನೆಲೆಯಲ್ಲಿ ಗ್ಯಾರೆಂಟಿ ಯೋಜನೆಗಳನ್ನು ಸಂಪೂರ್ಣವಾಗಿ ನಿಲ್ಲಿಸಿದರೂ ಆಶ್ಚರ್ಯಪಡಬೇಕಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಟೀಕಿಸಿದ್ದಾರೆ.
78ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವಾಲಯ ಕೊಡಮಾಡುವ ವಿಶಿಷ್ಟ ಸೇವಾ ಪದಕ ಹಾಗೂ ಸಾರ್ಥಕ ಸೇವಾ ಪದಕಕ್ಕೆ ರಾಜ್ಯದ 20 ಪೊಲೀಸ್ ಅಧಿಕಾರಿಗಳು ಭಾಜನರಾಗಿದ್ದಾರೆ. ಈ ಪೈಕಿ ಇಬ್ಬರು ಅಧಿಕಾರಿಗಳಿಗೆ ರಾಷ್ಟ್ರಪತಿಗಳ ಅತ್ಯುತ್ತಮ ಸೇವಾ ಪದಕ ಘೋಷಣೆಯಾಗಿದೆ. ಐಎಸ್‌ಡಿ ಎಡಿಜಿಪಿ ಎಂ. ಚಂದ್ರಶೇಖರ್ ಹಾಗೂ ಅಗ್ನಿಶಾಮಕ ದಳದ ಸೀನಿಯರ್ ಕಮಾಂಡರ್ ಬಸವಲಿಂಗಪ್ಪ ಅವರಿಗೆ ಅತ್ಯುತ್ತಮ ಸೇವಾ ಪದಕ ಘೋಷಿಸಲಾಗಿದೆ. ಅಧಿಕಾರಿಗಳು ಪೊಲೀಸ್ ಇಲಾಖೆಯಲ್ಲಿ ಸಲ್ಲಿಸಿದ ಗಣನೀಯ ಸೇವೆಯನ್ನು ಪರಿಗಣಿಸಿ ಪದಕ ಘೋಷಣೆ ಮಾಡಲಾಗಿದ್ದು, ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆಯಂದು ಪದಕ ಪ್ರದಾನ ಮಾಡಲಾಗುತ್ತದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ನಟ ದರ್ಶನ್ ತೂಗುದೀಪ್ ಪವಿತ್ರಾ ಗೌಡ ಸೇರಿ ಎಲ್ಲಾ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿಯನ್ನು ಆಗಸ್ಟ್ 28 ರವರೆಗೆ ವಿಸ್ತರಿಸಿ 24ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ. ಆರೋಪಿಗಳನ್ನು ವಿಡಿಯೋ ಕಾನ್ಫರೆನ್ಸ್ ಮೂಲಕ ಜಡ್ಜ್ ಮುಂದೆ ಆರೋಪಿಗಳನ್ನು ಹಾಜರುಪಡಿಸಲಾಗಿತ್ತು. ಇನ್ನು ಕನ್ನಡ ಚಿತ್ರರಂಗ ಎದುರಿಸುತ್ತಿರುವ ಸಂಕಷ್ಟ ನಿವಾರಣೆಗೆ ಕನ್ನಡ ಚಲನಚಿತ್ರ ಕಲಾವಿದರ ಸಂಘದ ಕಚೇರಿಯಲ್ಲಿ ಹೋಮ ಹವನ ನಡೆಸಲಾಯಿತು. ಕಾರ್ಯಕ್ರಮದಲ್ಲಿ ಜಗ್ಗೇಶ್, ಸುಮಲತಾ, ಗುರುಕಿರಣ್ ಸೇರಿದಂತೆ ಹಲವು ಕಲಾವಿದರು, ಭಾಗಿಯಾಗಿದ್ದರು.
ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ದೆಹಲಿಗೆ ತೆರಳಲಿದ್ದಾರೆ. ಆಯ್ಕೆಯಾಗಿರುವ ಅಧ್ಯಕ್ಷರನ್ನು ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ.
ತುಂಗಭದ್ರಾ ಜಲಾಶಯದ 19ನೇ ಕ್ರಸ್ಟ್ ಗೇಟ್ ಕೊಚ್ಚಿ ಹೋಗಿದ್ದು, ದುರಸ್ತಿ ಕಾಮಗಾರಿಗೆ ಇಂದು ಚಾಲನೆ ನೀಡಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಪೂಜೆ ನೆರವೇರಿಸುವ ಮೂಲಕ ಕಾಮಗಾರಿಗೆ ಚಾಲನೆ ನೀಡಿದರು. ಕ್ರಸ್ಟ್ ಗೇಟ್ ರಿಪೇರಿ ಮಾಡಲು ಡ್ಯಾನಲ್ಲಿನ ನೀರನ್ನು ಹಂತಹಂತವಾಗಿ ಖಾಲಿ ಮಾಡಲು ಸಿಬ್ಬಂದಿ ಮಾಡುತ್ತಿದ್ದಾರೆ. ಡ್ಯಾಂ ನೀರನ್ನು ನದಿಗೆ ಹರಿಸಲಾಗುತ್ತಿದೆ. ಯಾರೂ ಕೂಡ ನದಿ ಪಾತ್ರಕ್ಕೆ ಹೋಗದಂತೆ ಸೂಚನೆ ನೀಡಲಾಗಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಮೂಲದ ಯುವಕನೊಬ್ಬ ಪೊಲೀಸರ ಮೇಲಿನ ಕೋಪಕ್ಕೆ ವಿಧಾನಸೌಧದ ಮುಂದೆಯೇ ತನ್ನ ಎಲೆಕ್ಟ್ರಿಕ್ ಬೈಕ್ ಬೆಂಕಿ ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಬುಧವಾರ ನಡೆದಿದೆ. ಚಳ್ಳಕೆರೆ ಮೂಲದ ಪೃಥ್ವಿರಾಜ್ ಎಂಬ ಯುವಕ ಈ ಕೃತ್ಯ ಎಸಗಿದ್ದು ಬೈಕ್ ಸಂಪೂರ್ಣ ಹೊತ್ತಿ ಉರಿದಿದೆ. ಯುವಕನನ್ನು ವಿಧಾನಸೌಧ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.
ಇತ್ತೀಚಿಗೆ ಟ್ರಕ್ಕಿಂಗ್ ಹೋಗಿದ್ದ ಪೃಥ್ವಿರಾಜ್ ನಾಪತ್ತೆಯಾಗಿದ್ದ ಹಿನ್ನೆಲೆಯಲ್ಲಿ ಆತನ ತಾಯಿ ಚಳ್ಳಕೆರೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಪೃಥ್ವಿ ತಾಯಿಯನ್ನ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು, ಇದರಿಂದ ಯುವಕ ಆಕ್ರೋಶಗೊಂಡಿದ್ದ ಎಂಬ ಆರೋಪ ಕೇಳಿಬಂದಿದೆ.
ಸ್ವಾತಂತ್ರ್ಯ ದಿನೋತ್ಸವದ ಅಂಗವಾಗಿ ನವದೆಹಲಿಯ ಕೆಂಪುಕೋಟೆಯಲ್ಲಿ ನಡೆಯಲಿರುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕರ್ನಾಟಕದ ಗ್ರಾಮ ಪಂಚಾಯತಿಗಳ ಆರು ಮಂದಿ ಮಹಿಳಾ ಅಧ್ಯಕ್ಷರು ವಿಶೇಷ ಆಹ್ವಾನಿತರಾಗಿ ದೆಹಲಿಗೆ ತೆರಳಲಿದ್ದಾರೆ. ಆಯ್ಕೆಯಾಗಿರುವ ಅಧ್ಯಕ್ಷರನ್ನು ಇಲಾಖೆಯ ಸಚಿವ ಪ್ರಿಯಾಂಕ್ ಖರ್ಗೆ ಅಭಿನಂದಿಸಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಟಿ.ಕೆ.ರಮೇಶ್ ನೇತೃತ್ವದಲ್ಲಿ ಈ ತಂಡ ಸಮಾರಂಭದಲ್ಲಿ ಪಾಲ್ಗೊಳ್ಳಲಿದೆ.
Advertisement