ಬೆಂಗಳೂರು: ಖ್ಯಾತ ಶಿಲ್ಪಿ ಅರುಣ್ ಯೋಗಿರಾಜ್ (Arun Yogiraj) ಗೆ ಅಮೇರಿಕಾ ವೀಸಾ ನಿರಾಕರಿಸಿದೆ.
AKKA ಸಮ್ಮೇಳನದಲ್ಲಿ ಭಾಗವಹಿಸಲು 20 ದಿನಗಳ ಪ್ರವಾಸಕ್ಕೆ ಅರುಣ್ ಯೋಗಿರಾಜ್ ಅಮೇರಿಕಾಗೆ ತೆರಳುವವರಿದ್ದರು. ಈ ಹಿನ್ನೆಲೆಯಲ್ಲಿ ಅರುಣ್ ಯೋಗಿರಾಜ್ ವೀಸಾಗೆ ಅರ್ಜಿ ಸಲ್ಲಿಸಿದ್ದರು.
ನಿಬಂಧನೆಗಳನ್ನು ಪೂರ್ಣಗೊಳಿಸದ ಹಿನ್ನೆಲೆಯಲ್ಲಿ ಅರುಣ್ ಯೋಗಿರಾಜ್ ಗೆ ವೀಸಾ ನಿರಾಕರಣೆ ಮಾಡಲಾಗಿದೆ.
ಅಯೋಧ್ಯೆ ಮಂದಿರದ ಬಾಲ ರಾಮ ಪ್ರತಿಮೆ, ಇಂಡಿಯಾ ಗೇಟ್ ಬಳಿ ಇರುವ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಸೇರಿ ಹಲವು ಪ್ರತಿಮೆಗಳನ್ನು ಕೆತ್ತನೆ ಮಾಡಿರುವ ಶಿಲ್ಪಿ ಅರುಣ್ ಯೋಗಿರಾಜ್ ಅವರ ಪ್ರತಿಭೆ ಮತ್ತು ಕೊಡುಗೆಯನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗಿದೆ.
ಅಮೆರಿಕದ ಕನ್ನಡ ಕೂಟಗಳ ಸಂಘ, ವಿಶ್ವ ಕನ್ನಡ ಸಮ್ಮೇಳನ-2024 ಕಾರ್ಯಕ್ರಮ ವರ್ಜೀನಿಯಾದ ರಿಚ್ಮಂಡ್ನಲ್ಲಿ ಆಯೋಜಿಸಲಾಗಿದೆ. ಈ ಕಾರ್ಯಕ್ರಮಕ್ಕೆ ಯೋಗಿರಾಜ್ ಮತ್ತು ಅವರ ಕುಟುಂಬಸ್ಥರನ್ನು ಆಹ್ವಾನಿಸಲಾಗಿತ್ತು. ವೀಸಾ ಅರ್ಜಿಯನ್ನು ತಿರಸ್ಕರಿಸಿರುವ ಅಮೆರಿಕ ರಾಯಭಾರ ಕಚೇರಿ ಇದುವರೆಗೆ ಯಾವುದೇ ಕಾರಣವನ್ನು ನೀಡಿಲ್ಲ.
Advertisement