ಗ್ಯಾರಂಟಿಗಳ 'ದುರುಪಯೋಗ' ಕುರಿತ ದೂರುಗಳ ಪರಿಶೀಲನೆ: ಡಿಸಿಎಂ ಡಿಕೆ ಶಿವಕುಮಾರ್

ಗ್ಯಾರಂಟಿ ಯೋಜನೆಗಳ ಸ್ಥಗಿತ ಅಥವಾ ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಅಥವಾ ರದ್ದುಗೊಳಿಸುವುದಿಲ್ಲ.
ಡಿಸಿಎಂ ಡಿಕೆ ಶಿವಕುಮಾರ್
ಡಿಸಿಎಂ ಡಿಕೆ ಶಿವಕುಮಾರ್
Updated on

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷೆಯ ಗ್ಯಾರಂಟಿ ಯೋಜನೆಗಳ 'ದುರಪಯೋಗ' ಕುರಿತ ದೂರುಗಳು ಕೇಳಿಬಂದಿದ್ದು, ಅವುಗಳ ಬಗ್ಗೆ ಪರಿಶೀಲನೆ ನಡೆಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬುಧವಾರ ಹೇಳಿದ್ದಾರೆ.

ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದಾಯ ಹೆಚ್ಚಳ ಇರುವವರು ಗ್ಯಾರಂಟಿ ಯೋಜನೆಯ ಲಾಭವನ್ನು ಪಡೆದುಕೊಳ್ಳುತ್ತಿದ್ದಾರೆ ಎಂಬ ದೂರುಗಳಿವೆ. ಅವುಗಳನ್ನು ನಾವು ಮತ್ತೊಮ್ಮೆ ಪರಿಶೀಲನೆ ಮಾಡುತ್ತೇವೆ. ಶಾಸಕರಿಗೆ, ಸಚಿವರಿಗೆ ಅನುದಾನ ಸಿಗುತ್ತಿಲ್ಲ ಎನ್ನುವ ಆರೋಪವೆಲ್ಲ ಸುಳ್ಳು ಎಂದರು.

ಗ್ಯಾರಂಟಿ ಯೋಜನೆಗಳ ಸ್ಥಗಿತ ಅಥವಾ ರದ್ದುಗೊಳಿಸುವ ಪ್ರಶ್ನೆಯೇ ಇಲ್ಲ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ಹೇಳುತ್ತೇನೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳನ್ನು ಸ್ಥಗಿತ ಅಥವಾ ರದ್ದುಗೊಳಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ ಎಂದರು.

ಡಿಸಿಎಂ ಡಿಕೆ ಶಿವಕುಮಾರ್
'ಗ್ಯಾರಂಟಿ' ಯೋಜನೆಗಳ ಪರಿಷ್ಕರಣೆ ಅಗತ್ಯವಿದೆ: ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಚರ್ಚೆಗೆ ಗ್ರಾಸ!

ಇಂದು ಬೆಳಗ್ಗೆ ಮಾತನಾಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಮಾತ್ರ ಯೋಜನೆ ನೀಡಿ, ಶ್ರೀಮಂತರನ್ನು ಯೋಜನೆಯಿಂದ ಹೊರಗಿಡಬೇಕು.ಇದರಿಂದಾಗಿ ವಾರ್ಷಿಕವಾಗಿ ರೂ. 10,000 ಕೋಟಿ ಉಳಿತಾಯವಾಗಲಿದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com