
ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆಪ್ತ, ಅರಸೀಕೆರೆ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಎ.ಎಸ್ ಬಸವರಾಜು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದಾರೆ.
ಬಸವರಾಜು ಅವರಿಗೆ 75 ವರ್ಷ ವಯಸ್ಸಾಗಿತ್ತು. 2004-2007ರವರೆಗೆ ಬಿಜೆಪಿ ಪಕ್ಷದಿಂದ ಅರಸೀಕೆರೆ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರಾಗಿ ಬಸವರಾಜು ಆಯ್ಕೆಯಾಗಿದ್ದರು.
ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಆಪ್ತರಾಗಿದ್ದ ಎ.ಎಸ್.ಬಸವರಾಜು ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು.
ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಬಸವರಾಜು ಅವರು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ. ಬಸವರಾಜು ಅವರ ಅಂತ್ಯಕ್ರಿಯೆ ನಾಳೆ ಅರಸೀಕೆರೆಯಲ್ಲಿ ನಡೆಯಲಿದೆ.
Advertisement