Renukaswamy Murder Case: ತನಿಖೆ ಅಂತಿಮ ಘಟ್ಟಕ್ಕೆ, ಶೀಘ್ರವೇ ಚಾರ್ಜ್ ಶೀಟ್ ಸಲ್ಲಿಕೆ- ಪೊಲೀಸ್ ಆಯುಕ್ತ

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ದರ್ಶನ್‌ ಗ್ಯಾಂಗ್‌ನ ವಿರುದ್ಧ ಮೂರು ಮಾದರಿಯ ಸಾಕ್ಷ್ಯಗಳನ್ನು ಸಂಗ್ರಹ ಮಾಡಲಾಗಿದೆ. ಶೀಘ್ರದಲ್ಲಿಯೇ ಕೇಸ್‌ನ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ಕೇಸ್‌ ತನಿಖೆ ಅಂತಿಮ ಘಟ್ಟ ತಲುಪಿದೆ. ಅನೇಕ ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ ಎಂದರು.
ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸುದ್ದಿಗೋಷ್ಠಿ
ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಸುದ್ದಿಗೋಷ್ಠಿ
Updated on

ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಪೊಲೀಸ್ ತನಿಖೆ ಅಂತಿಮ ಘಟ್ಟ ತಲುಪಿದ್ದು, ಪ್ರಕರಣಕ್ಕೆ ಸಂಬಂಧಿಸಿದ ಮೌಖಿಕ, ಸಾಂಧರ್ಭಿಕ ಮತ್ತು ತಾಂತ್ರಿಕ ಸಾಕ್ಷ್ಯಗಳನ್ನು ಸಂಗ್ರಹಿಸಿ ಅವುಗಳನ್ನು ಬೆಂಗಳೂರಿನ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳಿಸಲಾಗಿದೆ. ಅಲ್ಲಿಂದ ತನಿಖೆಯ ಸುಮಾರು ಶೇಕಡ 70 ರಷ್ಟು ವರದಿಗಳು ತಮ್ಮ ಕೈ ಸೇರಿವೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಹೇಳಿದ್ದಾರೆ.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ಯಾಜೆಟ್ ಅಥವಾ ಎಲೆಕ್ಟ್ರಾನಿಕ್ ಉಪಕರಣಗಳ ಸಾಕ್ಷ್ಯಗಳನ್ನು ಹೈದರಾಬಾದ್ ಎಫ್​ಎಸ್​ಎಲ್ ಗೆ ಕಳಿಸಲಾಗಿದ್ದು ಅಲ್ಲಿಂದ ವರದಿಗಳು ಕೆಲ ದಿನಗಳಲ್ಲಿ ನಮಗೆ ತಲುಪಲಿವೆ. ಎಲ್ಲ ವರದಿಗಳು ಪ್ರಾಪ್ತವಾದ ಬಳಿಕ ಮತ್ತೊಮ್ಮೆ ಸಾಕ್ಷಿಗಳಿಂದ ಸ್ಪಷ್ಟೀಕರಣ ಪಡೆಯಲಾಗುವುದು, ಅದಾದ ನಂತರ ಪ್ರಕರಣದ ಅಂತಿಮ ವರದಿ ಅಥವಾ ಚಾರ್ಜ್​ಶೀಟನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು ಎಂದು ಹೇಳಿದರು.

ರೇಣುಕಾಸ್ವಾಮಿ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ದರ್ಶನ್‌ ಗ್ಯಾಂಗ್‌ನ ವಿರುದ್ಧ ಮೂರು ಮಾದರಿಯ ಸಾಕ್ಷ್ಯಗಳನ್ನು ಸಂಗ್ರಹ ಮಾಡಲಾಗಿದೆ. ಶೀಘ್ರದಲ್ಲಿಯೇ ಕೇಸ್‌ನ ಅಂತಿಮ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತದೆ. ಕೇಸ್‌ ತನಿಖೆ ಅಂತಿಮ ಘಟ್ಟ ತಲುಪಿದೆ. ಅನೇಕ ಆಯಾಮಗಳಲ್ಲಿ ತನಿಖೆ ನಡೆಸಿದ್ದೇವೆ ಎಂದರು.

ಶೀಘ್ರ ಚಾರ್ಜ್‌ ಶೀಟ್‌ ಸಲ್ಲಿಕೆ: ವರದಿಗಳನ್ನು ಆರೋಪಿಗಳು ಹಾಗೂ ಮೌಖಿಕ ಸಾಕ್ಷ್ಯಗಳೊಂದಿಗೆ ಹೋಲಿಕೆ ಮಾಡಲಾಗುತ್ತದೆ. ಆ ಬಳಿಕ ಪ್ರಕರಣದ ಅಂತಿಮ ವರದಿ ಅಂದರೆ ಚಾರ್ಜ್‌ ಶೀಟ್‌ ಶೀಘ್ರದಲ್ಲಿಯೇ ಸಲ್ಲಿಸಲಾಗುತ್ತದೆ. ನಮ್ಮ ಕಡೆಯಿಂದ ತಡವಾಗುವುದಿಲ್ಲ ಎಂದರು.

ಎಚ್ಚರಿಕೆ ವಹಿಸಿ: ಇಂದು ವರಮಹಾಲಕ್ಷ್ಮಿ ಹಬ್ಬ. ಪೂಜೆ, ವ್ರತವೆಂದು ಚಿನ್ನ, ಬೆಳ್ಳಿ, ಹಣವನ್ನು ದೇವರ ಮನೆಯಲ್ಲಿಟ್ಟು ಪೂಜೆ ಮಾಡುತ್ತಾರೆ. ಕಳ್ಳಕಾರರ ಹಾವಳಿ ಹೆಚ್ಚಾಗಿದ್ದು ನಗರವಾಸಿಗಳು ಎಚ್ಚರಿಕೆಯಿಂದ ಇರುವಂತೆ ಆಯುಕ್ತರು ಸೂಚಿಸಿದ್ದಾರೆ.

ಇತ್ತೀಚೆಗೆ ನಗರದಲ್ಲಿ ವಶಪಡಿಸಿಕೊಂಡ ಚಿನ್ನಾಭರಣಗಳು ಮತ್ತು ಇತರ ಸಾಮಾನುಗಳನ್ನು ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಪ್ರದರ್ಶನಕ್ಕಿಡಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com