ಹ್ಯಾಂಡ್ ಬೇಕ್ ಹಾಕದೆ ಟಿಪ್ಪರ್ ಲಾರಿ ನಿಲ್ಲಿಸಿ ಹೋಗಿದ್ದ ಚಾಲಕ: ಮಗು ಸೇರಿ ಇಬ್ಬರು ಸ್ಥಳದಲ್ಲೇ ಸಾವು, ಹಲವು ವಾಹನಗಳು ಜಖಂ

ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ದುರ್ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಹರಿದ ಪರಿಣಾಮ ಮಗು ಹಾಗೂ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮಿ ಹಬ್ಬ ಕಳೆದು ಮರುದಿನ ಇಂದು ಬೆಳ್ಳಂಬೆಳಗ್ಗೆ ಭೀಕರ ದುರಂತ ನಡೆದಿದ್ದು, ಟಿಪ್ಪರ್ ಹರಿದು ಮಗು ಸೇರಿದಂತೆ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಂಗಳೂರಿನ ಹೊಸ ಗುಡ್ಡದಹಳ್ಳಿಯಲ್ಲಿ ದುರ್ಘಟನೆ ನಡೆದಿದೆ. ನಡೆದುಕೊಂಡು ಹೋಗುತ್ತಿದ್ದ ವೇಳೆ ಹಿಂದಿನಿಂದ ಬಂದ ಟಿಪ್ಪರ್ ಲಾರಿ ಹರಿದ ಪರಿಣಾಮ ಮಗು ಹಾಗೂ ವ್ಯಕ್ತಿಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಆಗಿದ್ದೇನು?: ಹಾಲೋಬ್ಲಾಕ್ ಸಾಗಿಸುತ್ತಿದ್ದ ಟಿಪ್ಪರ್ ಲಾರಿಯನ್ನು ಚಾಲಕ ರಸ್ತೆಬದಿ ನಿಲ್ಲಿಸಿ ಹೋಗಿದ್ದ. ನಿಲ್ಲಿಸುವಾಗ ಹ್ಯಾಂಡ್ ಬ್ರೇಕ್ ಹಾಕಿರಲಿಲ್ಲ. ಏಕಾಏಕಿ ಚಲಿಸಿದ ಟಿಪ್ಪರ್ ಲಾರಿ ರಸ್ತೆಬದಿ ನಡೆದು ಹೋಗುತ್ತಿದ್ದ ಮಗು ಹಾಗೂ ವ್ಯಕ್ತಿ ಮೇಲೆ ಹರಿದಿದೆ. ಮಗು ಲಾರಿಯ ಚಕ್ರಕ್ಕೆ ಸಿಲುಕಿ ದೇಹ ಛಿದ್ರವಾಗಿದ್ದು ಇಬ್ಬರೂ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ.

ಈ ವೇಳೆ ಟಿಪ್ಪರ್ ಲಾರಿ 8 ಬೈಕ್ ಗಳು ಮತ್ತು ಎರಡು ಕಾರುಗಳಿಗೆ ಗುದ್ದಿದ್ದು ವಾಹನಗಳು ಜಖಂಗೊಂಡಿವೆ. ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಟಿಪ್ಪರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com