

ಬೆಂಗಳೂರು: ಭಾರತೀಯ ಚುನಾವಣಾ ಆಯೋಗದ ನಿರ್ದೇಶನದಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ಆಗಸ್ಟ್ 20ರಿಂದ 2025 ನೇ ಸಾಲಿನ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ಪ್ರಾರಂಭಿಸುತ್ತದೆ.
ಮನೆ ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯಿಂದ ಮೃತರ ಹೆಸರುಗಳನ್ನು ತೆಗೆದುಹಾಕುವುದು, ತಿದ್ದುಪಡಿ, ಸೇರ್ಪಡೆಯನ್ನು ಮಾಡಲಿದ್ದು, ಕಂದಾಯ ಅಧಿಕಾರಿಗಳೊಂದಿಗೆ ಸಹಕರಿಸುವಂತೆ ಜಿಲ್ಲಾ ಚುನಾವಣಾಧಿಕಾರಿ (DEO) ಮತ್ತು ಪಾಲಿಕೆ ಮುಖ್ಯಸ್ಥ ತುಷಾರ ಗಿರಿನಾಥ್ ಮನವಿ ಮಾಡಿದರು.
ಬಿಬಿಎಂಪಿ ಪ್ರಕಾರ, ಅಕ್ಟೋಬರ್ 29 ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಅಕ್ಟೋಬರ್ 29 ರಿಂದ ನವೆಂಬರ್ 28 ರವರೆಗೆ ಸಾರ್ವಜನಿಕರು ತಮ್ಮ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದು. ಡಿಸೆಂಬರ್ 24 ರೊಳಗೆ ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಪೂರ್ಣಗೊಳ್ಳುತ್ತದೆ. ಜನವರಿ 6 ರಂದು ಅಂತಿಮ ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ.
Advertisement