ಸಿಎಂ ಸಿದ್ದರಾಮಯ್ಯ ಮತ್ತಿತರರು
ಸಿಎಂ ಸಿದ್ದರಾಮಯ್ಯ ಮತ್ತಿತರರು

ಫಾಕ್ಸ್ ಕಾನ್ ಕಂಪನಿ ಮುಖ್ಯಸ್ಥರೊಂದಿಗೆ ಸಿಎಂ ಸಿದ್ದರಾಮಯ್ಯ ಭೋಜನಕೂಟ: ರಾಜ್ಯದಲ್ಲಿ ಹೂಡಿಕೆ ಕುರಿತು ಚರ್ಚೆ

ಫಾಕ್ಸ್ ಕಾನ್ ಕಂಪನಿ ಮುಖ್ಯಸ್ಥ ಲಿಯು ಮತ್ತಿತರ ಕಂಪನಿಯ ಹಿರಿಯ ಅಧಿಕಾರಿಗಳಿಗೆ ಭೋಜನಕೂಟ ಆಯೋಜಿಸಿದ್ದ ಸಿಎಂ ಸಿದ್ದರಾಮಯ್ಯ
Published on

ಬೆಂಗಳೂರು: ತೈವಾನ್ ಮೂಲದ ಆಪಲ್ ಫೋನ್ ಕಂಪೆನಿ ಫಾಕ್ಸ್ ಕಾನ್ ಕಂಪನಿಗೆ ರಾಜ್ಯದಲ್ಲಿ ಕಾರ್ಯನಿರ್ವಹಿಸಲು ಅಗತ್ಯವಾದ ಎಲ್ಲಾ ರೀತಿಯ ಸಹಕಾರ, ನೆರವು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಫಾಕ್ಸ್ಕಾನ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಅಧ್ಯಕ್ಷ ಯಂಗ್ ಲಿಯು ಅವರ ಜೊತೆ ಸಮಾಲೋಚನೆ ನಡೆಸಿದ ಮುಖ್ಯಮಂತ್ರಿ, ರಾಜ್ಯದಲ್ಲಿ ಕೈಗಾರಿಕೆಗಳಿಗೆ ಅತ್ಯಗತ್ಯವಾದ ಕಾನೂನು ಸುವ್ಯವಸ್ಥೆ ಉತ್ತಮವಾಗಿದ್ದು, ಸರ್ಕಾರದಿಂದ ಸಂಪೂರ್ಣ ಬೆಂಬಲ ನೀಡಲಾಗುವುದು, ರಾಜ್ಯದಲ್ಲಿ ಮತ್ತಷ್ಟು ಹೂಡಿಕೆ ಮಾಡಬೇಕೆಂದು ಮನವಿ ಮಾಡಿದರು. ಇದೇ ಸಂದರ್ಭದಲ್ಲಿ ಲಿಯು ಮತ್ತು ಹಿರಿಯ ಅಧಿಕಾರಿಗಳಿಗೆ ಸಿಎಂ ಔತಣಕೂಟ ಏರ್ಪಡಿಸಿದ್ದರು.

ದೇಶದ ಎಲೆಕ್ಟ್ರಾನಿಕ್ಸ್ ಮತ್ತು ಸೆಮಿಕಂಡಕ್ಟರ್ (ಇಎಸ್ ಡಿಎಂ) ವಲಯದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದ್ದು, ಸ್ಪರ್ಧಾತ್ಮಕ ಎಲೆಕ್ಟ್ರಾನಿಕ್ಸ್ ಉತ್ಪಾದನೆಯನ್ನು ಬೆಂಬಲಿಸಲು ಮತ್ತು ಸುಗಮಗೊಳಿಸಲು ಅನುಕೂಲ ಕಲ್ಪಿಸಲಾಗುವುದು, ರಸ್ತೆ, ವಿದ್ಯುತ್ ಸೇರಿದಂತೆ ಉದ್ಯಮಕ್ಕೆ ಅಗತ್ಯವಾದ ಎಲ್ಲಾ ರೀತಿಯ ಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಹೇಳಿದರು.

ಫಾಕ್ಸ್‌ ಕಾನ್ ಯೋಜನೆಯಿಂದ ರಾಜ್ಯದಲ್ಲಿ ಸಾಕಷ್ಟು ಉದ್ಯೋಗಾವಕಾಶ ಸೃಷ್ಟಿಯಾಗಲಿದ್ದು, ಸ್ಥಳೀಯ ಆರ್ಥಿಕತೆಯನ್ನು ಉತ್ತೇಜಿಸುತ್ತದೆ. ಜೊತೆಗೆ ಉದ್ಯೋಗಿಗಳನ್ನು ಸಶಕ್ತಗೊಳಿಸುತ್ತದೆ ಮತ್ತು ಪ್ರದೇಶದ ಒಟ್ಟಾರೆ ಸಮೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಅವರು ತಿಳಿಸಿದರು.

ಪಾಕ್ಸ್ ಕಾನ್ ದೊಡ್ಡಬಳ್ಳಾಪುರದಲ್ಲಿ ರೂ. 25,000 ಹೂಡಿಕೆಯೊಂದಿಗೆ ಬೃಹತ್ ಉತ್ಪಾದನಾ ಘಟಕ ಸ್ಥಾಪಿಸುತ್ತಿದೆ. ಇದಕ್ಕಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಮತ್ತು ದೇವನಹಳ್ಳಿ ತಾಲ್ಲೂಕಿನಲ್ಲಿರುವ ಐಟಿಐಆರ್ ಕೈಗಾರಿಕಾ ಪ್ರದೇಶದಲ್ಲಿ ಕಂಪನಿಯು 300 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದೆ. ಈ ಯೋಜನೆಯು 50,000 ಕ್ಕೂ ಹೆಚ್ಚು ಜನರಿಗೆ ಉದ್ಯೋಗವನ್ನು ಸೃಷ್ಟಿಸುವ ನಿರೀಕ್ಷೆಯಿದೆ ಎಂದು ಮುಖ್ಯಮಂತ್ರಿ ಕಚೇರಿ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ಘಟಕವು ಚೀನಾದ ನಂತರ ಎರಡನೇ ಅತಿದೊಡ್ಡ ಫಾಕ್ಸ್‌ಕಾನ್ ಸ್ಥಾವರವಾಗಲಿದೆ. ಇಲ್ಲಿ 40 ಸಾವಿರ ಮಧ್ಯಮ ಸ್ತರದ ವಿದ್ಯಾವಂತರಿಗೆ ಉದ್ಯೋಗ ಸಿಗಲಿದೆ. ನಮ್ಮ ಹೂಡಿಕೆ ಇಲ್ಲಿಗೆ ನಿಲ್ಲುವುದಿಲ್ಲ; ಭವಿಷ್ಯದಲ್ಲಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಹೇಳಿದರು.

ಸಿಎಂ ಸಿದ್ದರಾಮಯ್ಯ ಮತ್ತಿತರರು
ಪ್ರಾಸಿಕ್ಯೂಷನ್ ಗೆ ಅನುಮತಿ: ಮುಂದಿನ ಕಾನೂನು ಹೋರಾಟ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ, ಇಂದು ಸಂಜೆ ತುರ್ತು ಸಚಿವ ಸಂಪುಟ ಸಭೆ

ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ್ ಮಾತನಾಡಿ, ರಾಜ್ಯವು ಹೆಚ್ಚಿನ ಹೂಡಿಕೆಯನ್ನು ಮುಕ್ತವಾಗಿ ಸ್ವಾಗತಿಸಲಿದೆ. ಕೆಐಎಡಿಬಿ, ಕೆಪಿಟಿಸಿಎಲ್, ಅಗ್ನಿಶಾಮಕ ದಳ, ಮಾಲಿನ್ಯ ನಿಯಂತ್ರಣ ಮಂಡಳಿಗಲು ಫಾಕ್ಸ್ ಕಾನ್ ಕಂಪನಿಯ ಯೋಜನೆಯು ಸುಗುಮವಾಗಿ ಅನುಷ್ಠಾನಕ್ಕೆ ಬರುವ ನಿಟ್ಟನಲ್ಲಿ ಬದ್ಧತೆಯಿಂದ ಶ್ರಮಿಸುತ್ತಿವೆ. ಕಂಪನಿಗೆ ಈಗಾಗಲೇ 300 ಎಕರೆ ಭೂಮಿ ನೀಡಲಾಗಿದೆ ಎಂದರು.

ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ರಾಜ್ಯವು ದೇಶದಲ್ಲೇ ಅತ್ಯುತ್ತಮ ಉದ್ಯಮ ಸ್ನೇಹಿ ನೀತಿಯನ್ನು ಹೊಂದಿದ್ದು, ಫಾಕ್ಸ್ ಕಾನ್ ಕಂಪನಿಯು ಇಲ್ಲಿಗೆ ಬರುತ್ತಿರುವುದು ಸ್ವಾಗರ್ತಾಹ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com