ಬೆಂಗಳೂರು: ಜನನಿಬಿಡ ರಸ್ತೆಯಲ್ಲಿ ಅಪಾಯಕಾರಿ ವೀಲಿಂಗ್ ಸಾಹಸ ಮಾಡುತ್ತಿದ್ದ ಇಬ್ಬರನ್ನು ನೋಡಿ ಆಕ್ರೋಶಗೊಂಡ ಇತರ ವಾಹನ ಸವಾರರು, ಅವರನ್ನು ಹಿಡಿದು, ಅವರ ಎರಡು ಸ್ಕೂಟರ್‌ಗಳನ್ನು ನೆಲಮಂಗಲ ಮೇಲ್ಸೇತುವೆಯಿಂದ ಕೆಳಗೆ ಎಸೆದ ಘಟನೆ ಗುರುವಾರ ನಡೆದಿದೆ.
ಅನೇಕ ನೆಟಿಜನ್‌ಗಳು ದಾರಿಹೋಕರರ ಕ್ರಮವನ್ನು ಶ್ಲಾಘಿಸುತ್ತಿದ್ದಾರೆ ಮತ್ತು ಪೊಲೀಸರು ತಮ್ಮ ಅಂತಹ ಸ್ಟಂಟ್‌ಗಳಲ್ಲಿ ತೊಡಗಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ನೆಲಮಂಗಲ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು-ತುಮಕೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಹಿಂಬದಿ ಸವಾರರು ಸೇರಿದಂತೆ ಇಬ್ಬರು ಯುವಕರು ತಮ್ಮ ಸ್ಕೂಟರ್‌ಗಳಲ್ಲಿ ವ್ಹೀಲಿಂಗ್ ಮಾಡುತ್ತಿದ್ದರು.
ಹೆದ್ದಾರಿಯಲ್ಲಿ ವ್ಹೀಲಿಂಗ್ ಮಾಡುತ್ತಿದ್ದ ಯುವಕರಲ್ಲೂಬ್ಬ ವಾಹನವೊಂದಕ್ಕೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಸಿಟ್ಟಿಗೆದ್ದ ವಾಹನ ಸವಾರರು ಆತನ ಮತ್ತು ಮತ್ತೊಬ್ಬ ಯುವಕನ ಸ್ಕೂಟರ್ಅನ್ನು ಫ್ಲೈಓವರ್ ನಿಂದ ಕೆಳಗೆ ಎಸೆದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವ್ಹೀಲಿಂಗ್ ಮಾಡುತ್ತಿದ್ದ ಇಬ್ಬರು ಯುವಕರು ಮತ್ತು ಹಿಂಬದಿ ಸವಾರರು ತಕ್ಷಣ ಸ್ಥಳದಿಂದ ಪರಾರಿಯಾಗಿದ್ದಾರೆ. ಅಲ್ಲಿ ನೆರೆದಿದ್ದ ವ್ಯಕ್ತಿಯೊಬ್ಬ ಘಟನೆಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿದ್ದು, ಅದು ಶನಿವಾರ ವೈರಲ್ ಆಗಿದೆ.
ಪರಿಸ್ಥಿತಿ ತಿಳಿಗೊಳಿಸಿ ಸ್ಕೂಟರ್‌ಗಳನ್ನು ವಶಪಡಿಸಿಕೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗಾಗಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ ಮತ್ತು ದ್ವಿಚಕ್ರ ವಾಹನದ ವಿವರಗಳನ್ನು ಪರಿಶೀಲಿಸುತ್ತಿದ್ದಾರೆ.
ಮತ್ತೊಂದೆಡೆ, ಗುರುವಾರ ಬೆಂಗಳೂರು ಈಶಾನ್ಯ ಸಂಚಾರ ಪೊಲೀಸರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೈಕ್ ವ್ಹೀಲಿಂಗ್ ನಡೆಸಿ ಪುಂಡಾಟ ಮೆರೆದಿದ್ದ 44 ಯುವಕರನ್ನು ಯಲಹಂಕ ಪೊಲೀಸರು ವಶಕ್ಕೆ ಪಡೆದಿದ್ದರು. ಬೈಕ್ ವ್ಹೀಲಿಂಗ್ ಸಂಬಂಧ 33 ಪ್ರಕರಣಗಳನ್ನು ದಾಖಲಿಸಿಕೊಂಡಿದ್ದರು.
Advertisement