ಮೈಸೂರು: ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರ ಗುರು ನಿಧನ

ಅನಾರೋಗ್ಯದಿಂದ ಬಳಲುತ್ತಿದ್ದ‌ 68 ವರ್ಷದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಮಹೇಶ್ ಚಂದ್ರ ಗುರು
ಮಹೇಶ್ ಚಂದ್ರ ಗುರು
Updated on: 

ಮೈಸೂರು: ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ‌ ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ನಿವೃತ್ತ ಪ್ರಾಧ್ಯಾಪಕ ಹಾಗೂ ಪ್ರಗತಿಪರ ಚಿಂತಕ ಪ್ರೊ. ಮಹೇಶ್ ಚಂದ್ರ ಗುರು ಅವರು ಶನಿವಾರ ನಿಧನರಾಗಿದ್ದಾರೆ.

ಅನಾರೋಗ್ಯದಿಂದ ಬಳಲುತ್ತಿದ್ದ‌ 68 ವರ್ಷದ ಪ್ರೊ. ಮಹೇಶ್ ಚಂದ್ರ ಗುರು ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ 7.30 ರ ಸುಮಾರಿಗೆ ಹೃದಯಘಾತದಿಂದ ನಿಧನರಾಗಿದ್ದಾರೆ.

ಮೈಸೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಮಹೇಶ್ ಚಂದ್ರ ಗುರು ಅವರು 2019 ರಲ್ಲಿ ಸೇವೆಯಿಂದ ನಿವೃತ್ತರಾಗಿದ್ದರು.

ಮಹೇಶ್ ಚಂದ್ರ ಗುರು
BSY ಆಪ್ತ, ಬಿಜೆಪಿ ಮಾಜಿ ಶಾಸಕ ಎಎಸ್ ಬಸವರಾಜು ನಿಧನ

ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ.ಮಹೇಶ್‌ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು. ನಾಡ ಹಬ್ಬ ದಸರಾ ವೇಳೆ ಮಹಿಷಾ ದಸರಾ ಆಚರಣೆಗೊಳ್ಳಲು ಇವರ ಪಾತ್ರ ಪ್ರಮುಖವಾದದ್ದು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com