ಪ್ರಾಸಿಕ್ಯೂಷನ್ ಗೆ ಅನುಮತಿ: ಮುಂದಿನ ಕಾನೂನು ಹೋರಾಟ ಬಗ್ಗೆ ಸಿಎಂ ಸಿದ್ದರಾಮಯ್ಯ ಚರ್ಚೆ, ಇಂದು ಸಂಜೆ ತುರ್ತು ಸಚಿವ ಸಂಪುಟ ಸಭೆ

ಸದ್ಯ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ವಿರುದ್ಧ ಅವರು ಮುಂದಿನ ಸೋಮವಾರ ಕೋರ್ಟ್ ಮೆಟ್ಟಿಲೇರುವ ಸಾಧ್ಯತೆ ನಿಚ್ಛಳವಾಗಿದೆ.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಮುಡಾ ನಿವೇಶನ ಹಂಚಿಕೆಯಲ್ಲಿ ಅಕ್ರಮ ಎಸಗಲಾಗಿದೆ ಎಂಬ ಆರೋಪದ ಮೇಲೆ ತಮ್ಮ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುತ್ತಿದ್ದಂತೆ ಇತ್ತ ಸಿಎಂ ಸಿದ್ದರಾಮಯ್ಯ ಮಂದಿನ ಕಾನೂನು ಹೋರಾಟದ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ ನೀಡಿರುವ ಆದೇಶದ ಅಧಿಕೃತ ಪ್ರತಿ ಇನ್ನಷ್ಟೇ ಸಿಎಂ ಕೈಗೆ ತಲುಪಬೇಕಿದೆ.

ಸದ್ಯ ಸಿಎಂ ಅಧಿಕೃತ ನಿವಾಸ ಕಾವೇರಿಯಲ್ಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಿರುವ ಕಾನೂನು ಆಯ್ಕೆಗಳ ಬಗ್ಗೆ ಸಮಾಲೋಚನೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೆಟ್ಟಿಲನ್ನೂ ಏರಬಹುದು. ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಕುರಿತಾಗಿ ಈಗಾಗಲೇ ಸಿಎಂ ಪರ ವಕೀಲರು ಸಿದ್ಧತೆ ನಡೆಸಿದ್ದಾರೆ. ಸೋಮವಾರ ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಜೊತೆ ಸಿಎಂ ಚರ್ಚೆ ನಡೆಸುತ್ತಿದ್ದಾರೆ. ಪ್ರಾಸಿಕ್ಯೂಷನ್​ಗೆ​ ಅನುಮತಿ ನೀಡಿರುವ ಬಗ್ಗೆ ಹಾಗೂ ಮುಂದೆ ಕೈಗೊಳ್ಳಬೇಕಾದ ನಡೆಗಳ ಬಗ್ಗೆ ಕಾನೂನು ಸಲಹೆಗಾರ ಬಿ ಪೊನ್ನಣ್ಣ ಅವರ ಜೊತೆ ಕೂಡ ಸಮಾಲೋಚಿಸುತ್ತಿದ್ದಾರೆ.

ಸಿಎಂ ಸಿದ್ದರಾಮಯ್ಯ
ಮುಡಾ ಹಗರಣ: ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರ ಅನುಮತಿ

ಸದ್ಯ, ರಾಜ್ಯಪಾಲರ ಆದೇಶದ ಅಧಿಕೃತ ಪ್ರತಿ ತಲುಪಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳುವ ಬಗ್ಗೆ ಸಿಎಂ ನಿರ್ಧಿರಿಸಿದ್ದಾರೆ ಎನ್ನಲಾಗಿದೆ. ಈ ವಿಚಾರವಾಗಿ ಕೆಲವು ದಿನಗಳ ಹಿಂದೆ ಕೂಡ ಕಾನೂನು ತಜ್ಞರ ಜತೆ ಸಿಎಂ ಸಮಾಲೋಚನೆ ನಡೆಸಿದ್ದರು ಎಂದು ತಿಳಿದುಬಂದಿದೆ.

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​​ಗೆ ಅನುಮತಿ ವಿಚಾರವಾಗಿ ಮುಖ್ಯ ಕಾರ್ಯದರ್ಶಿ ಶಾಲಿನ್ ರಜನೀಶ್​, ಎಸಿಎಸ್​ ಅತೀಕ್​ಗೆ ನೋಟಿಸ್​ ನೀಡಲಾಗಿದೆ. ರಾಜಭವನದಿಂದ ನೋಟಿಸ್ ರವಾನೆಯಾಗಿದೆ. ಮುಡಾ ಪ್ರಕರಣದ ಮೂವರು ದೂರುದಾರರಾದ ಟಿಜೆಅಬ್ರಹಾಂ, ಸ್ನೇಹಮಯಿ ಕೃಷ್ಣ ಹಾಗೂ ಪ್ರದೀಪ್​​​ಗೆ ನೋಟಿಸ್ ಜಾರಿ ಮಾಡಲಾಗಿದೆ. ಪ್ರದೀಪ್ ಈಗಾಗಲೇ ರಾಜಭವನದಲ್ಲಿ ನೋಟಿಸ್ ಸ್ವೀಕರಿಸಿ ತೆರಳಿದ್ದಾರೆ.

ಇಂದು ಸಂಜೆ ತುರ್ತು ಸಚಿವ ಸಂಪುಟ ಸಭೆ: ಮುಡಾ ನಿವೇಶನ ವಿವಾದ ಕುರಿತು ತನಿಖೆಗೆ ರಾಜ್ಯಪಾಲರು ಅನುಮತಿ ನೀಡಿದ ಹಿನ್ನಲೆ ತುರ್ತು ಸಂಪುಟ ಸಭೆ ಸಂಜೆ 5 ಗಂಟೆಗೆ ನಿಗದಿಯಾಗಿದೆ. ರಾಜೀನಾಮೆ ಬದಲು ನ್ಯಾಯಾಲಯದಲ್ಲಿ ಕಾನೂನು ಹೋರಾಟಕ್ಕೆ ನಿರ್ಧಾರ ಮಾಡಲಿದ್ದಾರೆ ಎಂದು ಹೇಳಲಾಗಿದೆ.

ಈಗಾಗಲೇ ಸಂಪುಟ ಸಚಿವರಿಗೆ ಸಂಜೆ 5 ಗಂಟೆಗೆ ಬೆಂಗಳೂರಿಗೆ ಬರುವಂತೆ ಸಿಎಂ ಕಡೆಯಿಂದ ಸೂಚನೆ ಹೋಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com