ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನಕ್ಕೆ 5 ತಂಡಗಳ ರಚನೆ, ತೀವ್ರ ಹುಡುಕಾಟ-ACP ರಮಣ್ ಗುಪ್ತಾ

ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದೆ. ವಾರಾಂತ್ಯ ಸ್ನೇಹಿತರೊಂದಿಗೆ ಕೋರಮಂಗಲದ ಪಬ್ ನಲ್ಲಿ ಪಾರ್ಟಿ ಮುಗಿಸಿಕೊಂಡು ಬರುತ್ತಿದ್ದ ಯುವತಿಯನ್ನು ಆಟೋದಲ್ಲಿ ಕರೆದುಕೊಂಡು ಹೋಗಿ ರೇಪ್ ಮಾಡಲಾಗಿದೆ.
ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನಕ್ಕೆ 5 ತಂಡಗಳ ರಚನೆ, ತೀವ್ರ ಹುಡುಕಾಟ-ACP ರಮಣ್ ಗುಪ್ತಾ
Updated on: 

ಬೆಂಗಳೂರು: ಕೋಲ್ಕತ್ತಾದ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ತರಬೇತಿ ನಿರತ ವಿದ್ಯಾರ್ಥಿನಿಯ ಹತ್ಯಾಚಾರ ಪ್ರಕರಣ ಸುದ್ದಿ ಬಿಸಿಯಾಗಿರುವಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಅನ್ಯರಾಜ್ಯದ ಪದವಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ನಡೆದಿದೆ.

ಬೆಂಗಳೂರಿನ ಹೆಚ್ ಎಸ್ ಆರ್ ಲೇ ಔಟ್ ಠಾಣಾ ವ್ಯಾಪ್ತಿಯಲ್ಲಿ ನಿನ್ನೆ ಮಧ್ಯರಾತ್ರಿ ಘಟನೆ ನಡೆದಿದೆ. ವಾರಾಂತ್ಯ ಸ್ನೇಹಿತರೊಂದಿಗೆ ಕೋರಮಂಗಲದ ಪಬ್ ನಲ್ಲಿ ಪಾರ್ಟಿ ಮುಗಿಸಿಕೊಂಡು ಬರುತ್ತಿದ್ದ ಯುವತಿಯನ್ನು ಬೈಕ್ ನಲ್ಲಿ ಡ್ರಾಪ್ ಕೊಡಲು ಕರೆದುಕೊಂಡು ಹೋಗಿ ರೇಪ್ ಮಾಡಲಾಗಿದೆ.

ಸಂತ್ರಸ್ತ ವಿದ್ಯಾರ್ಥಿನಿ ಖಾಸಗಿ ಕಾಲೇಜಿನಲ್ಲಿ ಪದವಿ ಅಂತಿಮ ವರ್ಷದ ವಿದ್ಯಾರ್ಥಿನಿಯಾಗಿ ಅಭ್ಯಾಸ ಮಾಡುತ್ತಿದ್ದಳು. ವಿದ್ಯಾರ್ಥಿನಿ ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾಳೆ. ಆಸ್ಪತ್ರೆಯಲ್ಲಿ ಐಸಿಯು ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆಸ್ಪತ್ರೆ ಸುತ್ತ ತೀವ್ರ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.

ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನಕ್ಕೆ 5 ತಂಡಗಳ ರಚನೆ, ತೀವ್ರ ಹುಡುಕಾಟ-ACP ರಮಣ್ ಗುಪ್ತಾ
ಬೆಂಗಳೂರಲ್ಲಿ ಮಧ್ಯರಾತ್ರಿ ಯುವತಿ ಮೇಲೆ ಅತ್ಯಾಚಾರ: ಗೃಹ ಸಚಿವರು ಏನೆಂದರು?

ಎಸಿಪಿ ಸುದ್ದಿಗೋಷ್ಠಿ: ಘಟನೆ ಬಗ್ಗೆ ಇಂದು ಸುದ್ದಿಗೋಷ್ಠಿ ನಡೆಸಿ ಎಸಿಪಿ ರಮಣ್ ಗುಪ್ತಾ ವಿವರಿಸಿದ್ದಾರೆ. ಕಳೆದ ಮಧ್ಯರಾತ್ರಿ 1ರಿಂದ 1.30ರ ಮಧ್ಯ ಸಮಯದಲ್ಲಿ ಯುವತಿ ಬೈಕ್ ನಲ್ಲಿ ಪ್ರಯಾಣಿಸುತ್ತಿದ್ದಾಗ ಬೇರೆಡೆಗೆ ಕರೆದುಕೊಂಡು ಹೋಗಿ ಪೈಶಾಚಿಕ ಕೃತ್ಯ ನಡೆಸಿದ್ದಾನೆ. ನಾವು ಅತ್ಯಾಚಾರ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದೇವೆ ಎಂದಿದ್ದಾರೆ.

ಅನ್ಯರಾಜ್ಯದ ವಿದ್ಯಾರ್ಥಿನಿ ಬೆಂಗಳೂರಿನಲ್ಲಿ ಅಂತಿಮ ವರ್ಷದ ಪದವಿ ವ್ಯಾಸಂಗ ಮಾಡುತ್ತಿದ್ದು ಸ್ನೇಹಿತರ ಜೊತೆ ಕೋರಮಂಗಲದ ಪಬ್ ನಲ್ಲಿ ಪಾರ್ಟಿ ಮುಗಿಸಿಕೊಂಡು ವಾಪಸ್ಸಾಗುತ್ತಿದ್ದರು. ಪಾರ್ಟಿ ಮುಗಿಸಿಕೊಂಡು ದ್ವಿಚಕ್ರ ವಾಹನದಲ್ಲಿ ಬಂದ ವಿದ್ಯಾರ್ಥಿನಿ ನಂತರ ಮತ್ತೊಂದು ಬೈಕ್ ನಲ್ಲಿ ಹತ್ತಿ ಹೋಗಿದ್ದು ಆತನೇ ಅತ್ಯಾಚಾರ ನಡೆಸಿರುವ ಶಂಕೆಯಿದ್ದು ಸ್ಥಳಕ್ಕೆ ಭೇಟಿ ನೀಡಿ ಯುವತಿಯ ಮನೆಯವರ ಜೊತೆ ಮಾತನಾಡಿ 5 ತಂಡಗಳನ್ನು ರಚಿಸಿ ತನಿಖೆ ಮಾಡುತ್ತಿದ್ದೇವೆ. ಅತಿ ಶೀಘ್ರವೇ ಆರೋಪಿಯನ್ನು ಬಂಧಿಸುವ ವಿಶ್ವಾಸವಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com