ಆಟೋ ಚಾಲಕನ ಸಾವು ಬೆನ್ನಲ್ಲೇ ಎಚ್ಚೆತ್ತ BBMP: ರಸ್ತೆ ಬದಿಯ ಅಪಾಯಕಾರಿ ಮರಗಳ ತೆರವು ಕಾರ್ಯಾಚರಣೆ ತೀವ್ರ

ಆಗಸ್ಟ್ 1 ರಿಂದ ಆಗಸ್ಟ್ 17 ರವರೆಗೆ 756 ಮರಗಳು ನೆಲಕ್ಕುರುಳಿರುವ ಹಾಗೂ ಮರದ ಕೊಂಬೆಗಳು ಬಿದ್ದ ಬಗ್ಗೆ ದೂರುಗಳು ದಾಖಲಾಗಿವೆ. ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ ಎಂದು ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಮರ ಬಿದ್ದು ಆಟೋ ಚಾಲಕ ಮೃತಪಟ್ಟ ಘಟನೆ ಬೆನ್ನಲ್ಲೇ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಎಚ್ಚೆತ್ತುಕೊಂಡಿದ್ದು, ಇದೀಗ ನಗರದಲ್ಲಿನ ರಸ್ತೆ ಬದಿಗಳಲ್ಲಿರುವ ಅಪಾಯಕಾರಿ ಮರಗಳ ತೆರವುಗೊಳಿಸುವ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

ಆಗಸ್ಟ್ 1 ರಿಂದ ಆಗಸ್ಟ್ 17 ರವರೆಗೆ 756 ಮರಗಳು ನೆಲಕ್ಕುರುಳಿರುವ ಹಾಗೂ ಮರದ ಕೊಂಬೆಗಳು ಬಿದ್ದ ಬಗ್ಗೆ ದೂರುಗಳು ದಾಖಲಾಗಿವೆ. ಎಲ್ಲಾ ದೂರುಗಳನ್ನು ಪರಿಹರಿಸಲಾಗಿದೆ ಎಂದು ಬಿಬಿಎಂಪಿ ಅರಣ್ಯ ವಿಭಾಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕಾರ್ಯಾಚರಣೆ ತೀವ್ರಗೊಳಿಸಿರುವ ಪಾಲಿಕೆಯು, ಪ್ರತಿ ವಲಯದಲ್ಲಿ ಸಿಬ್ಬಂದಿಯನ್ನು ನಿಯೋಜಿಸಿದೆ. ಆಗಸ್ಟ್-ಸೆಪ್ಟೆಂಬರ್ ಮಳೆಗಾಲದ ಗರಿಷ್ಠ ಅವಧಿ ಎಂದು ಪರಿಗಣಿಸಲ್ಪಟ್ಟಿರುವುದರಿಂದ ಅಪಾಯಕಾರಿ ಮರಗಳು ಮತ್ತು ಕೊಂಬೆಗಳನ್ನು ಗುರುತಿಸುವ ಚಟುವಟಿಕೆಯನ್ನು ತೀವ್ರಗೊಳಿಸಿದ್ದಾರೆ ಎಂದು ಬಿಎಲ್‌ಜಿ ಸ್ವಾಮಿ ಹೇಳಿದ್ದಾರೆ.

ಸಂಗ್ರಹ ಚಿತ್ರ
ಬೆಂಗಳೂರು ಮಳೆ: ಧರೆಗುರುಳಿದ ಮರ, ಆಟೋ ರಿಕ್ಷಾ ಚಾಲಕನ ಬಲಿ!

ದುರ್ಬಲ ಮರಗಳ ಬಗ್ಗೆ ಪರಿಶೀಲನೆ ಮತ್ತು ದೂರುಗಳ ಆಧಾರದ ಮೇಲೆ ಬಿಬಿಎಂಪಿ ಕ್ರಮ ತೆಗೆದುಕೊಳ್ಳುತ್ತಿದೆ ಎಂದು ತಿಳಿಸಿದ್ದಾರೆ.

ಕತ್ತರಿಸಿದ ಮರ ಹಾಗೂ ಕೊಂಬೆಗಳನ್ನು ಪಾಲಿಕೆ ನೇಮಿಸಿರುವ ಸಂಸ್ಥೆಗಳು ಸಾಗಣ ಮಾಡುತ್ತಿವೆ. ಈ ಮರಗಳನನ್ನು ಬಿಬಿಎಂಪಿಯ ವ್ಯಾಪ್ತಿಯ ಅರಣ್ಯಾಧಿಕಾರಿಗಳು ಮತ್ತು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಮೇಲ್ವಿಚಾರಣೆಯಲ್ಲಿ, ಆಯಾ ವಲಯಗಳಲ್ಲಿನ ಶೆಡ್‌ಗಳಿಗೆ ರವಾನೆ ಮಾಡಲಾಗುತ್ತಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ,

ಆಟೋ ಚಾಲಕದ ಕುಟುಂಬ ಸದಸ್ಯರಿಗೆ ಪಾಲಿಕೆ ವತಿಯಿಂದ ರೂ.5 ಲಕ್ಷಗಳ ಪರಿಹಾರ ನೀಡಲಾಗಿದೆ. ಅಲ್ಲದೆ, ಆಸ್ಪತ್ರೆಯ ಶುಲ್ಕ ಹಾಗೂ ಶವಸಂಸ್ಕಾರದ ಶುಲ್ಕವನ್ನೂ ಪಾಲಿಕೆಯೇ ಭರಿಸಿದೆ, ಮರ ಬಿದ್ದು ಬೆನ್ನುಮೂಳೆಗೆ ಪೆಟ್ಟಾಗಿರುವ ಮಾಣಿಕ್ಯವೇಲ್ ಹಾಗೂ ತೊಡೆ ಮೂಳೆ ಮುರಿತಕ್ಕೆ ಒಳಗಾಗಿದ್ದ ವಿಜಯಲಕ್ಷ್ಮಿ ಅವರಿಗೂ ಪಾಲಿಕೆ ವತಿಯಿಂದ ತಲಾ 5 ಲಕ್ಷ ರೂ. ಪರಿಹಾರ ನೀಡಲಾಗಿದೆ. ನಾಲ್ವರು ಶಾಲಾ ಮಕ್ಕಳ ಪೈಕಿ ಒಂದು ಮಗುವಿಗೆ ಕೈ ಮೂಳೆ ಮುರಿತಕ್ಕೆ ಒಳಗಾಗಿದ್ದು, ಮಗುವಿಗೆ 1 ಲಕ್ಷ ರೂ., ಸಣ್ಣಪುಟ್ಟ ಗಾಯಕ್ಕೊಳಗಾಗಿರುವ ಮೂವರಿಗೆ ಮಕ್ಕಳಿಗೆ ತಲಾ 20 ಸಾವಿರ ರೂ. ಪರಿಹಾರ ನೀಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com