ಗದಗ: ಸರ್ಕಾರಿ ಬಸ್ ಹಾಗೂ ಕಾರು ನಡುವೆ ಭೀಕರ ಸಂಭವಿಸಿದ ಭೀಕರ ಅಪಘಾತ (Accident)ದಲ್ಲಿ ಒಂದೇ ಕುಟುಂಬದ ನಾಲ್ಕು ಮಂದಿ ಸಾವನ್ನಪ್ಪಿರುವ ಘಟನೆ ಗದಗದಲ್ಲಿ ನಡೆದಿದೆ.
ಗದಗ ಜಿಲ್ಲೆಯ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಈ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದಾರೆ. ಮೃತರನ್ನು ಹಾವೇರಿ ಮೂಲದ ರುದ್ರಪ್ಪ ಅಂಗಡಿ(55), ಪತ್ನಿ ರಾಜೇಶ್ವರಿ(45), ಮಗಳು ಐಶ್ವರ್ಯ (16), ಮಗ ವಿಜಯ(12) ಎಂದು ಗುರುತಿಸಲಾಗಿದೆ.
ಮೃತ ಕುಟುಂಬ ಶ್ರಾವಣ ಮಾಸದ ನಿಮಿತ್ತ ಕಲ್ಲಾಪೂರ ಬಸವೇಶ್ವರ ದೇವಸ್ಥಾನಕ್ಕೆ ಹೊರಟ್ಟಿತ್ತು. ಈ ವೇಳೆ ಕಲ್ಲಾಪೂರ ಕಡೆಗೆ ಹೊರಟ್ಟಿದ್ದ ಕಾರು ಹಾಘೂ ಇಳಕಲ್ ನಿಂದ ಹುಬ್ಬಳ್ಳಿಗೆ ಹೊರಟಿದ್ದ ಸಾರಿಗೆ ಬಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಢಿಕ್ಕಿ ರಭಸಕ್ಕೆ ಕಾರು ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ನರಗುಂದ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನರಗುಂದ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಾನಂದಪಾಟೀಲ್ ಸಂತಾಪ
ಇನ್ನು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಎಪಿಎಂಸಿ ಸಚಿವ ಹಾಗೂ ಬಸವನ ಬಾಗೇವಾಡಿ ಶಾಸಕ ಶಿವಾನಂದ ಪಾಟೀಲ ಕಂಬನಿ ಮಿಡಿದಿದ್ದು, 'ಗದಗ ಜಿಲ್ಲೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಹೊರವಲಯದಲ್ಲಿ ಇಂದು ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿಯ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಸುದ್ದಿ ತಿಳಿದು ದುಃಖವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಎಕ್ಸ್ ನಲ್ಲಿ ಟ್ವೀಟ್ ಮಾಡಿದ್ದಾರೆ.
Advertisement