Muda scam: ಸಿದ್ದರಾಮಯ್ಯಗೆ ಶಿಕ್ಷೆಯಾಗದ ಹೊರತು ಹೋರಾಟ ನಿಲ್ಲದು; ಅರ್ಜಿದಾರ ಸ್ನೇಹಮಯಿ ಕೃಷ್ಣ

ಮುಖ್ಯಮಂತ್ರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಮುಡಾದಿಂದ ನಿವೇಶನ ಪಡೆಯಲು ನಿಯಮ ಉಲ್ಲಂಘಿಸಿದ್ದಾರೆ. ಸಿದ್ದರಾಮಯ್ಯನವರ ಈ ಅಪರಾಧಕ್ಕೆ ಶಿಕ್ಷೆಯಾಗಬೇಕು.
ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯ
Updated on

ಮೈಸೂರು: ಮುಡಾ ನಿವೇಶನಗಳನ್ನು ಕಬಳಿಸುವ ಉದ್ದೇಶದಿಂದ ಅಧಿಕಾರ ದುರ್ಬಳಕೆ ಮಾಡಿಕೊಂಡು ಕಾನೂನು ಉಲ್ಲಂಘಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶಿಕ್ಷೆಯಾಗುವವರೆಗೂ ನಮ್ಮ ಹೋರಾಟ ಮುಂದುವರೆಯುವುದು ಎಂದು ಅರ್ಜಿದಾರ ಸ್ನೇಹಮಯಿ ಕೃಷ್ಣ ಅವರು ಶನಿವಾರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳು ತಮ್ಮ ಅಧಿಕಾರ ದುರುಪಯೋಗಪಡಿಸಿಕೊಂಡು ಮುಡಾದಿಂದ ನಿವೇಶನ ಪಡೆಯಲು ನಿಯಮ ಉಲ್ಲಂಘಿಸಿದ್ದಾರೆ. ಸಿದ್ದರಾಮಯ್ಯನವರ ಈ ಅಪರಾಧಕ್ಕೆ ಶಿಕ್ಷೆಯಾಗಬೇಕು. ಅಕ್ರಮವಾಗಿ ಸಂಪಾದಿಸಿರುವ 14 ನಿವೇಶನಗಳನ್ನು ಮುಡಾಕ್ಕೆ ಹಿಂದಿರುಗಿಸುವವರೆಗೆ ನಾನು ವಿರಮಿಸುವುದಿಲ್ಲ ಎಂದು ಹೇಳಿದರು.

ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳನ್ನು ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿಲಾಗಿದೆ. ಆ.20ರಂದು ಪ್ರಕರಣದ ವಿಚಾರಣೆ ನಡೆಯಲಿದೆ ಎಂದು ತಿಳಿಸಿದರು.

ಸಿಎಂ ಸಿದ್ದರಾಮಯ್ಯ
ಮುಡಾ ಹಗರಣ ಪ್ರಾಸಿಕ್ಯೂಷನ್​ಗೆ ನೀಡಿದ್ದೆ ತಪ್ಪು: ನನ್ನ ಪ್ರಕಾರ ರಾಜ್ಯಪಾಲರೇ ರಾಜೀನಾಮೆ ನೀಡಬೇಕು - ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಒಪ್ಪಿಗೆ ನೀಡಿದ್ದರಿಂದ, ವಿಶೇಷ ನ್ಯಾಯಾಲಯವು ಮಂಗಳವಾರ ಪ್ರಕರಣದ ವಿಚಾರಣೆ ನಡೆಸಲಿದೆ. ತನಿಖೆಗೆ ಒಪ್ಪಿಗೆ ನೀಡುವ ವಿಶ್ವಾಸವೂ ಇದೆ.

ಮುಡಾದಲ್ಲಿ 1990ರಿಂದ ಇಲ್ಲಿಯವರೆಗಿನ ನಿವೇಶನ ಹಂಚಿಕೆಯಲ್ಲಿ ನಡೆದಿರುವ ಅಕ್ರಮಗಳ ಕುರಿತು 300ಕ್ಕೂ ಹೆಚ್ಚು ಪುಟಗಳ ದಾಖಲೆಗಳನ್ನು ಸಲ್ಲಿಸಿ ತನಿಖೆ ನಡೆಸುವಂತೆ ಮನವಿ ಮಾಡಿದ್ದೇನೆ. ಈ ಅಕ್ರಮಗಳಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳು ಮತ್ತು ಪ್ರಬಲ ವ್ಯಕ್ತಿಗಳನ್ನು ತನಿಖಾ ಸಂಸ್ಥೆಗಳು ಬಂಧಿಸಿ, ಶಿಕ್ಷಿಸಬೇಕೆಂಬುದು ನಮ್ಮ ಆಗ್ರಹವಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com