ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಅಕ್ರಮ ಆರೋಪದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದನ್ನು ವಿರೋಧಿಸಿ ಸುದ್ದಿಗೋಷ್ಠಿ ನಡೆಸುವೆ ವೇಳೆ ಹೃದಯಸ್ತಂಭನದಿಂದ ಕಾಂಗ್ರೆಸ್ ಕಾರ್ಯಕರ್ತ ಓರ್ವ ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿ ವೇಳೆ ಕಾಂಗ್ರೆಸ್ ಕಾರ್ಯಕರ್ತ ಹಾಗೂ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ಸಿ.ಕೆ. ರವಿಚಂದ್ರನ್ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ.
ಪ್ರೆಸ್‌ಕ್ಲಬ್‌ನಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಕುರ್ಚಿಯಿಂದ ಕುಸಿದು ಬಿದ್ದ ರವಿಚಂದ್ರನ್ ಅವರನ್ನು ಆಂಬುಲೆನ್ಸ್‌ನಲ್ಲಿ ಸಮೀಪದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆಸ್ಪತ್ರೆ ತಲುಪುವ ಮುನ್ನವೇ ಮೃತಪಟ್ಟಿದ್ದಾರೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.
ಬೆಂಗಳೂರು ಪ್ರೆಸ್ ಕ್ಲಬ್‌ನಲ್ಲಿ ಸೋಮವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪರವಾಗಿ ಮಾತನಾಡುತ್ತಾ ರಾಜ್ಯಪಾಲರ ವಿರುದ್ಧ ವಾಗ್ದಾಳಿ ಮಾಡುತ್ತಿದ್ದ ಕೋಲಾರ ಜಿಲ್ಲೆ ಕುರುಬರ ಸಂಘದ ಅಧ್ಯಕ್ಷ ರವಿಚಂದ್ರನ್ ಕುಸಿದುಬಿದ್ದು, ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗದಲ್ಲಿಯೇ ಸಾವನ್ನಪ್ಪಿದ್ದಾರೆ.
ಬೆಂಗಳೂರಿನ ಲಾಲ್ ಬಾಗ್ ಅವರಣದಲ್ಲಿರುವ ಪ್ರೆಸ್ ಕ್ಲಬ್‌ನಲ್ಲಿ ಸುದ್ದಿಗೋಷ್ಠಿಯಲ್ಲಿ ರವಿಚಂದ್ರನ್ ಮಾತನಾಡುತ್ತಿದ್ದರು. ರಾಜ್ಯಪಾಲರ ವಿರುದ್ಧ ಮಾತನಾಡುತ್ತಲೇ ಒಮ್ಮೆ ಶಾಕ್ ಹೊಡೆದವರಂತೆ ಮೈ ನಡುಗಿಸಿದ್ದಾರೆ. ಇದಾದ ಮರುಕ್ಷಣವೇ ಚೇರಿನ ಮೇಲಿಂದ ಕುಸಿದು ಬಿದ್ದರು. ಕೂಡಲೇ ಅವರನ್ನು ಹತ್ತಿರದ ಪೊರ್ಟೀಸ್ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯದಲ್ಲಿಯೇ ರವಿಚಂದ್ರನ್ ಅವರು ಸಾವನ್ನಪ್ಪಿದ್ದಾರೆ.
Advertisement