ನವದೆಹಲಿ: ಉದ್ದೇಶಿತ ಹತ್ಯೆಗಳು ಮತ್ತು ಇತರ ಜಿಹಾದಿ ಚಟುವಟಿಕೆಯಲ್ಲಿ ತೊಡಗಿರುವ ಕರ್ನಾಟಕ ಅಲ್-ಹಿಂದ್ ಐಸಿಸ್ ಸಂಘಟನೆಯ ಮತ್ತಿಬ್ಬರು ಶಂಕಿತ ಉಗ್ರರ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್‌ಐಎ) ಚಾರ್ಜ್ ಶೀಟ್ ಸಲ್ಲಿಸಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ನಿವಾಸಿಗಳಾದ ಅಬ್ದುಲ್ ಮಥೀನ್ ತಾಹಾ ಮತ್ತು ಮುಸ್ಸಾವಿರ್ ಹುಸೇನ್ ಶಾಜಿಬ್ ವಿರುದ್ಧ ಜಾರ್ಜ್ ಶೀಟ್ ಸಲ್ಲಿಸಲಾಗಿದೆ ಎಂದು ಎನ್ಐಎ ಪ್ರಕಟಣೆ ತಿಳಿಸಿದೆ.
"ಈ ಇಬ್ಬರು ಆರೋಪಿಗಳು ಐಸಿಸ್‌ನ ದೊಡ್ಡ ಭಯೋತ್ಪಾದನೆಯ ಪಿತೂರಿಯಲ್ಲಿ ಭಾಗಿಯಾಗಿದ್ದಾರೆ" ಎಂದು ಪ್ರಕಟಣೆ ತಿಳಿಸಿದೆ.
ಪಿತೂರಿ ಪ್ರಕರಣದಲ್ಲಿ ಸಲ್ಲಿಸಲಾದ ತನ್ನ ಎರಡನೇ ಪೂರಕ ಆರೋಪಪಟ್ಟಿಯಲ್ಲಿ, ಭಾರತೀಯ ದಂಡ ಸಂಹಿತೆ ಮತ್ತು ಕಾನೂನುಬಾಹಿರ ಚಟುವಟಿಕೆಗಳ(ತಡೆಗಟ್ಟುವಿಕೆ) ಕಾಯ್ದೆಯ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎನ್‌ಐಎ ಇಬ್ಬರ ವಿರುದ್ಧ ಆರೋಪ ಹೊರಿಸಿದೆ.
2020ರ ಜನವರಿ 23 ರಂದು ಬೆಂಗಳೂರು ನಗರ ಪೊಲೀಸರು ಪ್ರಕರಣವನ್ನು ಎನ್‌ಐಎಗೆ ವರ್ಗಾವಣೆ ಮಾಡಿದ್ದು, ಇದುವರೆಗೆ ಒಟ್ಟು 18 ಆರೋಪಿಗಳ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಕೆ ಮಾಡಲಾಗಿದೆ.
Advertisement