ಬೆಂಗಳೂರು: ನಾವು ಯೂತ್ ಕಾಂಗ್ರೆಸ್ ಅಧ್ಯಕ್ಷ ನಲಪಾಡ್ ಕಡೆಯ ಹುಡುಗರು ಎಂದು ಹೇಳಿಕೊಂಡು ವಿದ್ಯಾರ್ಥಿಯೊಬ್ಬನನ್ನು ಕಿಡ್ನಾಪ್ ಮಾಡಿ ಆತನ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 9 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.
ಕಿಡ್ನಾಪ್ ಮಾಡಿ ಸುಲಿಗೆ ಮಾಡಿರುವ ಕುರಿತು ನಾಲ್ವರ ವಿರುದ್ಧ ಜೀವನ್ ಜೈನ್ ಎಂಬ ವಿದ್ಯಾರ್ಥಿ ಆರೋಪ ಮಾಡಿದ್ದಾನೆ. ಖಾಸಗಿ ಕಾಲೇಜಿನಲ್ಲಿ ಬಿಬಿಎ ಓದುತ್ತಿರುವ ಜೀವನ್ ಜೈನ್ ಎಂಬ ವಿದ್ಯಾರ್ಥಿ ಕಳೆದ ವರ್ಷ ಆಯುಷ್ ಶ್ರೀನಿವಾಸ್ ಎಂಬಾತನಿಂದ ಮೂರು ಲಕ್ಷ ಸಾಲ ಪಡೆದಿದ್ದ. ಇವೆಂಟ್ ಒಂದರ ವಿಚಾರವಾಗಿ ಹಣ ಪಡೆದಿದ್ದ. ಆದರೆ ಕಾರಣಾಂತರಗಳಿಂದಾಗಿ ಜೀವನ್ ಹೇಳಿದ ಸಮಯಕ್ಕೆ ಹಣ ನೀಡಲು ಆಗಿರಲಿಲ್ಲ. ತಡವಾಗಿ ಸಾಲ ತೀರಿಸಿದ್ದ. ಆದರೆ ಕಿಡಿಗೇಡಿಗಳು ಸಾಲ ತೀರಿಸಿದರೂ ಆತನನ್ನು ಬಿಡದೆ ಮತ್ತಷ್ಟು ಹಣಕ್ಕಾಗಿ ಕಿರುಕುಳ ನೀಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಲೇಟಾಗಿ ಹಣ ಕೊಟ್ಟಿದ್ದಕ್ಕೆ ಕಿಡ್ನಾಪ್ ಮಾಡಿ ಬೆದರಿಸಲಾಗಿದೆ. ನಾವು ನಲಪಾಡ್ ಹುಡುಗರು, ಹತ್ತು ಲಕ್ಷ ಕೊಡಬೇಕು ಎಂದು ಬೆದರಿಕೆ ಹಾಕಿದ್ದಾರೆ. ಆರು ಲಕ್ಷ ರೂಪಾಯಿ ಹಾಕಿಸಿಕೊಂಡಿದ್ದಲ್ಲದೆ ಹತ್ತು ಲಕ್ಷದವರೆಗೆ ಕೊಡಬೇಕು ಎಂದು ಬೆದರಿಸಿದ್ದಾರೆ ಎಂದು ದೂರಿನಲ್ಲಿ ವಿದ್ಯಾರ್ಥಿ ತಿಳಿಸಿದ್ದಾನೆ. ಪೊಲೀಸ್ ಕಮಿಷನರ್‌ಗೆ ಮೇಲ್ ಮಾಡಿ ದೂರು ನೀಡಿದ್ದಾನೆ.
ನನ್ನನ್ನು ಬಲವಂತ ಬೆಟ್ಟಿಂಗ್ ಬಲೆಗೆ ಬೀಳಿಸಿದ್ದಾರೆ ಎಂಬ ಆರೋಪ ಮಾಡಿದ್ದಾನೆ. ಕಿಡ್ನ್ಯಾಪ್ ಮಾಡಿ ಹಣಕ್ಕೆ ಬೇಡಿಕೆ ಇಟ್ಟು ಬೆತ್ತಲೆಗೊಳಿಸಿದ್ದಾರೆ. ಅಷ್ಟೇ ಅಲ್ಲದೆ ಬೆತ್ತಲೆ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆಹಾಕಿದ್ದಾರೆ. ಆ ಬಳಿಕ 6 ಲಕ್ಷಕ್ಕೆ ಡಿಮ್ಯಾಂಡ್ ಮಾಡಿ ಹಣ ಪಡೆದಿದ್ದಾರೆ. ಅದಾದ ಬಳಿಕವೂ ಮನೆಗೆ ಬಂದು ಸಾಲ ಪಡೆಯುವಂತೆ ಬೆದರಿಕೆ ಹಾಕಿದ್ದಾರೆ. ಸಾಲ ಕೊಟ್ಟು ಹೆಚ್ಚು ಬಡ್ಡಿ ಹಾಕಿ ಕಿರುಕುಳ ನೀಡಿದ್ದಾರೆ ಎಂದು ಯುವಕ ಜೀವನ್ ಆರೋಪ ಮಾಡಿದ್ದಾರೆ. ಸದ್ಯ ದೂರಿನಲ್ಲಿ ಒಂಬತ್ತು ಜನರ ವಿರುದ್ಧ ಕಿಡ್ನಾಪ್ ಹಾಗೂ ಸುಲಿಗೆ ಮಾಡಿರೋ ಆರೋಪ ಮಾಡಿ ಯುವಕ ದೂರು ನೀಡಿದ್ದಾನೆ. ಕೆಂಗೇರಿ ಪೊಲೀಸ್ ಠಾಣೆಯಲ್ಲಿ 9 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.
Advertisement