ಸಿದ್ದರಾಮಯ್ಯ ಆಡಳಿತದಲ್ಲಿ ಮಹಿಳೆಯರ ಮೇಲೆ ದೌರ್ಜನ್ಯ: ಸರ್ಕಾರವೇ ಸ್ತ್ರೀಕುಲ ಪೀಡಕರ ರಕ್ಷಣೆಗೆ ನಿಂತಿದೆ- ವಿಜಯೇಂದ್ರ

ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ.
ಬಿ ವೈ ವಿಜಯೇಂದ್ರ
ಬಿ ವೈ ವಿಜಯೇಂದ್ರ
Updated on

ಬೆಂಗಳೂರು: ಬೆಂಗಳೂರಿನಲ್ಲಿ ಆಟೋದಲ್ಲಿ ತೆರಳುತ್ತಿದ್ದ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಖಂಡಿಸಿದ್ದಾರೆ.

ಈ ಸಂಬಂಧ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಟ್ಟೀಟ್ ಮಾಡಿರುವ ಅವರು, ರಾಜ್ಯದ ಕಾಂಗ್ರೆಸ್ ಸರ್ಕಾರದಲ್ಲಿ ಸ್ತ್ರೀ ಪೀಡಕರು, ದುರುಳರು, ಅತ್ಯಾಚಾರಿಗಳ ಅಟ್ಟಹಾಸ ವಿಪರೀತಕ್ಕೆ ಹೋಗುತ್ತಿದೆ. ಸರಣಿ ರೂಪದಲ್ಲಿ ಮಹಿಳಾ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿವೆ.

ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಆಟೋ ದಲ್ಲಿ ಹೋಗುತ್ತಿದ್ದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಅತ್ಯಂತ ಹೇಯ ಹಾಗೂ ರಾಕ್ಷಸೀ ಕೃತ್ಯವಾಗಿದೆ. ಮರುಕಳಿಸುತ್ತಲೇ ಇರುವ ಇಂಥಾ ಘಟನೆಗಳಿಂದ ಕರ್ನಾಟಕ ರಾಷ್ಟ್ರಮಟ್ಟದಲ್ಲಿ ತಲೆತಗ್ಗಿಸುವಂತಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ರಾಜ್ಯದ ಘನತೆ ಕುಗ್ಗುತ್ತಿದೆ. ಮುಖ್ಯಮಂತ್ರಿಯಾದಿಯಾಗಿ ಸರ್ಕಾರದ ಯಾರೊಬ್ಬರೂ ಈ ಬಗ್ಗೆ ಗಂಭೀರತೆ ಪ್ರದರ್ಶಿಸದೇ ಉಡಾಫೆ ಧೋರಣೆ ಅನುಸರಿಸುತ್ತಿರುವ ಪರಿ ನೋಡಿದರೆ ‘ಸರ್ಕಾರವೇ ಸ್ತ್ರೀ ಕುಲ ಪೀಡಕರ ರಕ್ಷಣೆಗೆ’ ನಿಂತಿರುವ ಅನುಮಾನ ಮೂಡಿಸುತ್ತಿದೆ. ತಕ್ಷಣವೇ ಯುವತಿಯ ರಕ್ಷಣೆಗೆ ಮುಂದಾಗಿ ಪೈಶಾಚಿಕ ಕೃತ್ಯ ಎಸಗಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ್ದಾರೆ.

ಬಿ ವೈ ವಿಜಯೇಂದ್ರ
ಯಡಿಯೂರಪ್ಪ ವಿರುದ್ಧದ ಪೊಕ್ಸೋ ಪ್ರಕರಣ: ಕೋರ್ಟ್ ತಡೆಯಾಜ್ಞೆ ತೆರವಿಗೆ ಅಡ್ವೊಕೇಟ್ ಜನರಲ್‌ಗೆ ಸೂಚನೆ - ಪರಮೇಶ್ವರ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com