ಮಂಗಳೂರು: ಹಿಂಸೆಗೆ ತಿರುಗಿದ ಕಾಂಗ್ರೆಸ್ ಪ್ರತಿಭಟನೆ, ಬಸ್ ಗೆ ಕಲ್ಲು, ಮಹಿಳೆ ಕಣ್ಣಿಗೆ ಗಾಯ

ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಸ್ಟೇಟ್ ಬ್ಯಾಂಕ್ ಮತ್ತು ಜೋಕಟ್ಟೆ ನಡುವೆ ಸಂಚರಿಸುತ್ತಿದ್ದ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣವಾಗಿ ಪುಡಿ ಪುಡಿಯಾಗಿದೆ.
ಕಲ್ಲು ತೂರಾಟದಿಂದ ಬಸ್ ಗಾಜು ಪುಡಿ ಪುಡಿಯಾಗಿರುವ ಚಿತ್ರ
ಕಲ್ಲು ತೂರಾಟದಿಂದ ಬಸ್ ಗಾಜು ಪುಡಿ ಪುಡಿಯಾಗಿರುವ ಚಿತ್ರ
Updated on

ಮಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕಾಂಗ್ರೆಸ್ ಸೋಮವಾರ ಮಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನಾ ಸಭೆ ಹಿಂಸಾಚಾರಕ್ಕೆ ತಿರುಗಿದ್ದು, ಲಾಲ್ ಭಾಗ್ ಜಂಕ್ಷನ್ ಬಳಿ ನಡೆದ ಕಲ್ಲು ತೂರಾಟದಲ್ಲಿ ಬಸ್ ಸೇರಿದಂತೆ ಕೆಲವು ವಾಹನಗಳಿಗೆ ಹಾನಿಯಾಗಿದೆ. ಘಟನೆಯಲ್ಲಿ 60 ವರ್ಷದ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ.

ಪಾದಯಾತ್ರೆ ಬಳಿಕ ಸಭೆ ಮುಗಿಯುತ್ತಲೇ ರಸ್ತೆಗಳಿದ ಕಾರ್ಯಕರ್ತರು ಅಲ್ಲೇ ಸಂಚರಿಸುತ್ತಿದ್ದ ಸ್ಟೇಟ್ ಬ್ಯಾಂಕ್ ಮತ್ತು ಜೋಕಟ್ಟೆ ನಡುವೆ ಸಂಚರಿಸುತ್ತಿದ್ದ ಬಸ್ ಗೆ ಕಲ್ಲು ಎಸೆದಿದ್ದಾರೆ. ಪರಿಣಾಮ ಬಸ್ ನ ಎದುರಿನ ಗಾಜು ಸಂಪೂರ್ಣವಾಗಿ ಪುಡಿ ಪುಡಿಯಾಗಿದೆ.

ಈ ವೇಳೆ ಜೋಕಟ್ಟೆ ನಿವಾಸಿ ಮೈಮೂನಾ ಅವರ ಎಡಗಣ್ಣಿಗೆ ಗಾಜಿನ ಚೂರು ಬಿದ್ದು ಗಾಯಗೊಂಡಿದ್ದರು. ನಂತರ ಸಮೀಪದ ಖಾಸಗಿ ಕಣ್ಣಿನ ಆಸ್ಪತ್ರೆಯಲ್ಲಿ ಅವರಿಗೆ ಚಿಕಿತ್ಸೆ ಒದಗಿಸಲಾಗಿದೆ.ಬಸ್ ಗೆ ಕಲ್ಲು ತೂರಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಕಲ್ಲು ತೂರಾಟದಿಂದ ಬಸ್ ಗಾಜು ಪುಡಿ ಪುಡಿಯಾಗಿರುವ ಚಿತ್ರ
'ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ'; ರಾಜ್ಯಪಾಲ ಗೆಹ್ಲೋಟ್'ಗೆ ಕಾಂಗ್ರೆಸ್ MLC ಐವನ್ ಡಿಸೋಜಾ ಎಚ್ಚರಿಕೆ!

ಶಾಹುಲ್ ಹಮೀದ್, ಅನ್ವರ್ ಮತ್ತು ಕಿಶೋರ್ ಶೆಟ್ಟಿ ಬಂಧಿತ ಆರೋಪಿಗಳಾಗಿದ್ದು, ಇನ್ನೂ ಹಲವರ ಬಂಧನಕ್ಕೆ ಪೊಲೀಸರು ಪ್ರಯತ್ನ ಮುಂದುವರೆಸಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ ವಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com