
ಬೆಂಗಳೂರು: ರಾಮನಗರವನ್ನು ಬೆಂಗಳೂರಿನ ದಕ್ಷಿಣ ಕ್ಷೇತ್ರ ಎಂದು ಹೆಸರು ಬದಲಾವಣೆ ಮಾಡಿದ್ದ ರಾಜ್ಯ ಸರ್ಕಾರ ಇದೀಗ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯ ಹೆಸರು ಬದಲಾವಣೆ ಮಾಡುವ ಯೋಜನೆಯಲ್ಲಿದೆ. ಎಲೆಕ್ಟ್ರಾನಿಕ್ ಸಿಟಿಯ ಹೆಸರನ್ನು ಬದಲಿಸುವುದಾಗಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ಆಯೋಜಿಸಲಾಗಿದ್ದ, ಮಾಜಿ ಮುಖ್ಯಮಂತ್ರಿ ದಿವಂಗತ ಡಿ.ದೇವರಾಜ ಅರಸು ಅವರ 109ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಗೆ ದೇವರಾಜ ಅರಸು ಎಲೆಕ್ಟ್ರಾನಿಕ್ ಸಿಟಿ ಎಂದು ನಾಮಕರಣ ಮಾಡಲಾಗುವುದು ಎಂದು ಹೇಳಿದರು. ಅಲ್ಲದೆ ದೇವರಾಜ ಅರಸು ಅವರಿಗೆ ಮರಣೋತ್ತರ ಭಾರತ ರತ್ನ ಪ್ರಶಸ್ತಿ ನೀಡಲು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದರು.
ದೇವರಾಜ ಅರಸು ಗುಣಗಾನ ಮಾಡಿದ ಸಿಎಂ ಸಿದ್ದರಾಮಯ್ಯ ʼಹಿಂದುಳಿದವರನ್ನ ತುಳಿಯಲು ಈಗಲೂ ನಿರಂತರವಾಗಿ ಹುನ್ನಾರಗಳು ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿಗಳು ಇದನ್ನ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.
1956 ನವೆಂಬರ್ 1ರಂದು ಕರ್ನಾಟಕ ಏಕೀಕರಣ ಆಗಿದ್ದರೂ, ದೇವರಾಜ ಅರಸು ಅವರು 1973ರಲ್ಲಿ ಕರ್ನಾಟಕ ಎಂದು ನಾಮಕರಣ ಮಾಡಿದರು. ಹೀಗಾಗಿ ನವೆಂಬರ್ 1 ರಂದು ಕನ್ನಡ ಭುವನೇಶ್ವರಿ ಪ್ರತಿಮೆಯನ್ನು ವಿಧಾನಸೌಧ ಮುಂಭಾಗದಲ್ಲಿ ಅನಾವರಣಗೊಳಿಸಲಾಗುವುದು ಎಂದರು.
ಹಿಂದುಳಿದವರನ್ನ ತುಳಿಯಲು ಪ್ರಯತ್ನಗಳು ಈಗಲೂ ನಿರಂತರವಾಗಿ ನಡೆಯುತ್ತಿವೆ. ನಾನು ಮುಖ್ಯಮಂತ್ರಿ ಆದ ಮೇಲೆ ಬಡವರಿಗಾಗಿ, ಮಹಿಳೆಯರಿಗಾಗಿ, ರೈತರಿಗೆ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದ್ದೇವೆ. ಐದು ಗ್ಯಾರಂಟಿ ಯೋಜನೆಗಳು ಬಡವರು, ಮಹಿಳೆಯರು, ರೈತರು, ಯುವಕರ ಪರವಾಗಿದೆ. ಆದರೆ ಬದಲಾವಣೆ ಬಯಸದ, ಬಡವರ ವಿರೋಧಿಗಳು ಇದನ್ನ ವಿರೋಧಿಸುತ್ತಿದ್ದಾರೆ ಎಂದು ಹೇಳಿದರು.
Advertisement