ಮಂಗಳೂರು: ಫುಟ್ಬಾಲ್ ಪಂದ್ಯದ ವೇಳೆ ಎರಡು ಕಾಲೇಜು ವಿದ್ಯಾರ್ಥಿಗಳ ನಡುವೆ ಗಲಭೆ ಉಂಟಾಗಿ, ತಂಡವೊಂದು ವಿದ್ಯಾರ್ಥಿಗಳನ್ನು ಅಪಹರಿಸಿ ಅಮಾನುಷವಾಗಿ, ಹಲ್ಲೆಗೈದಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ.
ಪ್ರಕರಣ ಸಂಬಂಧ ಮಂಗಳೂರು ನಗರ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಮಂಗಳೂರು ನಗರದ ನೆಹರೂ ಮೈದಾನದಲ್ಲಿ ಕಳೆದ ಆ.14ರಂದು ಎರಡು ಪ್ರತಿಷ್ಠಿತ ಕಾಲೇಜು ವಿದ್ಯಾರ್ಥಿಗಳ ಮಧ್ಯೆ ಫುಟ್ಬಾಲ್ ಟೂರ್ನಮೆಂಟ್ ನಡೆದಿತ್ತು. ಈ ವೇಳೆ ತಂಡಕ್ಕೆ ಬೆಂಬಲಿಸಿದ ದ್ವೇಷದಲ್ಲಿ ಮತ್ತೊಂದು ತಂಡದ ವಿದ್ಯಾರ್ಥಿಗಳು ಇವರನ್ನು ಅಪಹರಿಸಿದ್ದಾರೆ. ಆಗಸ್ಟ್ 19ರ ಸೋಮವಾರ ಸಂಜೆ ಇವರನ್ನು ಪಾಂಡೇಶ್ವರದ ಫೋರಂ ಮಾಲ್ ಬಳಿಯಿಂದ ಕಾರಿನಲ್ಲಿ ಅಪಹರಿಸಿದ್ದು, ಮಹಾಕಾಳಿ ಪಡ್ಪು ಎಂಬಲ್ಲಿಗೆ ಕರೆದೊಯ್ದು ಹಲ್ಲೆ ನಡೆಸಿರುವುದಾಗಿ ವರದಿಯಾಗಿದೆ. ಆರೋಪಿಗಳು ಸಂತ್ರಸ್ತರ ಮೇಲೆ ಹಲ್ಲೆ ನಡೆಸುವಾಗ ಚಿತ್ರೀಕರಿಸಿದ್ದಾರೆ, ಹಲ್ಲೆ ನಡೆಸಿದ ನಂತರ ಸಂತ್ರಸ್ತರನ್ನು ಬಿಡಲಾಯಿತು.
ದೂರಿನ ಮೇರೆಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಕಲಂ 109, 115(2), 118(1), 127(2), 137(2), 189(2), 190, 191(1) ಅಡಿಯಲ್ಲಿ ಪ್ರಕರಣ ದಾಖಲಾಗಿರುತ್ತದೆ.
Advertisement