ಮಣ್ಣು ತೆರವು ಕಾರ್ಯ ಪೂರ್ಣ: ಮಂಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭ

ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ.
ಸಕಲೇಶಪುರ ಮತ್ತು ಬಾಳ್ಳುಪೇಟೆ ರೈಲು ಹಳಿಗಳ ಮೇಲೆ ಬಿದ್ದಿದ್ದ ಮಣ್ಣು ತೆರವುಗೊಳಿಸಿರುವುದು.
ಸಕಲೇಶಪುರ ಮತ್ತು ಬಾಳ್ಳುಪೇಟೆ ರೈಲು ಹಳಿಗಳ ಮೇಲೆ ಬಿದ್ದಿದ್ದ ಮಣ್ಣು ತೆರವುಗೊಳಿಸಿರುವುದು.
Updated on

ಮಂಗಳೂರು: ಸಕಲೇಶಪುರ-ಬಾಳ್ಳುಪೇಟೆ ನಡುವಿನ ಮಂಗಳೂರು-ಬೆಂಗಳೂರು ರೈಲು ಹಳಿ ಮೇಲೆ ಗುಡ್ಡ ಕುಸಿತದಿಂದ ಬಿದ್ದಿದ್ದ ಮಣ್ಣು ತೆರವು ಕಾರ್ಯಾಚರಣೆ ಸಂಪೂರ್ಣಗೊಂಡಿದ್ದು, ಇದರ ಬೆನ್ನಲ್ಲೇ ರೈಲು ಸಂಚಾರ ಮತ್ತೆ ಆರಂಭಗೊಂಡಿದೆ.

ರೈಲು ಮಾರ್ಗಕ್ಕೆ ಬಿದ್ದಿದ್ದ ಮಣ್ಣನ್ನು ತೆರವು ಮಾಡುವ ಕಾರ್ಯವು ಸೋಮವಾರ ಸಂಜೆಗೆ ಪೂರ್ಣಗೊಂಡಿದೆ. ರೈಲು ಮಾರ್ಗವನ್ನು ರೈಲುಗಳ ಸಂಚಾರಕ್ಕೆ ಮುಕ್ತವಾಗುವಂತೆ ಮತ್ತೆ ಮರು ಹೊಂದಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಇಂದು (ಆಗಸ್ಟ್ 20) ಸಂಚರಿಸಬೇಕಿದ್ದ 07378 ಮಂಗಳೂರು ಸೆಂಟ್ರಲ್-ವಿಜಯಪುರ ಎಕ್ಸ್ ಪ್ರೆಸ್ ರೈಲು ಮಾತ್ರ ರದ್ದಾಗಿದ್ದು, ಉಳಿದ ಎಲ್ಲಾ ರೈಲುಗಲು ನಿಗದಿತ ದಿನಾಂಕ ಹಾಗೂ ಸಮಯದ ಪ್ರಕಾರ ಸಂಚರಿಸಲಿದೆ. ಮಣ್ಣು ಕುಸಿತಗೊಂಡ ಸ್ಥಳದಲ್ಲಿ ರೈಲು ಸಂಚಾರದ ವೇಗಕ್ಕೆ ಮಿತಿ ಹೇರಲಾಗಿದೆ. ಮೇಲ್ಭಾಗದಿಂದಲೇ ಮಣ್ಣನ್ನು ತೆರವು ಗೊಳಿಸುವ ಮೂಲಕ ಸಂಚಾರಕ್ಕೆ ಮಾರ್ಗವನ್ನು ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದ್ದಾರೆ.

ಸಕಲೇಶಪುರ ಮತ್ತು ಬಾಳ್ಳುಪೇಟೆ ರೈಲು ಹಳಿಗಳ ಮೇಲೆ ಬಿದ್ದಿದ್ದ ಮಣ್ಣು ತೆರವುಗೊಳಿಸಿರುವುದು.
Bengaluru Mangaluru Train: ಬಾಳ್ಳುಪೇಟೆ, ಸಕಲೇಶಪುರ ನಿಲ್ದಾಣ ನಡುವೆ ಮತ್ತೆ ಭೂಕುಸಿತ; ರೈಲು ಸಂಚಾರ ಸ್ಥಗಿತ

ವಾರದ ಹಿಂದೆ ಗುಡ್ಡ ಕುಸಿದಿದ್ದ ಜಾಗದಲ್ಲಿ ಶುಕ್ರವಾರ ಮತ್ತೆ ಮಣ್ಣು ಕುಸಿದಿತ್ತು. ಇದೇ ಕಾರಣಕ್ಕೆ ರೈಲು ಸಂಚಾರವನ್ನು ಮತ್ತೊಮ್ಮೆ ಸ್ಥಗಿತಗೊಳಿಸಲಾಗಿತ್ತು. ಮೂರು ದಿನಗಳಿಂದ ಮಣ್ಣು ತೆರವು ಕಾರ್ಯ ನಡೆಸಲಾಗಿತ್ತು. ಇದೀಗ ಮರಳಿ ರೈಲು ಸೇವೆಗಳು ಪ್ರಾರಂಭವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com