ಗವರ್ನರ್ ವಿರುದ್ಧ ಪ್ರತಿಭಟನೆ: ರಾಜ್ಯಪಾಲರಿಗೆ ಝಡ್-ಪ್ಲಸ್ ಭದ್ರತೆ, ಬುಲೆಟ್ ಪ್ರೂಫ್ ಕಾರು

ಮಂಗಳವಾರ ಬೆಳಗ್ಗೆಯಿಂದ ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರನ್ನು ಬಳಸಲು ಆರಂಭಿಸಿದ್ದಾರೆ ಎಂದು ರಾಜಭವನ ಮೂಲಗಳು ಪಿಟಿಐಗೆ ತಿಳಿಸಿವೆ.
ಬುಲೆಟ್ ಪ್ರೂಫ್ ಕಾರಿನಲ್ಲಿ ರಾಜ್ಯಪಾಲರು
ಬುಲೆಟ್ ಪ್ರೂಫ್ ಕಾರಿನಲ್ಲಿ ರಾಜ್ಯಪಾಲರು
Updated on

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದ ಸೈಟು ಹಂಚಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್​ ಅನುಮತಿ ನೀಡಿದ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರ ವಿರುದ್ಧ ರಾಜ್ಯದಲ್ಲಿ ಭಾರೀ ಪ್ರತಿಭಟನೆಗಳ ಹಿನ್ನೆಲೆಯಲ್ಲಿ ರಾಜ್ಯ ಸಾಂವಿಧಾನಿಕ ಮುಖ್ಯಸ್ಥರ ಭದ್ರತೆಯನ್ನು ಬಿಗಿಗೊಳಿಸಲಾಗಿದೆ ಎಂದು ರಾಜಭವನದ ಮೂಲಗಳು ಬುಧವಾರ ತಿಳಿಸಿವೆ.

ಮಂಗಳವಾರ ಬೆಳಗ್ಗೆಯಿಂದ ರಾಜ್ಯಪಾಲರು ಬುಲೆಟ್ ಪ್ರೂಫ್ ಕಾರನ್ನು ಬಳಸಲು ಆರಂಭಿಸಿದ್ದಾರೆ ಎಂದು ರಾಜಭವನ ಮೂಲಗಳು ಪಿಟಿಐಗೆ ತಿಳಿಸಿವೆ.

"ಎಲ್ಲಾ ರಾಜ್ಯಪಾಲರು ಝಡ್-ಪ್ಲಸ್ ಭದ್ರತೆಗೆ ಅರ್ಹರಾಗಿರುತ್ತಾರೆ. ಆದರೆ ಗೆಹ್ಲೋಟ್ ಅವರು ಇಲ್ಲಿಯವರೆಗೆ ಅದನ್ನು ಬಳಸುತ್ತಿರಲಿಲ್ಲ. ಏಕೆಂದರೆ ಅವರಿಗೆ ಅದರ ಅಗತ್ಯವಿಲ್ಲ ಎಂದು ಭಾವಿಸಿದ್ದರು. ಆದರೆ ಈಗ ಅವರ ಭದ್ರತೆಯನ್ನು ಬಿಗಿಗೊಳಿಸಲಾಗಿದೆ" ಎಂದು ಮೂಲಗಳು ತಿಳಿಸಿವೆ.

ಬುಲೆಟ್ ಪ್ರೂಫ್ ಕಾರಿನಲ್ಲಿ ರಾಜ್ಯಪಾಲರು
'ಬಾಂಗ್ಲಾ ಪ್ರಧಾನಿಗೆ ಆದ ಗತಿಯೇ ನಿಮಗೂ'; ರಾಜ್ಯಪಾಲ ಗೆಹ್ಲೋಟ್'ಗೆ ಕಾಂಗ್ರೆಸ್ MLC ಐವನ್ ಡಿಸೋಜಾ ಎಚ್ಚರಿಕೆ!

ಗೆಹ್ಲೋಟ್ ಅವರಿಗೆ ಝಡ್-ಪ್ಲಸ್ ಭದ್ರತೆ ನೀಡಲಾಗುವುದು ಎಂದು ಪಿಟಿಐ ಮೂಲಗಳು ತಿಳಿಸಿವೆ.

ಸಾಮಾನ್ಯವಾಗಿ ರಾಜ್ಯಪಾಲರಿಗೆ ಬುಲೆಟ್‌ ಪ್ರೂಫ್ ಕಾರಿನಲ್ಲಿ ಓಡಾಡಲು ಅವಕಾಶವಿರುತ್ತದೆ. ಅದನ್ನು ಗುಪ್ತಚರ ಇಲಾಖೆಯಿಂದ ಯಾವಾಗ ಬೇಕಾದರೂ ತರಿಸಿಕೊಂಡು ಅವರು ಅದರಲ್ಲಿ ಓಡಾಡಬಹುದು. ಆದರೆ, ಗೆಹ್ಲೋಟ್‌ ಅವರು, ಕರ್ನಾಟಕಕ್ಕೆ ರಾಜ್ಯಪಾಲರಾಗಿ ಬಂದಾಗಿನಿಂದ ಸಾಮಾನ್ಯ ಕಾರಿನಲ್ಲೇ ಓಡಾಡುತ್ತಿದ್ದರು. ಆದರೀಗ, ಆ. 21ರಿಂದ ಬುಲೆಟ್‌ ಪೂ್‌ ಕಾರಿನಲ್ಲಿ ಓಡಾಡಲು ಆರಂಭಿಸಿದ್ದಾರೆ. ಇದು ಈಗ ಕುತೂಹಲಕ್ಕೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com