ಲೋಕಾಯುಕ್ತರಿಂದ ಕೆರೆಗಳ ಪರಿಶೀಲನೆ: ಒತ್ತುವರಿ ತೆರವುಗೊಳಿಸುವಂತೆ ಆದೇಶ

ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯ ಭಾಗವಾಗಿ ಲೋಕಾಯುಕ್ತರು, ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ನಗರದ ವಿಭೂತಿಕೆರೆ ಮತ್ತು ದೊಡ್ಡನೆಕ್ಕುಂದಿ ಕೆರೆಗಳಿಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಲೋಕಾಯುಕ್ತ ಕಚೇರಿ
ಲೋಕಾಯುಕ್ತ ಕಚೇರಿ
Updated on

ಬೆಂಗಳೂರು: ಮಹದೇವಪುರ ವಲಯದ ಕೆರೆ ಕಳಪೆ ನಿರ್ವಹಣೆ ಕುರಿತು ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್.ಪಾಟೀಲ್ ಅವರು ಮಂಗಳವಾರ ಕೆರೆ ಪರಿಶೀಲನೆ ನಡೆಸಿದ್ದು, ಒತ್ತುವರಿ ತೆರವು ಮಾಡಿ ತಿಂಗಳೊಳಗೆ ವರದಿ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿ ಸಂಬಂಧ ದಾಖಲಿಸಿಕೊಂಡಿರುವ ಸ್ವಯಂಪ್ರೇರಿತ ಪ್ರಕರಣದ ವಿಚಾರಣೆಯ ಭಾಗವಾಗಿ ಲೋಕಾಯುಕ್ತರು, ಉಪ ಲೋಕಾಯುಕ್ತ ನ್ಯಾಯಮೂರ್ತಿಗಳಾದ ಕೆ.ಎನ್‌.ಫಣೀಂದ್ರ ಮತ್ತು ಬಿ.ವೀರಪ್ಪ ಅವರು ನಗರದ ವಿಭೂತಿಕೆರೆ ಮತ್ತು ದೊಡ್ಡನೆಕ್ಕುಂದಿ ಕೆರೆಗಳಿಗೆ ಮಂಗಳವಾರ ಭೇಟಿ ನೀಡಿ, ಪರಿಶೀಲನೆ ನಡೆಸಿದರು.

ಪರಿಶೀಲನೆ ವೇಳೆ ಬಿಬಿಎಂಪಿ, ಮಾಲಿನ್ಯ ನಿಯಂತ್ರಣ ಮಂಡಳಿ, ಕೆರೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಪರಿಶೀಲನೆ ವೇಳೆ ವಿಭೂತಿಕೆರೆಯಲ್ಲಿ ನೀರು ಸಂಗ್ರಹವಾಗದೇ ಇರುವುದನ್ನು ಗಮನಿಸಿದ ಲೋಕಾಯುಕ್ತರು, ಆ ಬಗ್ಗೆ ಅಧಿಕಾರಿಗಳನ್ನು ಪ್ರಶ್ನಿಸಿದರು. ಈ ವೇಳೆ ಅಧಿಕಾರಿಗಳು ಮಳೆ ಕೊರತೆಯಿಂದ ನೀರು ಸಂಗ್ರಹವಾಗಿಲ್ಲ ಎಂದು ಉತ್ತರಿಸಿದರು.

ಆದರೆ ಸ್ಥಳೀಯರು, ಕೆರೆಗೆ ನೀರು ಹರಿದುಬರುವ ರಾಜಕಾಲುವೆ ಮತ್ತು ಮಳೆ ನೀರಿನ ಕಾಲುವೆಗಳು ಮುಚ್ಚಿಹೋಗಿವೆ. ನೀರು ಬಂದರೆ ಸುತ್ತಮುತ್ತಲಿನ ಕೊಳವೆಬಾವಿಗಳಿಗೆ ನೀರು ಬರುತ್ತದೆ. ಇದರಿಂದ ಟ್ಯಾಂಕರ್ ನೀರು ವ್ಯವಹಾರ ಮಾಡುವವರಿಗೆ ನಷ್ಟವಾಗುತ್ತದೆ. ಅವರ ಪ್ರಭಾವದಿಂದ ಒತ್ತುವರಿಯನ್ನು ಹಾಗೇ ಬಿಡಲಾಗಿದೆ ಎಂದು ಲೋಕಾಯುಕ್ತರಿಗೆ ಮಾಹಿತಿ ನೀಡಿದರು.

ಲೋಕಾಯುಕ್ತ ಕಚೇರಿ
ಸರ್ಕಾರಿ ಕಚೇರಿಗಳಲ್ಲಿ ಲಂಚಕ್ಕಾಗಿ ಮಧ್ಯವರ್ತಿಗಳ ನೆರವು, ಹೊಸ ಟ್ರೆಂಡ್: ಲೋಕಾಯುಕ್ತ ನ್ಯಾಯಾಲಯ

ಈ ವೇಳೆ ಕಾಲುವೆಗಳು ಮುಚ್ಚಿಹೋಗಿರುವುದು ಮತ್ತು ಕೆರೆಯ ಅಂಗಳದಲ್ಲಿ ಕಟ್ಟಡಗಳು ನಿರ್ಮಾಣವಾಗಿರುವುದನ್ನು ಕಂಡ ಲೋಕಾಯುಕ್ತರು, ‘ಕೆರೆಯ ಜಾಗ ಎಷ್ಟು ಒತ್ತುವರಿಯಾಗಿದೆ ಎಂಬುದನ್ನು ಪತ್ತೆ ಮಾಡಲು ಭೂಮಾಪನ ನಡೆಸಿ, 20 ದಿನಗಳಲ್ಲಿ ವರದಿ ನೀಡಿ’ ಎಂದು ಭೂ ದಾಖಲೆಗಳ ಸಹಾಯಕ ನಿರ್ದೇಶಕರಿಗೆ ಸೂಚನೆ ನೀಡಿದರು.

ಕೆರೆಯ ಅಂಗಳದಲ್ಲಿ ನಿರ್ಮಿಸಲಾಗಿರುವ ಕಟ್ಟಡಗಳನ್ನು ಒಡೆದುಹಾಕಲು ತಕ್ಷಣವೇ ಕ್ರಮ ತೆಗೆದುಕೊಳ್ಳಿ. ಎಲ್ಲಾ ಒತ್ತುವರಿಯನ್ನು ಒಂದು ತಿಂಗಳ ಒಳಗೆ ತೆರವು ಮಾಡಿ ಎಂದು ಬಿಬಿಎಂಪಿ ಅಧಿಕಾರಿಗಳಿಗೆ ಸೂಚಿಸಿದರು.

ಕೆರೆ ಪ್ರದೇಶದಲ್ಲಿ ಭದ್ರತೆ ಇಲ್ಲ ಎಂದು ಸಾರ್ವಜನಿಕರು ದೂರಿದಾಗ, ಬೆಳಿಗ್ಗೆ ಮತ್ತು ಸಂಜೆ ಗಸ್ತು ಹಾಕುವಂತೆ ಪೊಲೀಸ್‌ ಅಧಿಕಾರಿಗಳಿಗೆ ಹೇಳಿದರು.

ಬಳಿಕ ಲೋಕಾಯುಕ್ತ ತಂಡ ದೊಡ್ಡನೆಕ್ಕುಂದಿ ಕೆರೆಗೂ ಭೇಟಿ ನೀಡಿ ಪರಿಶೀಲನೆ ನಡೆಸಿತು. ಈವೇಳೆ ಸುಮಾರು 2 ಎಕರೆ 6 ಗುಂಟಾ ಜಾಗ ಒತ್ತುವರಿಯಾಗಿದೆ ಎಂದು ಸರ್ವೇಯರ್ ಮಾಹಿತಿ ನೀಡಿದರು.

ಈ ವೇಳೆ ಸ್ಥಳೀಯ ನಿವಾಸಿಗಳು, ಕೆರೆ ಜಾಗವನ್ನು ಒತ್ತುವರಿ ಮಾಡಿಕೊಂಡು ಅಪಾರ್ಟ್‌ಮೆಂಟ್‌, ವಿಲ್ಲಾಗಳನ್ನು ನಿರ್ಮಿಸಲಾಗುತ್ತಿದೆ ಎಂದು ಆರೋಪಿಸಿದರು.

ಈ ವೇಳೆ ಮಾತನಾಡಿದ ಲೋಕಾಯುಕ್ತರು, ದೊಡ್ಡನೆಕ್ಕುಂದಿ ಕೆರೆಯ ಅಭಿವೃದ್ಧಿಗೆ ರೂ.14 ಕೋಟಿ ಬಿಡುಗಡೆಯಾಗಿದ್ದು, ಹಣವನ್ನು ಯಾವ ಕೆಲಸಗಳಿಗೆ ವೆಚ್ಚ ಮಾಡಲಾಗಿದೆ ಎಂಬುದರ ವಿವರ ಸಲ್ಲಿಸುವಂತೆ ಕಾರ್ಯನಿರ್ವಾಹಕ ಎಂಜಿನಿಯರ್‌ಗೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com