
ಶಿವಮೊಗ್ಗ: ಶಿವಮೊಗ್ಗದ ಆಯನೂರಿನ ಬೇಕರಿಯೊಂದರಲ್ಲಿ ಅಗ್ನಿ ಅವಘಡ ಸಂಭವಿಸಿ, ಪರಿಣಾಮ ಸಿಲಿಂಡರ್ ಸ್ಫೋಟಗೊಂಡಿದೆ. ಅದೃಷ್ಟವಶಾತ್ ಯಾವುದೇ ಅವಘಡಗಳೂ ಸಂಭವಿಸಿಲ್ಲ.
ಆ.21 ರಂದು ಮಧ್ಯಾಹ್ನ ಈ ಘಟನೆ ನಡೆದಿದ್ದು, ಘಟನೆ ನಡೆಯುತ್ತಿದ್ದಂತೆಯೇ ಅಗ್ನಿಶಾಮಕ ದಳ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದೆ.
ರೆಫ್ರಿಜರೇಟರ್‌ನಲ್ಲಿ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದ್ದು ಬೆಂಕಿಯಿಂದಾಗಿ ಎರಡು ವಾಣಿಜ್ಯ ಗ್ಯಾಸ್ ಸಿಲಿಂಡರ್‌ಗಳು ಸ್ಫೋಟಗೊಂಡಿವೆ ಎಂದು ಮೂಲಗಳು ತಿಳಿಸಿವೆ.
ಘಟನೆಯ ವಿಡಿಯೋ ವೈರಲ್ ಆಗಿದ್ದು, ಸ್ಫೋಟದ ನಂತರ ಜನರು ದಿಕ್ಕಾಪಾಲಾಗಿ ಓಡುತ್ತಿರುವುದನ್ನು ಕಾಣಬಹುದಾಗಿದೆ.
Advertisement