ಐಷಾರಾಮಿ ಪ್ರದೇಶಗಳ ಗುರಿಯಾಗಿಸಿ ದರೋಡೆ: ಖತರ್ನಾಕ್‌ ಕಳ್ಳರ ಗ್ಯಾಂಗ್‌ ಅಂದರ್

ಮಾರಾಕಾಸ್ತ್ರ, ಮೆಣಸಿನ ಪುಡಿ ಇಟ್ಟುಕೊಳ್ಳುತ್ತಿದ್ದ ಆರೋಪಿಗಳು ಐಷಾರಾಮಿ ಮನೆಗಳಿರುವ ಪ್ರದೇಶಗಳಿಗೆ ಹೋಗಿ ಕಾರಿನ ಗಾಜು ಹೊಡೆದು ಕಾರಿನಲ್ಲಿದ್ದ ಲ್ಯಾಪ್‌ ಟಾಪ್‌ ಗಳನ್ನು ಹೊತ್ತೊಯ್ಯುತ್ತಿದ್ದರು.
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ
Updated on

ಬೆಂಗಳೂರು: ನಗರದ ಐಷಾರಾಮಿ ಪ್ರದೇಶಗಳಲ್ಲಿನ ಮನೆಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಖತರ್ನಾಕ್ ಗ್ಯಾಂಗ್ ವೊಂದನ್ನು ಇಂದಿರಾನಗರ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತರನ್ನು ಮುರಳಿ (38), ಸೆಂಥಿಲ್ (50), ಮೂರ್ತಿ (49) ಮತ್ತು ಜಾನ್ (35) ಎಂದು ಗುರ್ತಿಸಲಾಗಿದೆ. ಆರೋಪಿಗಳೆಲ್ಲರೂ ತಮಿಳುನಾಡಿನ ತಿರುಚಿರಾಪಳ್ಳಿ ಜಿಲ್ಲೆಯವರಾಗಿದ್ದು, ಕಳ್ಳತನ ಮಾಡಲು ಬೆಂಗಳೂರಿಗೆ ಬರುತ್ತಿದ್ದರು.

ಪ್ರಾತಿನಿಧಿಕ ಚಿತ್ರ
ಮಂಗಳೂರು: ಸಾಲ ತೀರಿಸಲು ನಕಲಿ ನೋಟು ಮುದ್ರಿಸುತ್ತಿದ್ದ ವ್ಯಕ್ತಿ ಸೇರಿ ನಾಲ್ವರ ಬಂಧನ

ಮಾರಾಕಾಸ್ತ್ರ, ಮೆಣಸಿನ ಪುಡಿ ಇಟ್ಟುಕೊಳ್ಳುತ್ತಿದ್ದ ಆರೋಪಿಗಳು ಐಷಾರಾಮಿ ಮನೆಗಳಿರುವ ಪ್ರದೇಶಗಳಿಗೆ ಹೋಗಿ ಕಾರಿನ ಗಾಜು ಹೊಡೆದು ಕಾರಿನಲ್ಲಿದ್ದ ಲ್ಯಾಪ್‌ ಟಾಪ್‌ ಗಳನ್ನು ಹೊತ್ತೊಯ್ಯುತ್ತಿದ್ದರು. ನಂತರ ಈ ವಸ್ತುಗಳನ್ನು ಜಾನ್ ಮಾರಾಟ ಮಾಡುತ್ತಿದ್ದ.

ಕಳ್ಳತನದ ಬಗ್ಗೆ ಮಾಹಿತಿ ಪಡೆದ ಪೊಲೀಸರು ಆರೋಪಿಗಳ ಪತ್ತೆಗೆ ತನಿಖೆ ಆರಂಭಿಸಿದ್ದರು. ಆಗಸ್ಟ್ 15 ರಂದು ಅತ್ತಿಬೆಲೆ ಬಲ್ ನಿಲ್ದಾಣದ ಬಳಿ ಜಾನ್'ನನ್ನು ಬಂಧನಕ್ಕೊಳಪಡಿಸಿದ್ದರು. ಈತ ನೀಡಿದ ಮಾಹಿತಿ ಆಧಾರದ ಮೇಲೆ ಮೂವರನ್ನು ಬಂಧಿಸಿದ್ದಾರೆ. ವಿಚಾರಣೆ ವೇಳೆ ಆರೋಪಿಗಳು ಈವರೆಗೂ 8 ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ. ಆರೋಪಗಳಿಂದ 7 ಲ್ಯಾಪ್ ಟಾಪ್ ಗಳು ಮತ್ತು 5.85 ಲಕ್ಷ ರೂ. ಮೌಲ್ಯದ ಇತರೆ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com