
ದಾವಣಗೆರೆ: ಕಳೆದ ರಾತ್ರಿ ಸುರಿದ ಭಾರೀ ಮಳೆಗೆ ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಸರ್ಕಾರಿ ಆಸ್ಪತ್ರೆಯೊಳಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.
ಆಸ್ಪತ್ರೆಯ ಒಳಗೆ ಮಳೆ ನೀರು ನುಗ್ಗಿದ್ದರಿಂದ ರೋಗಿಗಳು ಪರದಾಡಿದ್ದಾರೆ. ಜನರಲ್ ವಾರ್ಡ್, ಐಸಿಯು ವಾರ್ಡ್ ಗಳಿಗೂ ನೀರು ನುಗ್ಗಿದ್ದು ಇಡೀ ಆಸ್ಪತ್ರೆ ಸಂಪೂರ್ಣ ಜಲಾವೃತವಾಗಿದೆ. ನೀರನ್ನು ಹೊರಹಾಕಲು ಸಿಬ್ಬಂದಿ ಹರಸಾಹಸಪಟ್ಟರು.
ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿ, ಔಷಧ ವಿತರಣಾ ಕೊಠಡಿ, ಹೆರಿಗೆ ವಾರ್ಡ್ ಗೆ ನೀರು ನುಗ್ಗಿದ್ದು, ವಾರ್ಡ್ ನಲ್ಲಿದ್ದ ಬಾಣಂತಿಯರು ಹಾಗೂ ಐಸಿಯು ಘಟಕದಲ್ಲಿನ ರೋಗಿಗಳನ್ನು ಬೇರೆ ಕಡೆಗೆ ಸ್ಥಳಾಂತರ ಮಾಡಬೇಕಾಗಿ ಬಂತು. ಅಕ್ಕಪಕ್ಕದ ಪ್ರದೇಶಗಳಲ್ಲಿ ಸರಿಯಾದ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ಪಕ್ಕದ ಕ್ರೀಡಾಂಗಣದಿಂದ ಆಸ್ಪತ್ರೆಗೆ ನೀರು ನುಗ್ಗಿದೆ.
Advertisement