
ಬೆಂಗಳೂರು: ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರ(ರೇರಾ) ನೂತನ ಅಧ್ಯಕ್ಷರಾಗಿ ನಿವೃತ್ತ ಐಎಎಸ್ ಅಧಿಕಾರಿ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಗುರುವಾರ ಆದೇಶ ಹೊರಡಿಸಿದೆ.
ಸುಮಾರು ಒಂದು ವರ್ಷದ ಹಿಂದೆ ಎಚ್ ಸಿ ಕಿಶೋರ್ ಚಂದ್ರ ಅವರು ನಿವೃತ್ತಿಯಾದ ನಂತರ ತೆರವಾಗಿದ್ದ ರೇರಾ ಅಧ್ಯಕ್ಷ ಸ್ಥಾನಕ್ಕೆ ಇಂದು ರಾಕೇಶ್ ಸಿಂಗ್ ಅವರನ್ನು ಐದು ವರ್ಷಗಳ ಅವಧಿಗೆ ನೇಮಕ ಮಾಡಲಾಗಿದೆ.
ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಯಾಗಿದ್ದ ರಾಕೇಶ್ ಸಿಂಗ್ ಅವರು ಇತ್ತೀಚಿಗಷ್ಟೇ ಸರ್ಕಾರಿ ಸೇವೆಯಿಂದ ನಿವೃತ್ತರಾಗಿದ್ದರು. ಈಗ ರೇರಾ ಮುಖ್ಯಸ್ಥರಾಗಿ ನೇಮಕಗೊಂಡಿದ್ದಾರೆ.
Advertisement