ರಾಮನಗರ: ನೇಣು ಬಿಗಿದುಕೊಂಡು ವಕೀಲೆ ಆತ್ಮಹತ್ಯೆಗೆ ಶರಣು

ಮೃತ ವಕೀಲೆಯನ್ನು 25 ವರ್ಷದ ವಾಸುಕಿ ಎಂದು ಗುರುತಿಸಲಾಗಿದ್ದು, ಇಂದು ಸಂಜೆ ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಾಸುಕಿ
ವಾಸುಕಿ
Updated on

ರಾಮನಗರ: ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ವಕೀಲೆಯೊಬ್ಬರು ಗುರುವಾರ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ನಡೆದಿದೆ.

ಮೃತ ವಕೀಲೆಯನ್ನು 25 ವರ್ಷದ ವಾಸುಕಿ ಎಂದು ಗುರುತಿಸಲಾಗಿದ್ದು, ಇಂದು ಸಂಜೆ ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಯುವತಿ ಆತ್ಮಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದೆ.

ವಾಸುಕಿ
ಮಂಡ್ಯ: ನೇಣು ಬಿಗಿದುಕೊಂಡು ಪತ್ನಿ ಆತ್ಮಹತ್ಯೆ; ಹೆದರಿ ಕೆರೆಗೆ ಹಾರಿದ ಪತಿ, ಒಂದು ವರ್ಷದ ಮಗು ಅನಾಥ!

ಈ ಸಂಬಂಧ ಮಾಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com