ಬೆಂಗಳೂರು: ಅಕ್ರಮ ಸಂಬಂಧ ಹಿನ್ನೆಲೆಯಲ್ಲಿ ಆಟೋ ಚಾಲಕನ ಮೇಲೆ ಮೂವರಿಂದ ಹಲ್ಲೆ, ಚಾಕು ಇರಿತ

ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹೊಂದಿದ್ದ ಆರೋಪದ ಮೇಲೆ 25 ವರ್ಷದ ಆಟೋ ಚಾಲಕನಿಗೆ ಮೂವರು ವ್ಯಕ್ತಿಗಳು ಚಾಕುವಿನಿಂದ ಇರಿದಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಯಂಡಹಳ್ಳಿ ಸ್ಲಂ ಕ್ವಾರ್ಟರ್ಸ್‌ನಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಆಟೋ ಚಾಲಕನ ಮೇಲೆ ಮೂವರು ಚಾಕುವಿನಿಂದ ಇರಿದ ಘಟನೆ ನಡೆದಿದೆ.

ಮಹಿಳೆಯೊಂದಿಗೆ ಅಕ್ರಮ ಸಂಬಂಧದ ಹೊಂದಿದ್ದ ಆರೋಪದ ಮೇಲೆ 25 ವರ್ಷದ ಆಟೋ ಚಾಲಕನಿಗೆ ಮೂವರು ವ್ಯಕ್ತಿಗಳು ಚಾಕುವಿನಿಂದ ಇರಿದಿರುವ ಘಟನೆ ಬ್ಯಾಟರಾಯನಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಾಯಂಡಹಳ್ಳಿ ಸ್ಲಂ ಕ್ವಾರ್ಟರ್ಸ್‌ನಲ್ಲಿ ನಡೆದಿದೆ.

ಹಲ್ಲೆಗೊಳಗಾದವನನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು, ಆರೋಪಿಗಳಾದ ಸೂರ್ಯ, ವಿನೋದ್ ಮತ್ತು ಸತೀಶಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಸೂರ್ಯ ಮತ್ತು ಸಹೋದರ ವಿನೋದ್ ಎಚ್ಚರಿಕೆ ನೀಡಿದರೂ ಕಾರ್ತಿಕ್ ಸೂರ್ಯನ ಪತ್ನಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಪದೇ ಪದೇ ಎಚ್ಚರಿಕೆ ನೀಡಿದರೂ ಆಕೆಗೆ ಕರೆ ಮಾಡಿ ಮೆಸೇಜ್ ಮಾಡುತ್ತಲೇ ಇದ್ದ. ಸೋಮವಾರ ರಾತ್ರಿ 11 ಗಂಟೆ ಸುಮಾರಿಗೆ ನಾಯಂಡಹಳ್ಳಿ ಸ್ಲಂ ಕ್ವಾರ್ಟರ್ಸ್ ಬಳಿ ಮೂವರು ಕಾರ್ತಿಕ್ ಗೆ ಕರೆ ಮಾಡಿದ್ದಾರೆ. ಈ ವೇಳೆ ವಾಗ್ವಾದ ನಡೆದು, ಹೊಟ್ಟೆಗೆ ಚಾಕುವಿನಿಂದ ಇರಿದು ತಲೆಗೆ ದೊಣ್ಣೆಯಿಂದ ಹೊಡೆದಿದ್ದಾರೆ ಎನ್ನಲಾಗಿದೆ. ಕಾರ್ತಿಕ್ ತಪ್ಪಿಸಿಕೊಂಡು ಕುಟುಂಬಸ್ಥರಿಗೆ ಕರೆ ಮಾಡಿದ್ದಾನೆ ಮನೆಯವರು ಸ್ಥಳಕ್ಕೆ ಧಾವಿಸಿ ನೋಡಿದಾಗ ರಕ್ತಸ್ರಾವವಾಗುತ್ತಿದ್ದ ಕಾರ್ತಿಕ್ ನನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕಾರ್ತಿಕ್ ಸಹೋದರಿ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ತಲೆಮರೆಸಿಕೊಂಡಿದ್ದಾರೆ.

ಸಾಂದರ್ಭಿಕ ಚಿತ್ರ
'ಇದೆಂಥಾ ಹುಚ್ಚಾಟ'; ಕೌಟುಂಬಿಕ ಕಲಹ; ಪತ್ನಿ ಕಾರಿನ ಮೇಲೆ ಕಾರು ಗುದ್ದಿಸಿ ಹಲ್ಲೆ! Video

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com