ಪಿಒಪಿ ಗಣೇಶನ ಮಾರಾಟ ಮಾಡಿದ್ರೆ ಹುಷಾರ್: ಸಚಿವ ಈಶ್ವರ್‌ ಖಂಡ್ರೆ ಖಡಕ್ ಎಚ್ಚರಿಕೆ

ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಹೇಳಿದರು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು.
ಸಚಿವ ಈಶ್ವರ್ ಖಂಡ್ರೆ
ಸಚಿವ ಈಶ್ವರ್ ಖಂಡ್ರೆ
Updated on

ಬೆಂಗಳೂರು: ಈ ಬಾರಿ ಗಾರಿ ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಗಣೇಶ ಮೂರ್ತಿಗಳ ಬಳಕೆ ಮತ್ತು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಮೂರ್ತಿಗಳ ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ಗುರುವಾರ ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚಿಸಿದ್ದಾರೆ.

ಆದೇಶವನ್ನು ಉಲ್ಲಂಘಿಸುವ ಮತ್ತು ಜಲಮೂಲಗಳನ್ನು ಕಲುಷಿತಗೊಳಿಸುವವರ ವಿರುದ್ಧ ವಾಯು ಮತ್ತು ಜಲ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆಗಳನ್ನು ದಾಖಲಿಸಲಾಗುವುದು ಎಂದು ಅವರು ಹೇಳಿದರು. ಇಲ್ಲಿಯವರೆಗೆ ಕೇವಲ ನಿರ್ದೇಶನಗಳನ್ನು ನೀಡಲಾಗುತ್ತಿದೆ ಎಂದು ಹೇಳಿದರು. ಆದರೆ ಈಗ ಸಾಕಷ್ಟು ಮುಂಚಿತವಾಗಿಯೇ ಸರ್ಕಾರಿ ಆದೇಶ ಹೊರಡಿಸಲಾಗಿದೆ. ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರೊಂದಿಗೆ ಎಲ್ಲ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದ ಖಂಡ್ರೆ, ಪರಿಸರ ಸ್ನೇಹಿ ವಿಗ್ರಹಗಳನ್ನು ಉತ್ತೇಜಿಸಲು ಮತ್ತು ಹಸಿರು ಪಟಾಕಿಗಳ ಬಳಕೆಯನ್ನು ಉತ್ತೇಜಿಸಲು ಜಿಲ್ಲಾಧಿಕಾರಿಗಳ ಅಡಿಯಲ್ಲಿ ಸಮಿತಿಗಳನ್ನು ರಚಿಸಿ ಆದೇಶ ಹೊರಡಿಸಿದ್ದಾರೆ.

ಇತ್ತೀಚೆಗೆ ಶಿರೂರು ಮತ್ತು ವಯನಾಡಿನಲ್ಲಿ ಸಂಭವಿಸಿದ ಭೂಕುಸಿತದ ಬಗ್ಗೆ ಪ್ರಸ್ತಾಪಿಸಿದ ಖಂಡ್ರೆ, ಪರಿಸರವನ್ನು ರಕ್ಷಿಸುವುದು ಪ್ರತಿಯೊಬ್ಬರ ಕರ್ತವ್ಯ ಎಂದು ಹೇಳಿದರು. ಸರ್ಕಾರವು ಪಿಒಪಿ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಮತ್ತು ಸಾಗಣೆಯನ್ನು ನಿಷೇಧಿಸಿದೆ, ಆದರೂ ಅವು ಬಳಕೆಯಲ್ಲಿವೆ ಎಂದು ಕಂಡುಬಂದ ಉದಾಹರಣೆಗಳಿವೆ. ಹೀಗಾಗಿ ಕಠಿಣ ಕ್ರಮ ಕೈಗೊಳ್ಳಲು, ಪೊಲೀಸ್, ಸಾರಿಗೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಯೊಂದಿಗೆ ಸಮನ್ವಯತೆಯಿಂದ ಕೆಲಸ ಮಾಡಲು ಪರಿಸರ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ (ಕೆಎಸ್‌ಪಿಸಿಬಿ) ಗೆ ನಿರ್ದೇಶನ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಸಾರ್ವಜನಿಕ ಮೂರ್ತಿ ಪ್ರತಿಷ್ಠಾಪನೆಗೆ ಲಿಖಿತ ಅನುಮತಿ ನೀಡುವಾಗ ಕಡ್ಡಾಯವಾಗಿ ಪಿಒಪಿ ಮೂರ್ತಿಗಳನ್ನು ಬಳಸುವಂತಿಲ್ಲ, ಪಟಾಕಿ ಸಿಡಿಸುವಂತಿಲ್ಲ, ಪರಿಸರ ಸ್ನೇಹಿಯಾಗಿ ವಿಗ್ರಹಗಳನ್ನು ವಿಸರ್ಜಿಸಲಾಗುವುದು ಎಂದು ಮುಚ್ಚಳಿಕೆ ಬರೆಸಿಕೊಳ್ಳುವಂತೆ ಖಂಡ್ರೆ ಸೂಚಿಸಿದ್ದಾರೆ.

ಸಚಿವ ಈಶ್ವರ್ ಖಂಡ್ರೆ
ಈ ಬಾರಿಯ ಗಣೇಶ ಚತುರ್ಥಿಯನ್ನು ಪರಿಸರ ಸ್ನೇಹಿಯಾಗಿಸಿ ಸಂಭ್ರಮಿಸೋಣ: ಮುಖ್ಯಮಂತ್ರಿ ಸಿದ್ದರಾಮಯ್ಯ

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com