
ಬೆಂಗಳೂರು: ಮಾರಕ Mpox ಪ್ರಕರಣಗಳ ಉಲ್ಬಣ ವಿಚಾರ ವ್ಯಾಪಕ ಭೀತಿ ಹುಟ್ಟಿಸಿರುವಂತೆಯೇ ಕರ್ನಾಟಕದಲ್ಲಿ ಅಗತ್ಯ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರು, 'ಕೆಲವು ಆಫ್ರಿಕನ್ ದೇಶಗಳಲ್ಲಿ ವರದಿಯಾಗಿರುವ Mpox ಭಾರತದಲ್ಲಿ ಯಾವುದೇ ಸೋಂಕು ಪತ್ತೆಯಾಗಿಲ್ಲ. ಹೀಗಾಗಿ ಜನರು ಚಿಂತಿಸಬೇಡಿ ಎಂದರು.
ಅಂತೆಯೇ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಉಚಿತ Mpox ಪರೀಕ್ಷಾ ಸೌಲಭ್ಯ ತೆರೆಯಲಾಗಿದೆ. Mpox ಸೋಂಕುಗಳು ಸಾಮಾನ್ಯವಾಗಿ ಸ್ವಯಂ-ಸೀಮಿತವಾಗಿದ್ದು, ಎರಡು ಮತ್ತು ನಾಲ್ಕು ವಾರಗಳ ನಡುವೆ ಇರುತ್ತದೆ. ಅದರ ರೋಗಿಗಳು ಸಾಮಾನ್ಯವಾಗಿ ಬೆಂಬಲಿತ ವೈದ್ಯಕೀಯ ಆರೈಕೆ ಮತ್ತು ನಿರ್ವಹಣೆಯೊಂದಿಗೆ ಬೇಗ ಚೇತರಿಸಿಕೊಳ್ಳುತ್ತಾರೆ. ಇದು ಸೋಂಕಿತ ರೋಗಿಯೊಂದಿಗೆ ದೀರ್ಘಕಾಲದ ಮತ್ತು ನಿಕಟ ಸಂಪರ್ಕದ ಮೂಲಕ ಹರಡುತ್ತದೆ ಎಂದು ಮಾಹಿತಿ ನೀಡಿದರು.
ಅಂತೆಯೇ Mpox ನಿರ್ವಹಣೆಗೆ ಕೈಕೊಗೊಂಡ ಕ್ರಮಗಳ ಕುರಿತು ಮಾತನಾಡಿದ ಸಚಿವರು, 'ನಾವು ಇಂದು mpox ಗೆ ಸಿದ್ಧತೆ ಕುರಿತು ಇಲಾಖಾ ಸಭೆ ನಡೆಸಿದ್ದೇವೆ. ಇಲ್ಲಿ ಯಾವುದೇ ಪ್ರಕರಣಗಳು ವರದಿಯಾಗಿಲ್ಲದ ಕಾರಣ ಆತಂಕ ಪಡುವ ಅಗತ್ಯವಿಲ್ಲ. ಸೋಂಕನ್ನು ಎದುರಿಸಲು ರಾಜ್ಯ ಸರ್ಕಾರ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಕರ್ನಾಟಕದ ಜನರು ಆತಂಕಪಡುವ ಅಗತ್ಯವಿಲ್ಲ.
ಕೇಂದ್ರ ಸರ್ಕಾರವು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನಾವು ಉಚಿತ ಪರೀಕ್ಷಾ ಸೌಲಭ್ಯಗಳನ್ನು ಏರ್ಪಡಿಸಿದ್ದೇವೆ. ಅಂತರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕೇಂದ್ರ ಸರ್ಕಾರ ಸ್ಕ್ರೀನಿಂಗ್ ವ್ಯವಸ್ಥೆ ಮಾಡಿದೆ ಎಂದು ಹೇಳಿದರು.
Advertisement