ಉಡುಪಿ: ರೀಲ್ಸ್ ಹುಚ್ಚಿಗೆ ಬಿದ್ದಿದ್ದ ಪತ್ನಿಯನ್ನು ಕತ್ತಿಯಿಂದ ಕೊಚ್ಚಿ ಕೊಂದಿರುವ ಭೀಕರ ಘಟನೆ ಉಡುಪಿಯ ಬ್ರಹ್ಮಾವರ ತಾಲೂಕಿನ ಸಾಲಿಗ್ರಾಮ ಕಾರ್ಕಡ ಕಡಿದ ಹೆದ್ದಾರಿ ಬಳಿ ನಡೆದಿದೆ. ಪತ್ನಿಯನ್ನು ಪತಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ.
ಮೃತ ಮಹಿಳೆಯನ್ನು 28 ವರ್ಷದ ಜಯಶ್ರೀ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ 30 ವರ್ಷದ ಕಿರಣ್ ಉಪಾಧ್ಯನನ್ನು ಪೊಲೀಸರು ಬಂಧಿಸಿದ್ದಾರೆ. ದಂಪತಿ ಕಾರ್ಕಡ ಅಂಗನವಾಡಿ ಕೇಂದ್ರದ ಸಮೀಪ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು ಇಂದು ಬೆಳಗ್ಗೆ ಜಯಶ್ರೀ ಅನ್ನು ಕಿರಣ್ ಉಪಾಧ್ಯ ಕೊಲೆ ಮಾಡಿದ್ದಾನೆ.
ಸದ್ಯ ಕಿರಣ್ ಉಪಾಧ್ಯನನ್ನು ಕೋಟ ಪೊಲೀಸರು ಬಂಧಿಸಿದ್ದು ತೀವ್ರ ವಿಚಾರಣೆ ನಡೆಸುತ್ತಿದ್ದಾರೆ. ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಸಾಮಾಜಿಕ ಜಾಲತಾಣ ಇನ್ಸ್‌ಸ್ಟಾಗ್ರಾಮ್ ರೀಲ್ಸ್‌ನಲ್ಲಿ ಜಯಶ್ರೀ ಹೆಚ್ಚು ಸಮಯ ಕಳೆಯುತ್ತಿದ್ದಳು ಎನ್ನುವ ಕ್ಷುಲ್ಲಕ ಕಾರಣಕ್ಕೆ ಕಿರಣ್ ಕಸಿವಿಸಿಕೊಂಡಿದ್ದು ಪತ್ನಿಯನ್ನು ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.
Advertisement