ಬೆಂಗಳೂರು: ಹಿರಿಯ ಸ್ಥಾನಿಕ ವೈದ್ಯರು ಮತ್ತು ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳ ಶಿಷ್ಯ ವೇತನವನ್ನು ಶೇ . 25 ರಷ್ಟು ಹೆಚ್ಚಿಸಿ ಕರ್ನಾಟಕ ವೈದ್ಯಕೀಯ ಶಿಕ್ಷಣ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ. ಇಲ್ಲಿನ ಸ್ಥಾನಿಕ ವೈದ್ಯರ ಯಶಸ್ವಿ ಮುಷ್ಕರದ ನಂತರ ಈ ಆದೇಶ ಹೊರಡಿಸಲಾಗಿದೆ.
ಮೂಲಗಳ ಪ್ರಕಾರ, ಮುಷ್ಕರದಿಂದಾಗಿ ಕಳೆದ 15- 20 ದಿನಗಳಿಂದ ತುರ್ತು ಸೇವೆಗಳು ಮಾತ್ರ ಲಭ್ಯವಿದ್ದವು. ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಮಧ್ಯಪ್ರವೇಶಿಸಿದ ನಂತರ ಸ್ಥಾನಿಕ ವೈದ್ಯರು ಮುಷ್ಕರವನ್ನು ಹಿಂತೆಗೆದುಕೊಂಡರು.
ಸಚಿವರು ತಮ್ಮ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿ ಶಿಷ್ಯವೇತನ ಹೆಚ್ಚಿಸಿ ಆದೇಶ ಹೊರಡಿಸುವಂತೆ ಸೂಚನೆ ನೀಡಿದ್ದು, ಪರಿಷ್ಕೃತ ಶಿಷ್ಯವೇತನ ಆಗಸ್ಟ್ 1 ರಿಂದ ಅನ್ವಯವಾಗಲಿದೆ ಎಂದು ಸಚಿವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
Advertisement