ಶ್ರೀ ಕೃಷ್ಣ ಜನ್ಮಾಷ್ಠಮಿ: ಆಗಸ್ಟ್ 26ರಂದು ನಗರದಾದ್ಯಂತ ಮಾಂಸ ಮಾರಾಟ ನಿಷೇಧ

ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಮಾಂಸ ಮಾರಾಟ ನಿಷೇಧ (ಸಾಂದರ್ಭಿಕ ಚಿತ್ರ)
ಮಾಂಸ ಮಾರಾಟ ನಿಷೇಧ (ಸಾಂದರ್ಭಿಕ ಚಿತ್ರ)
Updated on

ಬೆಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.

ಈ ಸಂಬಂಧ ಬಿಬಿಎಂಪಿ ಪಶುಪಾಲನೆ ವಿಭಾಗದ ಜಂಟಿ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಆದೇಶದಲ್ಲಿ ಕೃಷ್ಣ ಜನ್ಮಾಷ್ಠಮಿ ಪ್ರಯುಕ್ತ ಆ.26ರಂದು ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.

ಮಾಂಸ ಮಾರಾಟ ನಿಷೇಧ (ಸಾಂದರ್ಭಿಕ ಚಿತ್ರ)
ಟ್ರಾಫಿಕ್ ಸಮಸ್ಯೆ ಶಾಶ್ವತ ಪರಿಹಾರಕ್ಕಾಗಿ ಬಿಬಿಎಂಪಿ, ಸಾರಿಗೆ ಇಲಾಖೆ ಜೊತೆಗೂಡಿ ಕೆಲಸ: ಪರಮೇಶ್ವರ್

ಕೃಷ್ಣ ಜನ್ಮಾಷ್ಟಮಿ ದಿನದಂದು ಮಾಂಸ ಮಾರಾಟ ನಿಷೇಧಿಸಿ ಆದೇಶ ಹೊರಡಿಸಲಾಗಿದ್ದು, ಆ ದಿನ ಯಾರೂ ಯಾವುದೇ ರೀತಿಯ ಮಾಂಸ ಹಾಗೂ ಹಸಿ ಮೀನು ಮಾರಾಟ ಮಾಡಬಾರದು ಎಂದು ಹೇಳಿದ್ದಾರೆ.

ನಗರದ ಯಾವುದೇ ಮಾಂಸ ಮಾರಾಟದ ಅಂಗಡಿಗಳು, ಕೋಳಿ ಅಂಗಡಿಗಳು, ಮೀನುಮಾರಾಟ ಮಾಡಬಾರದು. ಆದೇಶ ಮೀರಿ ಮಾರಾಟ ಮಾಡಿದರೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದೆಂದು ಎಚ್ಚರಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com