ಬಿಜೆಪಿಯ ಮಾಜಿ ಸಿಎಂ ಒಬ್ಬರ ವಿಡಿಯೋ ಶೀಘ್ರದಲ್ಲೇ ರಿಲೀಸ್: ಕಾಂಗ್ರೆಸ್ ಮಾಜಿ ಶಾಸಕ ನ್ಯಾಮಗೌಡ ಶಾಕಿಂಗ್ ಹೇಳಿಕೆ
ಬಾಗಲಕೋಟೆ: ಅತಿ ಶೀಘ್ರದಲ್ಲಿ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಒಬ್ಬರ ಅಶ್ಲೀಲ ಸಿಡಿ ಬಿಡುಗಡೆ ಆಗಲಿದೆ ಎನ್ನುವ ಸುದ್ದಿ ಬಂದಿದೆ ಎಂದು ಜಮಖಂಡಿ ಮಾಜಿ ಶಾಸಕ ಆನಂದ ನ್ಯಾಮಗೌಡ ಹೇಳಿದ್ದಾರೆ.
ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ನೀಡಿರುವುದನ್ನು ವಿರೋಧಿಸಿ ಜಮಖಂಡಿ ನಗರದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶನಿವಾರ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಬಿಜೆಪಿಯಿಂದ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಒಬ್ಬರ ಸಿಡಿ ಬರುವ ಸುದ್ದಿ ಬಂದಿದೆ, ಅದನ್ನು ನೀವು ನೋಡಿದ್ದೀರೋ ಇಲ್ಲವೋ ಗೊತ್ತಿಲ್ಲ. ನಾನು ಇವತ್ತು ಆ ಸುದ್ದಿ ಕೇಳಿದ್ದೇನೆ. ಅತಿ ಶೀಘ್ರದಲ್ಲಿ ಆ ಅಶ್ಲೀಲ ಸಿಡಿ ಹೊರಬರಲಿದೆಯಂತೆ ಎಂದು ಕೈ ಕಾರ್ಯಕರ್ತರ ಎದುರು ಹೇಳಿದರು.
ಆ ಅಶ್ಲೀಲ ಸಿಡಿ ಭಾರತೀಯ ಜನತಾ ಪಾರ್ಟಿಯವನದ್ದೇ. ಬಿಜೆಪಿ ಮಾಜಿ ಮುಖ್ಯಮಂತ್ರಿಯ ಅಶ್ಲೀಲ ಸಿಡಿ ಶೀಘ್ರದಲ್ಲಿ ಬಿಡುಗಡೆಯಾಗಲಿದೆ ಎಂದು ನ್ಯಾಮಗೌಡ ಹೇಳಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆಅನುಮತಿ ನೀಡಿರುವ ರಾಜ್ಯಪಾಲರ ನಡೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಇದೇ ವೇಳೆ, ಪ್ರತಿಭಟನಾ ಭಾಷಣದಲ್ಲಿ ನ್ಯಾಮಗೌಡ ಸಿಡಿ ಕುರಿತು ಹೇಳಿಕೆ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ