ಸರ್ಕಾರ V/s ರಾಜಭವನ ಸಂಘರ್ಷ: 6 ಮಸೂದೆ ವಾಪಸ್ ಕಳುಹಿಸಿದ ರಾಜ್ಯಪಾಲ ಗೆಹ್ಲೋಟ್ ವಿರುದ್ಧ ಸಿಎಂ ಸಿದ್ದರಾಮಯ್ಯ ಸಿಡಿಮಿಡಿ

ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಹಿ ಹಾಕದೆ ಸರಕಾರಕ್ಕೆ ಮರಳಿಸಿದ್ದಾರೆ.
Karnataka Governor Thawarchand Gehlot
ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್- ಸಿಎಂ ಸಿದ್ದರಾಮಯ್ಯ online desk
Updated on

ಬೆಂಗಳೂರು: ರಾಜ್ಯಪಾಲರು ಹಾಗೂ ಸರ್ಕಾರ ನಡುವಿನ ಸಂಘರ್ಷ ಮುಂದುವರೆದಿದ್ದು, ಮುಡಾ ಹಗರಣ ಜಟಾಪಟಿ ನಡುವಲ್ಲೇ ಇದೀಗ 'ಬಿಲ್‌ ವಾರ್‌' ಶುರುವಾಗಿದೆ.

ವಿಧಾನಮಂಡಲ ಉಭಯ ಸದನ ಅನುಮೋದಿಸಿದ್ದ 6 ವಿಧೇಯಕಗಳಿಗೆ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಸಹಿ ಹಾಕದೆ ಸರಕಾರಕ್ಕೆ ಮರಳಿಸಿದ್ದಾರೆಂದು ತಿಳಿದುಬಂದಿದೆ.

ಮುಡಾ ನಿವೇಶನ ಹಗರಣದಲ್ಲಿಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ರಾಜಭವನ ಮತ್ತು ಸರಕಾರದ ನಡುವೆ ಸಂಘರ್ಷ ತೀವ್ರಗೊಂಡಿದೆ. ಇದರ ನಡುವೆ ರಾಜ್ಯಪಾಲರು 6 ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಹಾಗೂ ವಿಪಕ್ಷಗಳ ನಡೆ ಮತ್ತು ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರೊಂದಿಗೆ ಚರ್ಚೆ ನಡೆಸಲಾಗಿದೆ. ರಾಜ್ಯಪಾಲರ ವಿರುದ್ಧ ರಾಷ್ಟ್ರಪತಿಯವರಿಗೆ ದೂರು ನೀಡುವ ಸಾಧ್ಯತೆಯ ಎಲ್ಲಾ ಅವಕಾಶಗಳಿವೆ ಎಂದು ಹೇಳಿದರು.

ಉಪಮುಖ್ಯಮಂತ್ರಿಗಳು, ಗೃಹಸಚಿವರು ಸೇರಿದಂತೆ ಕೆಲವು ಸಚಿವರೊಂದಿಗೆ ದೆಹಲಿಗೆ ತೆರಳಲಾಗಿತ್ತು. ವರಿಷ್ಠರಿಗೆ ಕರ್ನಾಟಕದಲ್ಲಿ ನಡೆಯುತ್ತಿರುವ ರಾಜಕೀಯ ಬೆಳವಣಿಗೆಗಳ ಬಗ್ಗೆ ಪಕ್ಷದ ವರಿಷ್ಠರಿಗೆ ವಿವರಿಸಲಾಗಿದೆ. ವಿಪಕ್ಷಗಳು ಮುಡಾ ಪ್ರಕರಣಕ್ಕೆ ಪಾದಯಾತ್ರೆ ಮಾಡಿದ್ದು ಅದನ್ನು ರಾಜಕೀಯವಾಗಿ ಎದುರಿಸುವ ಬಗ್ಗೆ ಚರ್ಚಿಸಲಾಗಿದೆ.

Karnataka Governor Thawarchand Gehlot
ಬಿಜೆಪಿ ಶಾಸಕರ ಮಾತು ಕೇಳಿ ರಾಜ್ಯಪಾಲರು 15 ಬಿಲ್ ವಾಪಸ್ ಕಳಿಸಿದ್ದಾರೆ: ಡಿಸಿಎಂ ಡಿ.ಕೆ ಶಿವಕುಮಾರ್ ಆರೋಪ

ರಾಜ್ಯಪಾಲರು ಕೊಟ್ಟಿರುವ ಅನುಮತಿ ಕಾನೂನು ಬಾಹಿರ ಮತ್ತು ಸಂವಿಧಾನ ಬಾಹಿರವಾಗಿದೆ ಎಂದು ತಿಳಿಸಿ ರಾಜ್ಯಪಾಲರ ನಿರ್ಣಯವನ್ನು ಉಚ್ಚ ನ್ಯಾಯಾಲಯದಲ್ಲಿ ಪ್ರಶ್ನಿಸಲಾಗಿದ್ದು, ವಿಚಾರಣೆ ಆ. 29ಕ್ಕೆ ಮುಂದೂಡಿದೆ. ಸಚಿವ ಸಂಪುಟದಲ್ಲಿಯೂ ಅವರ ನಿರ್ಣಯವನ್ನು ಸ್ಪಷ್ಟವಾಗಿ ಖಂಡಿಸಿರುವ ಬಗ್ಗೆ ಪಕ್ಷದ ವರಿಷ್ಠರಿಗೆ ಮಾಹಿತಿ ನೀಡಲಾಗಿದೆ ಎಂದು ತಿಳಿಸಿದರು.

ರಾಜ್ಯಪಾಲರು ವಾಪಸ್ ಕಳುಹಿಸಿರುವ ಮಸೂದೆಗಳನ್ನು ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಎರಡರಲ್ಲೂ ಅಂಗೀಕರಿಸಲಾಗಿದೆ. ರಾಜ್ಯಪಾಲರು ಈ ಮಸೂದೆಗಳ ಬಗ್ಗೆ ವಿವರಣೆ ಕೇಳಿದ್ದರೆ ನಾವು ನೀಡಿದ್ದೆವು. ಆದರೆ, ಮಸೂದೆಗಳನ್ನು ವಾಪಸ್ ಕಳುಹಿಸಿದ್ದಾರೆ. ಹೀಗಾಗಿ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳುತ್ತೇವೆಂದು ಹೇಳಿದರು.

ಬಸ್ ದರ ಹಾಗೂ ನೀರಿನ ದರ ಏರಿಕೆ ಕುರಿತ ಪ್ರಶ್ನೆಗೆ ಉತ್ತರಿಸಿ, ಬಸ್ ದರದಂತೆ ನೀರಿನ ದರವೂ ಏರಿಕೆಯಾಗಬಹುದು, ಆದರೆ ಎರಡರ ಬಗ್ಗೆ ನಿರ್ಧಾರ ಬಾಕಿ ಇದೆ ಎಂದರು.

ನೀರಿನ ದರವು ಹಲವು ವರ್ಷಗಳಿಂದ ಬದಲಾಗದೆ ಉಳಿದಿದ್ದು, ಜಲಮಂಡಳಿಯು ಆರ್ಥಿಕ ಸವಾಲುಗಳನ್ನು ಎದುರಿಸುತ್ತಿರುವುದರಿಂದ ಚರ್ಚೆಯ ನಂತರ ಈ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದರು.

ಕೆಪಿಎಸ್​ಸಿ ಪರೀಕ್ಷೆಯಲ್ಲಿ ಯಾವುದೇ ಗೊಂದಲ ಇಲ್ಲ. ಕೆಲವರು ಪರೀಕ್ಷೆ ಮುಂದೂಡಬೇಕೆಂದು ಹೇಳುತ್ತಿದ್ದಾರೆ. ಆದರೆ, ನಾವು ಈಗ ಪರೀಕ್ಷೆಯನ್ನು ಮುಂದೂಡುವುದಿಲ್ಲ. ಆದರೆ ಆಗಸ್ಟ್ 25 ರಂದು ಕೃಷ್ಣ ಜನ್ಮಾಷ್ಟಮಿಯ ಕಾರಣ ಒಂದು ಪತ್ರಿಕೆಯನ್ನು ಮಾತ್ರ ಮುಂದೂಡಿಕೆ ಮಾಡುತ್ತೇವೆಂದು ಸ್ಪಷ್ಟಪಡಿಸಿದರು

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com