
ಚಾಮರಾಜನಗರ: ಮಾಜಿ ಶಿಕ್ಷಣ ಸಚಿವ, ಮಾಜಿ ಶಾಸಕ ಹಾಗೂ ರಾಜ್ಯ ಬಿಜೆಪಿ ಉಪಾಧ್ಯಕ್ಷ ಎನ್.ಮಹೇಶ್ ಕೊಳ್ಳೇಗಾಲದ ಮನೆಯಲ್ಲಿ ಕಳ್ಳತನವಾಗಿದೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆದರ್ಶ ಬಡಾವಣೆಯ ನಿವಾಸದಲ್ಲಿ ಕಳ್ಳತನದ ಕೃತ್ಯ ನಡೆದಿದೆ. ಶುಕ್ರವಾರ ಸಂಜೆ ತನಕ ಮನೆಯಲ್ಲಿದ್ದ ಎನ್.ಮಹೇಶ್ ಅವರು ಬಳಿಕ ಬೆಂಗಳೂರಿಗೆ ತೆರಳಿದ್ದರು.
ಮನೆಯಲ್ಲಿ ಯಾರೂ ಇಲ್ಲದ್ದನ್ನು ಗಮನಿಸಿದ ಕಳ್ಳರು ರಾತ್ರಿ ಮನೆಗೆ ನುಗ್ಗಿ ಕಳ್ಳತನ ಮಾಡಿದ್ದಾರೆ. ನೆರೆ ಮನೆಯವರಿಂದ ಮನೆಗೆ ಕನ್ನ ಹಾಕಿರುವುದು ಬೆಳಕಿಗೆ ಬಂದಿದೆ. ಬಾಗಿಲ ಬೀಗ ಮುರಿದು ಸಚಿವನ ಮನೆಗೆ ನುಗ್ಗಿ ಮನೆಯಲ್ಲಿದ್ದ 50 ಸಾವಿರ ರೂ. ದೋಚಿ ಪರಾರಿಯಾಗಿದ್ದಾರೆ. ಸ್ಥಳಕ್ಕೆ ಕೊಳ್ಳೇಗಾಲ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ. ತನಿಖೆ ನಂತರ ಕಳುವಿನ ಬಗ್ಗೆ ಹೆಚ್ಚು ಮಾಹಿತಿ ತಿಳಿಯಲಿದೆ.
Advertisement