
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನ ಆವರಣದಲ್ಲಿ ಒಂದು ಕೈಯಲ್ಲಿ ಚಹಾ ಮಗ್ ಮತ್ತು ಮತ್ತೊಂದು ಕೈಯಲ್ಲಿ ಸಿಗರೇಟ್ ಹಿಡಿದು ಖುಷಿಯಿಂದ ನಟ ದರ್ಶನ್ ಕುಳಿತಿರುವ ಫೋಟೋ ವೈರಲ್ ಆದ ಬೆನ್ನಲ್ಲೇ ನಟ ದರ್ಶನ್ ಗೆ ರೌಡಿಶೀಟರ್ ಸತ್ಯ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದು ವೈರಲ್ ಆಗಿತ್ತು.
ನಟ ದರ್ಶನ್ಗೆ ರೌಡಿಶೀಟರ್ ಸತ್ಯ ವಿಡಿಯೋ ಕಾಲ್ ಮಾಡಿದ್ದು ಆ ವಿಡಿಯೋ ವೈರಲ್ ಆಗಿ ಸಂಚಲನ ಸೃಷ್ಟಿಸಿ ಜೈಲಿನಲ್ಲಿ ನಡೆಯುತ್ತಿರುವ ಅಕ್ರಮ, ಭ್ರಷ್ಟಾಚಾರಗಳ ಬಗ್ಗೆ ವ್ಯಾಪಕವಾಗಿ ಸಾರ್ವಜನಿಕ ಚರ್ಚೆಯಾಗುತ್ತಿದೆ. ಜೈಲಿನ ನಿಯಮ ಉಲ್ಲಂಘಿಸಿದ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ.
ವಿಡಿಯೋ ಕಾಲ್ ಮಾಡಿದ ಸತ್ಯನನ್ನು ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುತ್ತಿದ್ದಾರೆ. ಪರಪ್ಪನ ಅಗ್ರಹಾರದಲ್ಲಿ ಇರುವ ದರ್ಶನ್ ಅನೇಕ ನಿಯಮಗಳನ್ನು ಉಲ್ಲಂಘನೆ ಮಾಡಿರುವ ವಿಷಯ ಬೆಳಕಿಗೆ ಬಂದಿದೆ. ಜಾಮೀನು ಪಡೆದು ಹೊರಗಿರುವ ರೌಡಿಶೀಟರ್ ಸತ್ಯ ಜೊತೆ ದರ್ಶನ್ ವಿಡಿಯೋ ಕಾಲ್ನಲ್ಲಿ ಮಾತನಾಡಿದ್ದರು. ಆ ವಿಡಿಯೋ ಎಲ್ಲ ಕಡೆಗಳಲ್ಲಿ ವೈರಲ್ ಆಗಿತ್ತು. ವಿಡಿಯೋ ಕಾಲ್ ವಿಚಾರ ಬಹಿರಂಗ ಆದ ಕೂಡಲೇ ಪೊಲೀಸರು ಕ್ರಮ ಕೈಕೊಂಡಿದ್ದಾರೆ. ದರ್ಶನ್ ಜತೆ ವಿಡಿಯೋ ಕಾಲ್ ಮೂಲಕ ಮಾತನಾಡಿದ ಸತ್ಯನನ್ನು ಬ್ಯಾಡರಹಳ್ಳಿ ಠಾಣೆ ಪೊಲೀಸರು ಮಂಡ್ಯದಲ್ಲಿ ವಶಕ್ಕೆ ಪಡೆದು ಬೆಂಗಳೂರಿಗೆ ಕರೆತಂದಿದ್ದಾರೆ.
ಬೆಂಗಳೂರು ಪೊಲೀಸರು ವಶಕ್ಕೆ ಪಡೆದು ಸತ್ಯನನ್ನು ತೀವ್ರ ವಿಚಾರಣೆಗೆ ಒಳಪಡಿಸುತ್ತಿದ್ದಾರೆ.
ಪ್ರಕರಣದ ತನಿಖೆಗೆ ಮೂರು ವಿಶೇಷ ತಂಡ ರಚನೆ: ಇನ್ನು ನಟ ದರ್ಶನ್ ಗೆ ಜೈಲಿನಲ್ಲಿ ರಾಜಾತಿಥ್ಯ ಹೇಗೆ ಸಿಗುತ್ತಿದೆ, ನೀಡುತ್ತಿರುವವರು ಯಾರು ಎಂಬ ಸಂದೇಹ, ಹತ್ತಾರು ಪ್ರಶ್ನೆಗಳು ಹುಟ್ಟುಹಾಕಿದ್ದು, ಈ ಸಂಬಂಧ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿವೆ. ಪ್ರಕರಣದ ತನಿಖೆಗಾಗಿ ಮೂರು ವಿಶೇಷ ತಂಡ ರಚಿಸಲಾಗಿದೆ.
ಜೈಲಿನ ನಿಯಮಗಳನ್ನು ಉಲ್ಲಂಘಟನೆ ಮಾಡಿದ್ದಕ್ಕಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಮೂರು ಪ್ರಕರಣ ದಾಖಲಾಗಿದ್ದು, ಎರಡರಲ್ಲಿ ದರ್ಶನ್ ಎ1 ಆರೋಪಿ ಆಗಿದ್ದಾರೆ. ಈ ಮೂರು ಪ್ರಕರಣದ ತನಿಖೆಗಾಗಿ ಆಗ್ನೇಯ ವಿಭಾಗ ಡಿಸಿಪಿ ಸಾರಾ ಫಾತೀಮಾ ಅವರು ಮೂರು ವಿಶೇಷ ತಂಡ ರಚನೆ ಮಾಡಿದ್ದಾರೆ.
ಬೇಗೂರು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕೃಷ್ಣಕುಮಾರ್ ಅವರಿಂದ ಮೊದಲನೇ ಪ್ರಕರಣದ ತನಿಖೆ ನಡೆಯುತ್ತದೆ. ಜೈಲಿನ ಲಾನ್ನಲ್ಲಿ ಕುಳಿತು ಕಾಫಿ ಸಿಗರೇಟ್ ಸೇವನೆ, ರೌಡಿಶೀಟರ್ಗಳ ಜೊತೆ ದರ್ಶನ್ ಬೇರೆತಿದ್ದು ಹೇಗೆ ಲಾನ್ನಲ್ಲಿ ಎಲ್ಲರೂ ಒಟ್ಟಿಗೆ ಕೂರಲು ಚೇರ್ ವ್ಯವಸ್ಥೆ ಮಾಡಿದವರು ಯಾರು, ಕಾಫಿ ಮಗ್ ಹೇಗೆ ಬಂತು, ಹಾಗೂ ಜೈಲಿನಲ್ಲಿ ಸಿಗರೇಟ್, ಮದ್ಯ, ಮಾದಕವಸ್ತು ನಿಷೇಧವಿದ್ದರೂ, ಹೇಗೆ ಒಳಗೆ ಬಂತು ಅಂತ ತನಿಖೆ ನಡೆಸುತ್ತಾರೆ.
ಎರಡನೇ ಪ್ರಕರಣ: ಮೊಬೈಲ್ ಫೋನ್ನಲ್ಲಿ ಫೋಟೋ ಹಾಗೂ ವಿಡಿಯೋ ಚಿತ್ರೀಕರಣದ ಬಗ್ಗೆ ಹುಳಿಮಾವು ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಕುಮಾರಸ್ವಾಮಿ ತನಿಖೆ ನಡೆಸುತ್ತಾರೆ. ಫೋಟೋ ತೆಗೆದಿದ್ದು ಹಾಗೂ ವಿಡಿಯೋ ಕರೆ ಮಾಡಿದ್ದು ಯಾರು? ಜೈಲಿನಲ್ಲಿ ಮೊಬೈಲ್ ಬಳಕೆ ನಿಷೇಧವಿದ್ದರೂ, ಆರೋಪಿಗಳ ಕೈಗೆ ಮೊಬೈಲ್ ಸಿಕ್ಕಿದ್ದು ಹೇಗೆ.? ಒದಗಿಸಿದವರು ಯಾರು, ನೆಟ್ ಕನೆಕ್ಷನ್ ಹೇಗೆ ಬಂತು ಎಂಬೆಲ್ಲ ತನಿಖೆ ನಡೆಯುತ್ತದೆ.
Advertisement