ಮಂಗಳೂರು: ಶಾಲೆಯ ಛಾವಣಿ ಕುಸಿದು ನಾಲ್ವರು ವಿದ್ಯಾರ್ಥಿಗಳಿಗೆ ಗಾಯ

ತರಗತಿ ನಡೆಯುತ್ತಿರುವಾಗಲೇ ಶಾಲೆಯ ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಕುಸಿದ ಶಾಲೆಯ ಛಾವಣಿ
ಕುಸಿದ ಶಾಲೆಯ ಛಾವಣಿ
Updated on

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಕುಂತೂರಿನಲ್ಲಿ ಮಂಗಳವಾರ ಸರ್ಕಾರಿ ಶಾಲೆಯ ಮೇಲ್ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ತರಗತಿ ನಡೆಯುತ್ತಿರುವಾಗಲೇ ಶಾಲೆಯ ಛಾವಣಿ ಕುಸಿದು ನಾಲ್ವರು ಮಕ್ಕಳು ಗಾಯಗೊಂಡಿದ್ದಾರೆ. ಈ ವೇಳೆ ಹಲವು ಮಕ್ಕಳು ಮೈದಾನದಲ್ಲಿ ಆಟವಾಡುತ್ತಿದ್ದರು ಎಂದು ಅಧಿಕಾರಿಗಳು ಹೇಳಿದ್ದಾರೆ.

ಕಟ್ಟಡದ ದುರಸ್ತಿ ಕಾರ್ಯ ನಡೆಯುತ್ತಿದ್ದು, ಕಾಮಗಾರಿ ನಡೆಯುತ್ತಿರುವಾಗಲೇ ಮೇಲ್ಛಾವಣಿ ಕುಸಿದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುಸಿದ ಶಾಲೆಯ ಛಾವಣಿ
ಮಂಗಳೂರು: ಮಹಾತ್ಮ ಗಾಂಧೀಜಿ ಶಿಲಾನ್ಯಾಸ ನೆರವೇರಿಸಿದ್ದ ಶಾಲೆಯಲ್ಲಿ ಸಂಭ್ರಮದ ಕೃಷ್ಣ ಜನ್ಮಾಷ್ಠಮಿ

ಗಾಯಗೊಂಡ ವಿದ್ಯಾರ್ಥಿಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ದುರಸ್ತಿ ಕಾರ್ಯ ನಡೆಯುತ್ತಿದ್ದ ಕಟ್ಟಡದೊಳಗೆ ವಿದ್ಯಾರ್ಥಿಗಳನ್ನು ಕೂರಿಸಿದ ಶಿಕ್ಷಕರ ಬೇಜವಾಬ್ದಾರಿತನಕ್ಕೆ ಪೋಷಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಪೋಷಕರು ಪುತ್ತೂರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೂ ದೂರು ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com