Bengaluru: ವಾಕಿಂಗ್ ಮಾಡುತ್ತಿದ್ದ ಮಹಿಳೆ ಮೇಲೆ ಏಕಾಏಕಿ ಬೀದಿ ನಾಯಿಗಳ ದಾಳಿ, ವೃದ್ಧೆ ಸಾವು

ಜಾಲಹಳ್ಳಿಯ ಏರ್ ಫೋರ್ಸ್ ಈಸ್ಟ್ 7ನೇ ರೆಸಿಡೆನ್ಶಿಯಲ್ ಕ್ಯಾಂಪ್‌ನಲ್ಲಿರುವ ಆಟದ ಮೈದಾನದಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ಘಟನೆ ನಡೆದಿದೆ.
ನಾಯಿ ದಾಳಿಯಿಂದ ನೆಲಕ್ಕೆ ಕುಸಿದು ಬಿದ್ದಿರುವ ಮಹಿಳೆ.
ನಾಯಿ ದಾಳಿಯಿಂದ ನೆಲಕ್ಕೆ ಕುಸಿದು ಬಿದ್ದಿರುವ ಮಹಿಳೆ.
Updated on

ಬೆಂಗಳೂರು: ವಾಕಿಂಗ್ ಮಾಡುತ್ತಿದ್ದಾಗ ಬೀದಿ ನಾಯಿಗಳ ದಾಳಿಗೆ ಸಿಲುಕಿ 76 ವರ್ಷದ ವೃದ್ಧ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಜಾಲಹಳ್ಳಿ ಏರ್ಫೋರ್ಸ್ ಕ್ಯಾಂಪಸ್‌ನಲ್ಲಿ ಬುಧವಾರ ನಡೆದಿದೆ.

ರಾಜ್ ದುಲಾರಿ ಸಿನ್ಹಾ (76) ಮೃತಪಟ್ಟ ವೃದ್ಧ ಮಹಿಳೆ. ಜಾಲಹಳ್ಳಿಯ ಏರ್ ಫೋರ್ಸ್ ಈಸ್ಟ್ 7 ನೇ ರೆಸಿಡೆನ್ಶಿಯಲ್ ಕ್ಯಾಂಪ್‌ನಲ್ಲಿರುವ ಆಟದ ಮೈದಾನದಲ್ಲಿ ಬೆಳಿಗ್ಗೆ 6.30 ರ ಸುಮಾರಿಗೆ ವಾಕಿಂಗ್ ಮಾಡುತ್ತಿದ್ದಾಗ ಘಟನೆ ನಡೆದಿದೆ. ವೃದ್ಧ ಮಹಿಳೆ ಮೇಲೆ 10-12 ನಾಯಿಗಳು ಹಠಾತ್ ದಾಳಿ ನಡೆದಿದೆ.

ಮೃತ ಮಹಿಳೆಯ ಅಳಿಯ ಏರ್ಫೋರ್ಸ್‌ನಲ್ಲಿ ಕೆಲಸ ಮಾಡುತ್ತಿದ್ದರು. ಅಳಿಯ-ಮಗಳನ್ನ ಭೇಟಿಯಾಗಲು ಮಹಿಳೆ ಬಿಹಾರದಿಂದ ಬೆಂಗಳೂರಿಗೆ ಬಂದಿದ್ದರು ಎನ್ನಲಾಗಿದೆ. ಘಟನೆ ಬಳಿಕ ಮಹಿಳೆಯ ಅಳಿಯ ಆಕೆಯನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದು, ಈ ವೇಳೆ ಮಾರ್ಗದ ಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ. ಈ ಸಂಬಂಧ ಗಂಗಮ್ಮ ಗುಡಿ ಪೊಲೀಸ್ ಠಾಣೆಯಲ್ಲಿ ಅಸ್ವಾಭಾವಿಕ ಸಾವು ಪ್ರಕರಣ ದಾಖಲಾಗಿದೆ.

ನಾಯಿ ದಾಳಿಯಿಂದ ನೆಲಕ್ಕೆ ಕುಸಿದು ಬಿದ್ದಿರುವ ಮಹಿಳೆ.
ಬೆಂಗಳೂರು: ಎಂಟು ವರ್ಷದ ಬಾಲಕಿ ಮೇಲೆ ಬೀದಿ ನಾಯಿ ದಾಳಿ, ಬಿಡಿಸಲು ಬಂದ ತಂದೆಗೂ ಕಚ್ಚಿದ ನಾಯಿ

ಈ ನಡುವೆ ಪ್ರತ್ಯಕ್ಷದರ್ಶಿಯೊಬ್ಬರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಮಹಿಳೆಯೊಬ್ಬರ ಮೇಲೆ 10ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ನಡೆಸುತ್ತಿದ್ದವು. ದೊಡ್ಡ ತಡಂ ಗೋಡೆಯಿದ್ದ ಕಾರಣ ಅವರ ಸಹಾಯಕ್ಕೆ ಹೋಗಲು ಸಾಧ್ಯವಾಗಲಿಲ್ಲ. ಅಸಹಾಯಕ ಸ್ಥಿತಿಯಲ್ಲಿದ್ದ ನಾನು ಸಹಾಯ ಮಾಡುವಂತಂ ಇತರರಿಗಾಗಿ ಕಿರುಚಿದ್ದೆ. ಬಳಿಕ ಕೆಲವರು ಅವರನ್ನು ಆಸ್ಪತ್ರೆಗೆ ಕರೆದೊಯ್ದರೂ ಪ್ರಯೋಜನವಾಗಲಿಲ್ಲ. ತಪ್ಪಿತಸ್ಥ ಭಾವನೆ ನನ್ನನ್ನು ಕಾಡುತ್ತಿದೆ ಎಂದು ಹೇಳಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com