ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರ ಜೊತೆಗೆ ಚರ್ಚೆ- ಸಿಎಂ ಸಿದ್ದರಾಮಯ್ಯ

ಬಿಜೆಪಿಯ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಪರಿಶಿಷ್ಟ ಸಮುದಾಯದ ಶಾಸಕರು ಮತ್ತು ಮುಖಂಡರ ನಿಯೋಗದೊಂದಿಗೆ
ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಪರಿಶಿಷ್ಟ ಸಮುದಾಯದ ಶಾಸಕರು ಮತ್ತು ಮುಖಂಡರ ನಿಯೋಗದೊಂದಿಗೆ
Updated on

ಬೆಂಗಳೂರು: ಪರಿಶಿಷ್ಟ ಜಾತಿ ಸಮುದಾಯಕ್ಕೆ ಒಳಮೀಸಲಾತಿ ಕಲ್ಪಿಸಲು ಬದ್ಧನಾಗಿದ್ದು, ಇದರ ಬಗ್ಗೆ ಯಾವುದೇ ಅನುಮಾನ, ಅಪನಂಬಿಕೆ ಬೇಡ. ಈ ಕುರಿತ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆ ಕಾನೂನು ತಜ್ಞರು ಮತ್ತು ಸಮುದಾಯದ ನಾಯಕರ ಜೊತೆ ಚರ್ಚೆ ನಡೆಸಿ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಪರಿಶಿಷ್ಟ ಸಮುದಾಯದ ಶಾಸಕರು ಮತ್ತು ಮುಖಂಡರ ನಿಯೋಗಕ್ಕೆ ಬುಧವಾರ ತಿಳಿಸಿದ್ದಾರೆ.

ಸಚಿವರಾದ ಕೆ.ಹೆಚ್.ಮುನಿಯಪ್ಪ, ಆರ್.ಬಿ.ತಿಮ್ಮಾಪುರ್ ಮತ್ತು ಮಾಜಿ ಸಚಿವ ಹೆಚ್.ಆಂಜನೇಯ ಹಾಗೂ ಮಾಜಿ ರಾಜ್ಯಸಭಾ ಸದಸ್ಯರಾದ ಎಲ್. ಹನುಮಂತಯ್ಯ ನೇತೃತ್ವದ ದಲಿತ ಶಾಸಕರು ಹಾಗೂ ಮುಖಂಡರ ನಿಯೋಗ ಮುಖ್ಯಮಂತ್ರಿಯನ್ನು ಭೇಟಿಯಾಗಿ ಒಳ ಮೀಸಲಾತಿ ಜಾರಿ ಸಂಬಂಧ ಚರ್ಚೆ ನಡೆಸಿದರು. ಒಳಮೀಸಲಾತಿ ಜಾರಿ ವಿಚಾರದಲ್ಲಿ ನನ್ನ ಬದ್ಧತೆಯನ್ನು ಅವರಿಗೆ ತಿಳಿಸಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಒಳ ಮೀಸಲಾತಿ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪನ್ನು ಸ್ವಾಗತಿಸುತ್ತೇನೆ. ನಾನು ಇದರ ಪರವಾಗಿದ್ದು, ಇದರಲ್ಲಿ ಗೊಂದಲ ಇಲ್ಲವೇ ಇಲ್ಲ. ಮೀಸಲಾತಿ ನ್ಯಾಯಯುತ ಹಂಚಿಕೆಗೆ ಒಳಮೀಸಲಾತಿ ಅಗತ್ಯ ಎನ್ನುವುದು ಇತ್ತೀಚಿನ ದಿನಗಳಲ್ಲಿ ಎಲ್ಲರಿಗೂ ಅರಿವಾಗಿದೆ. ಸುಪ್ರೀಂ ಕೋರ್ಟ್ ತೀರ್ಪು ಕೂಡಾ ಇದೇ ಅಭಿಪ್ರಾಯವನ್ನು ಹೊಂದಿದೆ ಎಂದರು.

ಸುಪ್ರೀಂ ಕೋರ್ಟ್ ತೀರ್ಪಿನಲ್ಲಿ ಕೆನೆಪದರದ ವಿಚಾರ ಪ್ರಸ್ತಾವವಾಗಿರುವುದು ಕೆಲವರಲ್ಲಿ ಗೊಂದಲ ಉಂಟು ಮಾಡಿದೆ. ನ್ಯಾಯಾಲಯದ ತೀರ್ಪಿನ ವಿಶ್ಲೇಷಣೆಗೆ ಹೋಗುವುದಿಲ್ಲ. ನಾನು ಅರ್ಥಮಾಡಿಕೊಂಡಂತೆ ಒಳ ಮೀಸಲಾತಿ ಜಾರಿಗೊಳಿಸಲು ಕೆನೆಪದರದ ವಿಚಾರ ಅಡ್ಡಿಯಾಗಲಾರದು. ಕೆನೆಪದರದ ಬಗ್ಗೆ ಇಡೀ ದಲಿತ ಸಮುದಾಯದ ನಿಲುವೇ ನನ್ನ ನಿಲುವೂ ಆಗಿದೆ ಎಂದಿದ್ದಾರೆ.

ಬಿಜೆಪಿಯ ಕೆಲವು ನಾಯಕರು ಅನಗತ್ಯವಾಗಿ ಊಹಾಪೋಹಗಳ ಮೂಲಕ ಒಳಮೀಸಲಾತಿ ವಿಷಯವನ್ನು ಮುಂದಿಟ್ಟುಕೊಂಡು ನಮ್ಮ ಸರ್ಕಾರದ ವಿರುದ್ಧ ದಲಿತರನ್ನು ಎತ್ತಿಕಟ್ಟುವ ಕುಟಿಲ ಪ್ರಯತ್ನ ನಡೆಸುತ್ತಿದ್ದಾರೆ. ಸಾಮಾಜಿಕ ನ್ಯಾಯದ ವಿರೋಧಿಗಳಾದ ಈ ಬಿಜೆಪಿ ನಾಯಕರ ಈ ಕುಟಿಲತನವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ದಲಿತ ಸಮುದಾಯಕ್ಕೆ ಇದೆ ಎಂಬುದನ್ನು ತಿಳಿದುಕೊಂಡಿರುವುದಾಗಿ ಅವರು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ, ಪಕ್ಷದ ಪರಿಶಿಷ್ಟ ಸಮುದಾಯದ ಶಾಸಕರು ಮತ್ತು ಮುಖಂಡರ ನಿಯೋಗದೊಂದಿಗೆ
SC, ST ಒಳ ಮೀಸಲಾತಿ: ಸುಪ್ರೀಂ ಕೋರ್ಟ್ ತೀರ್ಪು ಐತಿಹಾಸಿಕ- ಸಿಎಂ ಸಿದ್ದರಾಮಯ್ಯ

ಸಾಮಾಜಿಕವಾಗಿ ಮತ್ತು ಶೈಕ್ಷಣಿಕವಾಗಿ ಹೆಚ್ಚು ಹಿಂದುಳಿದಿರುವ ಜಾತಿಗಳ ಉನ್ನತಿಗಾಗಿ ಮೀಸಲಾತಿ ನೀಡಲು ಪರಿಶಿಷ್ಟ ಸಮುದಾಯಗಳಲ್ಲಿ ಒಳ ಮೀಸಲಾತಿ ನೀಡಲು ರಾಜ್ಯಗಳಿಗೆ ಸಂವಿಧಾನಾತ್ಮಕವಾಗಿ ಅಧಿಕಾರವಿದೆ ಎಂದು ಆಗಸ್ಟ್ 1 ರಂದು ನೀಡಿದ ತೀರ್ಪಿನಲ್ಲಿ ಸುಪ್ರೀಂ ಕೋರ್ಟ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com