ಜೈಲಿನಲ್ಲಿ ರಾಜಾತಿಥ್ಯ ಸಿಗುತ್ತಿರುವ ವಿಷಯವಾಗಿ ಚರ್ಚೆಯಲ್ಲಿದ್ದು, ಬಳ್ಳಾರಿಯ ಜೈಲಿಗೆ ಸ್ಥಳಾಂತರಗೊಳ್ಳುತ್ತಿರುವ ನಟ ದರ್ಶನ್ ನ್ಯಾಯಾಂಗ ಬಂಧನದ ಅವಧಿ ಮತ್ತೆ ವಿಸ್ತರಣೆಯಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಪ್ರಮುಖ ಆರೋಪಿಯಾಗಿದ್ದು, ಆತನ ನ್ಯಾಯಾಂಗ ಬಂಧನದ ಅವಧಿಯನ್ನು ಕೋರ್ಟ್ ಮತ್ತೆ 13 ದಿನಗಳ ಕಾಲ ವಿಸ್ತರಿಸಿದೆ.
ನಟ ದರ್ಶನ್ ಸೇರಿ ಎಲ್ಲಾ ಆರೋಪಿಗಳನ್ನು 24ನೇ ಎಸಿಎಂಎಂ ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಕೋರ್ಟ್ ಸೆಪ್ಟಂಬರ್ 9ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಇಂದು ದರ್ಶನ್ ನ್ನು ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಸ್ಥಳಾಂತರ ಮಾಡಲಾಗುತ್ತದೆ.
Advertisement