ವಿಶ್ವ ಕೌಶಲ್ಯ ಸ್ಪರ್ಧೆಗೆ ಭಾರತೀಯ ತಂಡದ ಭಾಗವಾಗಿ ರಾಜ್ಯದ 9 ವಿದ್ಯಾರ್ಥಿಗಳು ಆಯ್ಕೆ

ವಿದ್ಯಾರ್ಥಿಗಳು ಫ್ರಾನ್ಸ್‌ಗೆ ಪ್ರಯಾಣ ಬೆಳೆಸುವ ಮೊದಲು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರನ್ನು ಭೇಟಿಯಾದರು.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಬೆಂಗಳೂರು: ಫ್ರಾನ್ಸ್‌ನ ಲಿಯಾನ್‌ನಲ್ಲಿ ನಡೆಯುತ್ತಿರುವ 47ನೇ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ(ಕೆಎಸ್‌ಡಿಸಿ) ರಾಜ್ಯದ ಒಂಬತ್ತು ವಿದ್ಯಾರ್ಥಿಗಳನ್ನು ಆಯ್ಕೆ ಮಾಡಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.

ಈ ವಿದ್ಯಾರ್ಥಿಗಳು ಫ್ರಾನ್ಸ್‌ಗೆ ಪ್ರಯಾಣ ಬೆಳೆಸುವ ಮೊದಲು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರನ್ನು ಭೇಟಿಯಾದರು.

ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡು ತಮ್ಮ ಕೌಶಲ್ಯವನ್ನು ಪ್ರದರ್ಶಿಸಿ ಪದಕಗಳನ್ನು ಗೆಲ್ಲುವ ಮೂಲಕ ರಾಜ್ಯ ಮತ್ತು ರಾಷ್ಟ್ರಕ್ಕೆ ಕೀರ್ತಿ ತರುವಂತೆ ಶರಣ ಪ್ರಕಾಶ್ ಪಾಟೀಲ್ ಅವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.

ಆಯ್ಕೆಯಾದ ವಿದ್ಯಾರ್ಥಿಗಳು ಪ್ರಸ್ತುತ ಕರ್ನಾಟಕದ ವಿವಿಧ ಪ್ರದೇಶಗಳಲ್ಲಿ ಐಟಿಐ, ಡಿಪ್ಲೊಮಾ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಮಾಡುತ್ತಿದ್ದಾರೆ ಎಂದು ಸಚಿವರ ಕಚೇರಿಯ ಪ್ರಕಟಣೆ ತಿಳಿಸಿದೆ.

ಸಾಂದರ್ಭಿಕ ಚಿತ್ರ
Meta ಪಾಲುದಾರಿಕೆಯಲ್ಲಿ ಸರ್ಕಾರದಿಂದ 10 ಲಕ್ಷ ವಿದ್ಯಾರ್ಥಿಗಳಿಗೆ ಡಿಜಿಟಲ್ ಸುರಕ್ಷತೆ, AR-VR ಕೌಶಲ್ಯ ತರಬೇತಿ

ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ನಿಗಮವು(NSDC) ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸುವ ಅಭ್ಯರ್ಥಿಗಳನ್ನು ಭಾರತ ಕೌಶಲ್ಯ ಸ್ಪರ್ಧೆಯನ್ನು ಆಯೋಜಿಸುತ್ತದೆ. ಅದರಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳು ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ ಭಾಗವಹಿಸುತ್ತಾರೆ.

ಕಳೆದ ಮೇ 15 ರಿಂದ 19 ರವರೆಗೆ ದೆಹಲಿಯಲ್ಲಿ ನಡೆದ ಭಾರತ ಕೌಶಲ್ಯ ಸ್ಪರ್ಧೆಯಲ್ಲಿ ಕರ್ನಾಟಕ ಎರಡನೇ ಸ್ಥಾನವನ್ನು ಪಡೆದುಕೊಂಡಿದೆ ಎಂದು ಪ್ರಕಟಣೆ ತಿಳಿಸಿದೆ.

ಫ್ರಾನ್ಸ್‌ನ ಲಿಯಾನ್‌ನಲ್ಲಿ ಸೆಪ್ಟೆಂಬರ್ 10 ರಿಂದ 15 ರವರೆಗೆ ನಡೆಯಲಿರುವ ವಿಶ್ವ ಕೌಶಲ್ಯ ಸ್ಪರ್ಧೆಯಲ್ಲಿ 22 ವರ್ಷಕ್ಕಿಂತ ಕಡಿಮೆ ವಯಸ್ಸಿನ 1,000 ಕ್ಕೂ ಹೆಚ್ಚು ವಿದ್ಯಾರ್ಥಿಗಳು 61 ಕ್ಕೂ ಹೆಚ್ಚು ಕೌಶಲ್ಯ ವಿಭಾಗಗಳಲ್ಲಿ ಸ್ಪರ್ಧಿಸುತ್ತಾರೆ ಎಂದು ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com