ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: 'ದಾಸ'ನ ನೋಡಲು ಬಂದಿದ್ದ ಅಭಿಮಾನಿಗಳಿಗೆ ಪೊಲೀಸರ ಲಾಠಿ ರುಚಿ!

ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ.
ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: 'ದಾಸ'ನ ನೋಡಲು ಬಂದಿದ್ದ ಅಭಿಮಾನಿಗಳಿಗೆ ಪೊಲೀಸರ ಲಾಠಿ ರುಚಿ!
Updated on

ಬಳ್ಳಾರಿ: ಬೆಂಗಳೂರು ಪರಪ್ಪನ ಅಗ್ರಹಾರದಲ್ಲಿ ವಿಶೇಷ ರಾಜಾತಿಥ್ಯ ಪಡೆಯುತ್ತಿದ್ದ ಆರೋಪದ ಮೇಲೆ ಶಿಫ್ಟ್ ಆದ ಅಭಿಮಾನಿಗಳ ಪಾಲಿನ 'ದಾಸ' ದರ್ಶನ್ ಕೊನೆಗೂ ಬಳ್ಳಾರಿ ಸೆಂಟ್ರಲ್ ಜೈಲಿಗೆ ಶಿಫ್ಟ್ ಆಗಿದ್ದಾರೆ. ಇಂದು ಗುರುವಾರ ಬೆಳಗ್ಗೆ 10 ಗಂಟೆ ಸುಮಾರಿಗೆ ಅವರು ಬಳ್ಳಾರಿ ಕೇಂದ್ರ ಕಾರಾಗೃಹವನ್ನು ಸಾಮಾನ್ಯ ಕೈದಿಯಂತೆ ಪ್ರವೇಶಿಸಿದ್ದಾರೆ.

ಕಪ್ಪು ಟೀ ಶರ್ಟ್ ತೊಟ್ಟು, ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬೆಡ್ ಶೀಟ್ , ಬಲಗೈಯಲ್ಲಿ ನೀರಿನ ಬಾಟಲ್ ಹಿಡಿದುಕೊಂಡು ದರ್ಶನ್ ಜೈಲಿನೊಳಗೆ ಪ್ರವೇಶಿಸಿದ್ದಾರೆ. ಮುಂಜಾನೆ 4.30ರ ಸುಮಾರಿಗೆ ಬೆಂಗಳೂರಿನ ಕೇಂದ್ರ ಕಾರಾಗೃಹದಿಂದ ಅವರನ್ನು ಕರೆದುಕೊಂಡು ಹೋಗಲಾಯಿತು. ಸುಮಾರು ಐದೂವರೆ ಗಂಟೆಗಳ ಪ್ರಯಾಣದ ಬಳಿಕ ಅವರನ್ನು ಬಳ್ಳಾರಿಗೆ ತಲುಪಿದ್ದಾರೆ.

ಬಳ್ಳಾರಿ ಕಾರಾಗೃಹದ ಸೆಲ್ ನಂಬರ್ 15ರಲ್ಲಿ ಅವರನ್ನು ಇಡಲಾಗುತ್ತಿದೆ.

ಅಭಿಮಾನಿಗಳಿಗೆ ಪೊಲೀಸರಿಂದ ಲಾಠಿ ರುಚಿ: ಹೇಳಿಕೇಳಿ ಉತ್ತರ ಕರ್ನಾಟಕ ಭಾಗದಲ್ಲಿ ನಟ ದರ್ಶನ್ ಗೆ ಸಾಕಷ್ಟು ಅಭಿಮಾನಿಗಳಿದ್ದಾರೆ. ತಮ್ಮ ನೆಚ್ಚಿನ ನಟ ಬರುತ್ತಿದ್ದಾರೆ ಎಂದು ಅಭಿಮಾನಿಗಳು ಕಾರಾಗೃಹದ ಪಕ್ಕ ಬೆಳಗ್ಗೆಯಿಂದಲೇ ಕಾದುಕುಳಿತಿದ್ದರು. ಅಲ್ಲಿ ಸೇರಿದ್ದ ಜನರನ್ನು, ಅಭಿಮಾನಿಗಳನ್ನು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿ ಚದುರಿಸಿದರು.

ಎಡಗೈಗೆ ಕ್ರೇಪ್ ಬ್ಯಾಂಡ್ ಧರಿಸಿ ಬಳ್ಳಾರಿ ಜೈಲಿಗೆ ದರ್ಶನ್ ಎಂಟ್ರಿ: 'ದಾಸ'ನ ನೋಡಲು ಬಂದಿದ್ದ ಅಭಿಮಾನಿಗಳಿಗೆ ಪೊಲೀಸರ ಲಾಠಿ ರುಚಿ!
ನ್ಯಾಯಾಂಗ ಬಂಧನ ವಿಸ್ತರಣೆ: ನಟ ದರ್ಶನ್ ಗೆ ಸೆ.9ರವರೆಗೆ ಜೈಲೇ ಗತಿ!

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com