ಮಂಗಳೂರು: ಕಡಲನ್ನು ಸೇರುತ್ತಿರುವ ಮತ್ತು ಕಡಲ ತೀರವನ್ನು ಆವರಿಸಿರುವ ಪ್ಲಾಸ್ಟಿಕ್ ತ್ಯಾಜ್ಯ ಸಮುದ್ರವನ್ನು ಸೇರದಂತೆ ತಡೆಯುವ ಮತ್ತು ಪಶ್ಚಿಮಘಟ್ಟದ ಜೀವವೈವಿಧ್ಯ ಸಂರಕ್ಷಿಸುವ ನಿಟ್ಟಿನಲ್ಲಿ ರಾಜ್ಯದ 320-ಕಿಮೀ ಕರಾವಳಿ ಪ್ರದೇಶವನ್ನ ಪ್ಲಾಸ್ಟಿಕ್ ತ್ಯಾಜ್ಯ ಮುಕ್ತಗೊಳಿಸಲು ವಿಶ್ವಬ್ಯಾಂಕ್ 840 ಕೋಟಿ ರೂಪಾಯಿಗಳ ಯೋಜನೆಗೆ ಅನುಮೋದನೆ ನೀಡಿದೆ.
ಕರ್ನಾಟಕ ಸ್ಟ್ರೆಥನಿಂಗ್ ಆಫ್ ಕೋಸ್ಟಲ್ ರೆಸಿಲಿಯನ್ಸ್ ಎಕಾನಮಿ (ಕೆ-ಶೋರ್) ಯೋಜನೆಯಡಿ ಅನುಮೋದನೆ ನೀಡಿದ್ದು ಅರಣ್ಯ, ಮೀನುಗಾರಿಕೆ ಮತ್ತು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ (RDPR) ಇಲಾಖೆಗಳು ಮಾಲಿನ್ಯ ತಡೆದುಕೊಳ್ಳುವಂತೆ ಕರಾವಳಿಯ ಸಾಮರ್ಥ್ಯವನ್ನು ಸುಧಾರಿಸಲು ಮತ್ತು ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ವಿವಿಧ ಯೋಜನೆಗಳನ್ನು ಜಾರಿಗೆ ತರಲಿವೆ. ಈ ಯೋಜನೆಯು ಸಮುದ್ರ ಸವೆತ ಮತ್ತು ಸಮುದ್ರ ಸಂರಕ್ಷಣೆ ಮಾಡುವ ಉದ್ದೇಶ ಹೊಂದಿದೆ, ಇದು ಕರಾವಳಿಯುದ್ದಕ್ಕೂ ಆಲಿವ್ ರಿಡ್ಲಿ ಆಮೆಗಳು ಮತ್ತು ಡಾಲ್ಫಿನ್‌ಗಳ ಸಂರಕ್ಷಣೆಗೆ ಒತ್ತು ನೀಡುತ್ತದೆ ಎಂದು ನಿರೀಕ್ಷಿಸಲಾಗಿದೆ.
ಮಂಗಳೂರು ವೃತ್ತದ ಅರಣ್ಯ ಸಂರಕ್ಷಣಾಧಿಕಾರಿ ಡಾ.ಕೆ ಕರಿಕಾಳನ್ ಮಾತನಾಡಿ, ಈ ಯೋಜನೆಯಡಿ ಅರಣ್ಯ ಇಲಾಖೆಯು ಮ್ಯಾಂಗ್ರೋವ್ ಕೃಷಿ, ಬಿದಿರು ಮತ್ತು ಕಬ್ಬಿನ ಸಸಿಗಳನ್ನು ಕರಾವಳಿಯ ನದಿಮುಖಜ ಭೂಮಿಗಳು ಹಾಗೂ ತೀರಪ್ರದೇಶಗಳಲ್ಲಿ ಸಸ್ಯ ಬಲೆಯಾಗಿ ಕಾರ್ಯನಿರ್ವಹಿಸುತ್ತದೆ. ಪಶ್ಚಿಮ ಘಟ್ಟಗಳಲ್ಲಿ ಹುಟ್ಟಿ ಅರಬ್ಬಿ ಸಮುದ್ರವನ್ನು ಸೇರುವ 16 ನದಿಗಳ ದಡದಲ್ಲಿ ಮಣ್ಣಿನ ತೇವಾಂಶದ ಕಾಮಗಾರಿ ಕೈಗೊಳ್ಳಲಿದೆ. ನದೀಮುಖಗಳಲ್ಲಿ, ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಲು ಕಸದ ತಡೆಗೋಡೆಗಳನ್ನು ಸ್ಥಾಪಿಸಲಾಗುವುದು ಮತ್ತು ಮೀನುಗಾರರು ಮತ್ತು ಇತರ ಸ್ಥಳೀಯ ಸಮುದಾಯಗಳಿಂದ ಬೀಚ್ ಸ್ವಚ್ಛಗೊಳಿಸುವ ಕೆಲಸವನ್ನು ಮಾಡಿಸಲಾಗುತ್ತದೆ.
ಇನ್ನುಳಿದಂತೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ, ಧರ್ಮಸ್ಥಳ, ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನ, ಉಡುಪಿಯ ಶ್ರೀಕೃಷ್ಣ ದೇವಸ್ಥಾನ, ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಮುಂತಾದ ಯಾತ್ರಾ ಕೇಂದ್ರಗಳತ್ತ ಗಮನ ಹರಿಸಲಾಗುವುದು.
ಕ್ಯಾರಿ ಬ್ಯಾಗ್‌ಗಳಂತಹ ಪ್ಲಾಸ್ಟಿಕ್ ವಸ್ತುಗಳ ಬಳಕೆಗೆ ಪರ್ಯಾವಾದದ್ದನ್ನು ಹುಡುಕುವು ಅಗತ್ಯವಿದೆ. ಪೂಜಾ ಸ್ಥಳಗಳಿಗೆ ಭೇಟಿ ನೀಡುವ ಜನರಲ್ಲಿ ಜಾಗೃತಿ ಮೂಡಿಸಲು ಅಧಿಕಾರಿಗಳು ವಿವಿಧ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಿದ್ದಾರೆ. ಟ್ರೆಕ್ಕಿಂಗ್ ಮಾರ್ಗಗಳು ಮತ್ತು ಅರಣ್ಯಗಳಲ್ಲಿ, ಪ್ಲಾಸ್ಟಿಕ್ ಬಾಟಲಿಗಳು ಮತ್ತು ಇತರ ತ್ಯಾಜ್ಯವನ್ನು ಪ್ರವೇಶ ಮತ್ತು ನಿರ್ಗಮನ ಸ್ಥಳಗಳಲ್ಲಿ ಸಂಗ್ರಹಿಸಲಾಗುತ್ತದೆ. ವಿವಿಧೆಡೆ ತೊಟ್ಟಿಗಳನ್ನು ಸ್ಥಾಪಿಸಲಾಗುತ್ತದೆ. ವಿವಿಧ ಸ್ಥಳಗಳಲ್ಲಿ ಸಂಗ್ರಹಿಸಲಾದ ಪ್ಲಾಸ್ಟಿಕ್ ತ್ಯಾಜ್ಯವನ್ನು ಮೆಟೀರಿಯಲ್ಸ್ ರಿಕವರಿ ಫೆಸಿಲಿಟಿ (ಎಂಆರ್‌ಎಫ್) ಘಟಕಗಳನ್ನು ಸ್ಥಾಪಿಸುವುದರೊಂದಿಗೆ ಮರುಬಳಕೆ ಮಾಡಲಾಗುತ್ತದೆ. "ಈ ಕ್ರಮದಿಂದ ಸ್ಥಳೀಯರಿಗೆ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ಸಹಾಯ ಮಾಡುತ್ತದೆ ಎಂದು ಡಾ ಕರಿಕಾಳನ್ ಹೇಳಿದರು.
ಮುಂದಿನ ಐದು ವರ್ಷಗಳ ಅವಧಿಗೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗಿದ್ದು, ಸೆ.20ರಂದು ನವದೆಹಲಿಯಲ್ಲಿ ನಡೆಯುವ ಸಭೆಯಲ್ಲಿ ಚರ್ಚಿಸಿ, ಇದಾದ ಬಳಿಕ ವಿವಿಧ ಕಾಮಗಾರಿಗಳಿಗೆ ಟೆಂಡರ್ ಆಹ್ವಾನಿಸಲಾಗುವುದು ಎಂದರು.
Advertisement